Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಸತ್‌ ಭದ್ರತಾ ವೈಫಲ್ಯ| ತನಿಖೆ ನಡೆಸಲು...

ಸಂಸತ್‌ ಭದ್ರತಾ ವೈಫಲ್ಯ| ತನಿಖೆ ನಡೆಸಲು ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

"ಸಂಸದರನ್ನು ವಜಾಗೊಳಿಸಿ ತನಿಖೆಗೊಳಪಡಿಸಿ"

ವಾರ್ತಾಭಾರತಿವಾರ್ತಾಭಾರತಿ13 Dec 2023 5:49 PM IST
share
ಸಂಸತ್‌ ಭದ್ರತಾ ವೈಫಲ್ಯ| ತನಿಖೆ ನಡೆಸಲು ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಬೆಂಗಳೂರು: ಸಂಸತ್‌ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರಸ್‌, ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಆದ್ದರಿಂದ ಲೋಕಸಭಾ ಸ್ಫೀಕರ್‌ ಓಂ ಬಿರ್ಲಾ ಅವರು ಕೂಡಲೇ ಪ್ರತಾಪ್ ಸಿಂಹರನ್ನು ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ಒಪಡಿಸಬೇಕು ಎಂದು ಆಗ್ರಹಿಸಿದೆ.

ಈ ಬಗ್ಗೆ ʼಎಕ್ಸ್‌ʼ ನಲ್ಲಿ ಸರಣಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್‌, " ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ" ಎಂದು ಟೀಕಿಸಿದೆ.

"ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಫೀಕರ್‌ ಓಂ ಬಿರ್ಲಾ ಅವರು ಅವರು ಕೂಡಲೇ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು" ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ತನ್ನ ಇನ್ನೊಂದು ಪೋಸ್ಟ್‌ ನಲ್ಲಿ “300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ" ಎಂದು ಪ್ರಶ್ನಿಸಿದೆ.

ʼಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆʼ ಎಂದು ಹೇಳಿದೆ.

" ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್‌ ಸಿಂಹ ಅವರ ಆಪ್ತ ವಲಯದವರೇ. ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ʼಈ ಎಲ್ಲಾ ಸಂಗತಿಗಳ ತನಿಖೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ.ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯಲ್ಲಿ ಲೋಪವೂ ನಡೆಯುತ್ತಿರುವುದೇಕೆ ಎಂದು ತನಿಖೆಗೆ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X