ನೂತನ ಹೈಕೋರ್ಟ್ ಪೀಠ ಸ್ಥಾಪನೆ ಕುರಿತು ಪರಿಶೀಲಿಸಲು ಸಮಿತಿ ರಚನೆ

Photo credit: PTI
ಬೆಂಗಳೂರು: ಮಂಗಳೂರು/ಉಡುಪಿ(ಕರಾವಳಿ ಕರ್ನಾಟಕ ಪ್ರದೇಶ), ಶಿವಮೊಗ್ಗ/ಚಿಕ್ಕಮಗಳೂರು/ಕೊಡಗು-ಮಡಿಕೇರಿ/ಹಾಸನ/ದಾವಣಗೆರೆ/ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೈಕೋರ್ಟ್ ನ ಸರ್ಕ್ಯೂಟ್ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಮಿತಿ ರಚಿಸಿದ್ದಾರೆ.
ಎಲ್ಲ ಸಂಬಂಧಿತ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿ ಈ ಕುರಿತು ವರದಿಯನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿಯ ಆದೇಶದ ಮೇರೆಗೆ ನ್ಯಾಯಮೂರ್ತಿಗಳಾದ ಅನು ಶಿವರಾಮನ್, ಎಸ್.ಜಿ.ಪಂಡಿತ್ ಹಾಗೂ ಮುಹಮ್ಮದ್ ನವಾಝ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್ ಎಂ.ಚಂದ್ರಶೇಖರ ರೆಡ್ಡಿ ಅಧಿಸೂಚನೆ ಹೊರಡಿಸಿದ್ದಾರೆ.
Next Story




