Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಶುರಾಮ್ ಥೀಮ್ ಪಾರ್ಕ್ | ದೇವರ...

ಪರಶುರಾಮ್ ಥೀಮ್ ಪಾರ್ಕ್ | ದೇವರ ಹೆಸರಲ್ಲಿ ದರೋಡೆ ಮಾಡಿದವರ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ13 Feb 2024 9:27 PM IST
share
ಪರಶುರಾಮ್ ಥೀಮ್ ಪಾರ್ಕ್ | ದೇವರ ಹೆಸರಲ್ಲಿ ದರೋಡೆ ಮಾಡಿದವರ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಉಡುಪಿ ಪರುಶರಾಮ ಮೂರ್ತಿಯನ್ನು ಅರ್ಧ ಕಂಚು, ಅರ್ಧ ಪೈಬರ್ ನಲ್ಲಿ ಮಾಡಿದ್ದಾರೆ. ಹೀಗಾಗಿ ದೇವರ ಹೆಸರಿನಲ್ಲಿ ದರೋಡೆ ಮಾಡಿದವರನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿಸ್ಥತರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಮಂಗಳವಾರ ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್‍ನ ಸದಸ್ಯ ಯು.ಬಿ.ವೆಂಕಟೇಶ್ ವಿಷಯ ಪ್ರಸ್ತಾಪಿಸಿ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಲಾದ ದೋಷಪೂರಿತ ಪರಶುರಾಮ ಪ್ರತಿಮೆ ಸ್ಥಾಪನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರಕಾರದ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಸಚಿವರು, ‘ಉಡುಪಿಯ ಎರ್ಲಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈಲೂರು ಬೆಟ್ಟದಲ್ಲಿ 8 ಕೋಟಿ ವೆಚ್ಚದಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ 33 ಅಡಿ ಎತ್ತರ ಹಾಗೂ 6ಅಗಲದ ಪರಶುರಾಮ್ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ 61.20 ಮೀ. ಉದ್ದ ಮತ್ತು 6.20 ಮೀ ಅಗಲ ರಸ್ತೆಯ ಕಲ್ಲು, ಪರಶುರಾಮ ಪ್ರತಿಮೆಯ ತಳಪಾಯದ ಕಾಂಕ್ರೀಟಿಕರಣ ಹಾಗೂ ಪುತ್ಥಳಿಯ ಆಂತರಿಕ ಸ್ಟ್ರಕ್ಚರಲ್ ಫ್ರೇಂ ಕೆಲಸಕ್ಕಾಗಿ 55 ಲಕ್ಷ ರೂ.ಹಣ ಒದಗಿಸಲಾಗಿದೆ ಎಂದರು.

ಉಳಿದಂತೆ ಪ್ರವಾಸೋದ್ಯಮ ಇಲಾಖೆ, ಸ್ಥಳೀಯ ಜಿಲ್ಲಾಡಳಿತ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಥೀಮ್ ಪಾರ್ಕ್ ಗೆ ಹಣ ಒದಗಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯೂ ಈ ಬಗ್ಗೆ ಮಾಹಿತಿ ಪಡೆದಿದೆ ಎಂದರು.

ಹಿಂದಿನ ಸರಕಾರದಲ್ಲಿ ಆದ ಎಡವಟ್ಟನ್ನು ಈಗ ಸರಿಪಡಿಸುತ್ತಿದ್ದೇವೆ. ಆ ಭಾಗದಲ್ಲಿ ದೈವದ ಬಗ್ಗೆ ಹೆಚ್ಚು ನಂಬಿಕೆ. ದೇವರ ಹೆಸರೇಳಿ ದುಡ್ಡು ಹೊಡೆಯುವ ಕೆಲಸ ಆಗಿದೆ. ದೇವರನ್ನು ಹೊತ್ತುಕೊಂಡು ಹೋಗುವವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ. ನಿಜವಾದ ಕಳ್ಳರು ಯಾರು ಎಂದು ತಿಳಿಸಿದೆ ಎಂದು ಪರೋಕ್ಷವಾಗಿ ಬಿಜೆಪಿ ಸದಸ್ಯರನ್ನು ಸಚಿವರು ಕುಟುಕಿದರು.

ನಮ್ಮ ಸರಕಾರದ ಮೇಲೆ ಆರೋಪ ಬಂದಿದ್ದಕ್ಕೆ ಹೇಳುತ್ತಿದ್ದೇನೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಈಗಾಗಲೇ ಮುಖ್ಯಮಂತ್ರಿ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ. ತನಿಖೆ ನಡೆದು, ಕ್ರಮ ಜರುಗಿಸಲಾಗುವುದು. ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಸಚಿವರ ಹೇಳಿಕೆಗೆ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ, ‘ನಾವು ಈಗಲೂ ದೇವರನ್ನು ಹೊತ್ತುಕೊಂಡು ಹೋಗುವವರೇ, ತನಿಖೆ ನಡೆಸುತ್ತೇವೆ ಎಂದು ಮಾತ್ರ ಹೇಳಿ ಎಂದರು. ಇದಕ್ಕೆ ಬಿಜೆಪಿಯ ಕೇಶವ ಪ್ರಸಾದ್, ಗೋವಿಂದ ರಾಜು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಎಲ್ಲರನ್ನೂ ಸಮಾಧಾನಪಡಿಸಿದರು.

ಯು.ಬಿ.ವೆಂಕಟೇಶ್ ಮಾತನಾಡಿ, ‘14 ಕೋಟಿ ರೂ.ಅನಮೋದನೆ ಪಡೆದು ತರಾತುರಿಯಲ್ಲಿ ಒಂದು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಮಾಡಿ ಉದ್ಘಾಟಿಸುವ ಅಗತ್ಯ ಏನಿತ್ತು. ಇದಕ್ಕೆ ಜಿಲ್ಲಾಡಳಿತದ ವೈಫಲ್ಯ ಕಾರಣ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ಆಗಬೇಕು. ಪಾರ್ಕ್ ನಿರ್ಮಾಣ ಮಾಡುವ ನೆಪದಲ್ಲಿ ದರೋಡೆ ಮಾಡಲಾಗಿದೆ ಎಂದು ಪರೋಕ್ಷವಾಗಿ ಹಿಂದಿನ ಸರಕಾರದ ವಿರುದ್ಧ ಹರಿಹಾಯ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X