Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೂರ್ಣಗೊಂಡ ಕಾಮಗಾರಿಗಳ ಗುತ್ತಿಗೆದಾರರಿಗೆ...

ಪೂರ್ಣಗೊಂಡ ಕಾಮಗಾರಿಗಳ ಗುತ್ತಿಗೆದಾರರಿಗೆ ಮಾತ್ರ ಬಿಲ್ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ವಾರ್ತಾಭಾರತಿವಾರ್ತಾಭಾರತಿ7 Aug 2023 11:42 PM IST
share
ಪೂರ್ಣಗೊಂಡ ಕಾಮಗಾರಿಗಳ ಗುತ್ತಿಗೆದಾರರಿಗೆ ಮಾತ್ರ ಬಿಲ್ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು, ಆ.7: ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾರು ಸರಿಯಾದ ರೀತಿಯಲ್ಲಿ ಕಾಮಗಾರಿ ಮಾಡಿದ್ದಾರೊ ಅವರಿಗೆ ಬಿಲ್ ಪಾವತಿ ಆಗಲಿದೆ. ಈ ಕಾಮಗಾರಿಗಳು ವ್ಯವಸ್ಥಿತ ರೂಪದಲ್ಲಿ ನಡೆಯಬೇಕು. ರಸ್ತೆ ನಿರ್ಮಾಣವಾಗದೆ ಬಿಲ್ ಪಾವತಿಸಲು ಮುಂದಾಗಿದ್ದರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಂತೆ ಅನೇಕ ಪ್ರಕರಣಗಳು ಇವೆ. ನಮ್ಮ ವಿರುದ್ಧ ಯಾರು ಎಷ್ಟು ಮಾತನಾಡುತ್ತಾರೊ ಮಾತನಾಡಲಿ. ನಾವು ಯಾರ ನಾಲಿಗೆಗೂ ಬೀಗ ಹಾಕುವುದಿಲ್ಲ ಎಂದು ತಿರುಗೇಟು ನೀಡಿದರು.

ಈ ಹಿಂದೆ ನಾವು 40 ಪರ್ಸೆಂಟ್ ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. ಇನ್ನು ಲೋಕಾಯುಕ್ತ ಸಂಸ್ಥೆ ಒಂದೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 137 ಕೋಟಿ ರೂ. ಕಾಮಗಾರಿ ಆಗದೆ ಬಿಲ್ ಪಾವತಿ ಮಾಡಲಾಗಿದೆ ಎಂದು ವರದಿ ನೀಡಿದೆ. ನಾವು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದನದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಅವರ ಸಲಹೆ, ಮಾರ್ಗದರ್ಶನದಂತೆ ನಾವು ಕ್ರಮ ಕೈಗೊಂಡು ತನಿಖೆ ಮಾಡುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಬಿಬಿಎಂಪಿ ಕಾಮಗಾರಿಗಳ ಅಕ್ರಮ ತನಿಖೆಗೆ ಎಸ್‍ಐಟಿ ರಚಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಎಸ್‍ಐಟಿ ರಚನೆ ಮಾಡಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವಾಗ ಯಾವ ಕಾಮಗಾರಿಗೆ ಟೆಂಡರ್ ಆಯಿತು, ಕಾಮಗಾರಿಗೆ ಯಾವಾಗ ಅನುಮತಿ ಸಿಕ್ಕಿತು, ಯಾವಾಗ ಕಾಮಗಾರಿ ಮುಗಿಯಿತು, ಯಾವಾಗ ಬಿಲ್ ಪಾಸ್ ಆಗಿದೆ, ಕಾಮಗಾರಿ ಗುಣಮಟ್ಟ ಹೇಗಿದೆ ಎಂದು ಪರಿಶೀಲನೆ ಮಾಡಬೇಕಿದೆ ಎಂದರು.

2 ಕೋಟಿ ರೂ.ಕಾಮಗಾರಿಯಲ್ಲಿ 1.99 ಕೋಟಿ ಬಿಲ್ ನೀಡಿದ್ದು ಕೇವಲ 1 ಲಕ್ಷ ಮಾತ್ರ ಬಾಕಿ ಉಳಿಸಿದ್ದಾರೆ. ಇಂತಹ ಸುಮಾರು 25 ಪ್ರಕರಣಗಳಿವೆ. ಈ ಬಗ್ಗೆ ನಾನು ಮಾಹಿತಿ ಪಡೆಯಬೇಕಿದೆ. ಇಂತಹ ಎಷ್ಟು ಕಾಮಗಾರಿಗಳಿವೆ ಎಂಬುದರ ಕುರಿತು ಮಾನದಂಡಗಳ ಅನುಗುಣವಾಗಿ ಅಧ್ಯಯನ ಮಾಡಿ ಅಧಿಕಾರಿಗಳು ವರದಿ ನೀಡಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಶಾಸಕರ ಸಮಸ್ಯೆ ಆಲಿಸಲು ಸಭೆ: ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೆಲವು ಜಿಲ್ಲೆಗಳ ಶಾಸಕರ ಜತೆ ಆಯಾ ಕ್ಷೇತ್ರಗಳ ವಿಚಾರವಾಗಿ ಚರ್ಚೆ ಮಾಡಿದ್ದು, ರಾಜಕೀಯವಾಗಿ ಮಾರ್ಗದರ್ಶನ ನೀಡಿದ್ದೇವೆ. ಅವರ ಅಹವಾಲುಗಳನ್ನು ಆಲಿಸಿದ್ದೇವೆ. ಇದರ ಜತೆಗೆ ನಮ್ಮ ಸರಕಾರದ ಕಾರ್ಯಕ್ರಮಗಳ ಜಾರಿ ಹಾಗೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸತತವಾಗಿ ಒಂದು ವಾರಗಳ ಕಾಲ ಈ ರೀತಿ ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಬಿಜೆಪಿ ಪಕ್ಷದ ಶಾಸಕರ ಜೊತೆಗೂ ಸಭೆ ಮಾಡುತ್ತೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮ ಶಾಸಕರಿಗೆ ಕೊಟ್ಟ ಮಾತಿನಂತೆ ಇಂದಿನಿಂದ ಸಭೆ ಮಾಡುತ್ತಿದ್ದೇವೆ. ಬೆಂಗಳೂರಿನ ಕೆಲವು ವಾರ್ಡ್ ಗಳಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರು ಇಂದು ನನ್ನನ್ನು ಭೇಟಿ ಮಾಡಿದ್ದರು. ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಸಾವಿರ ಕೋಟಿ ಬಾಕಿ ಇದ್ದರೆ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ 170 ಕೋಟಿ ಮಾತ್ರ ಬಾಕಿ ಇದೆ. ಇದೆಲ್ಲವೂ ಸತ್ಯ ಅಲ್ಲವೇ? ಮೊದಲು ನಮ್ಮ ಪಕ್ಷದ ಶಾಸಕರ ಅಹವಾಲು ಆಲಿಸುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

ಎಕ್ಸ್‍ಪ್ರೆಷನ್ ಆಫ್ ಇಂಟರೆಸ್ಟ್ ಅವಧಿ ವಿಸ್ತರಣೆ: ಬೆಂಗಳೂರಿನಲ್ಲಿ ಫ್ಲೈ ಓವರ್, ಟನಲ್ ರಸ್ತೆ ಸೇರಿದಂತೆ ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಬಹುದು ಎಂಬ ವಿಚಾರವಾಗಿ ನಾವು ಎಕ್ಸ್‍ಪ್ರೆಷನ್ ಆಫ್ ಇಂಟರೆಸ್ಟ್ ಅನ್ನು ಕರೆದಿದ್ದೆವು. ಕೇವಲ 2 ಸಂಸ್ಥೆಗಳು ಮಾತ್ರ ಮುಂದೆ ಬಂದಿದ್ದು, ಇನ್ನು ಹೆಚ್ಚಿನ ಸಂಸ್ಥೆಗಳು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇದರ ಅವಧಿಯನ್ನು ಇನ್ನು 7 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರಚನೆ, ಆರ್ಥಿಕತೆ ಸೇರಿದಂತೆ ಎಲ್ಲ ಆಯಾಮದಲ್ಲಿ ಮಾಹಿತಿ ಪಡೆಯಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಇದನ್ನು ಕರೆಯಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X