Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರದ ನಡುವೆ ರಾಜ್ಯದ ಜನ ಊಟ...

ಬರದ ನಡುವೆ ರಾಜ್ಯದ ಜನ ಊಟ ಮಾಡುತ್ತಿದ್ದಾರೆಂದರೆ ಅದಕ್ಕೆ ಕಾರಣ ಸರ್ಕಾರದ ಯೋಜನೆಗಳು, ಮೋದಿಯವರಲ್ಲ: ದಿನೇಶ್‌ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ8 Jan 2024 1:03 PM IST
share
ಬರದ ನಡುವೆ ರಾಜ್ಯದ ಜನ ಊಟ ಮಾಡುತ್ತಿದ್ದಾರೆಂದರೆ ಅದಕ್ಕೆ ಕಾರಣ ಸರ್ಕಾರದ ಯೋಜನೆಗಳು, ಮೋದಿಯವರಲ್ಲ: ದಿನೇಶ್‌ ಗುಂಡೂರಾವ್

ಬೆಂಗಳೂರು: ಭೀಕರ ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ರಾಜ್ಯ ಸರ್ಕಾರದ ಯೋಜನೆಗಳೇ ಹೊರತು, ಇವರು ಕುರುಡಾಗಿ ಆರಾಧಿಸುವ ಮೋದಿಯವರಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್ ಹೇಳಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ಸರಣಿ ಪೋಸ್ಟ್‌ ಹಂಚಿಕೊಂಡಿರುವ ಅವರು, ʼವಿಪಕ್ಷ ನಾಯಕ ಅಶೋಕ್, ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ ಎಂದು ಹೇಳಿರುವುದಕ್ಕೆ ನಾಚಿಕೆಪಡಬೇಕು. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಹೊರತಾಗಿಯೂ ಬರದಿಂದ ತತ್ತರಿಸಿರುವ ರೈತರಿಗೆ 2 ಸಾವಿರ ರೂ. ಪರಿಹಾರ ನೀಡುವ ಕೆಲಸ ಮಾಡುತ್ತಿದೆ. ರೈತರ ನೆರವಿಗಾಗಿ ಕೃಷಿ ಭಾಗ್ಯ ಜಾರಿಗೆ ತಂದಿದೆ. ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಏನು ನೆರವು ಸಿಕ್ಕಿದೆ ಎಂದು ಹೇಳುವ ಧೈರ್ಯ ಅಶೋಕ್‌ರವರಿಗಿದೆಯೇʼ ಎಂದು ಪ್ರಶ್ನಿಸಿದ್ದಾರೆ.

"ಅಶೋಕ್‌ರವರೆ, ನಾವು ಕೇಂದ್ರದ ಬಳಿ ಬಿಟ್ಟಿ ಕೊಡಿ ಎಂದು ಅಂಗಲಾಚುತ್ತಿಲ್ಲ. ನಮಗೆ ಬರಬೇಕಾದ ತೆರಿಗೆ ಅನುದಾನದ ಪಾಲು, ಬರ ಪರಿಹಾರದ ಪಾಲನ್ನು ಅಧಿಕಾರಯುತವಾಗಿ ಕೇಳುತ್ತಿದ್ದೇವೆ. ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ಕಳೆದ‌ ಒಂದು ವಾರದಿಂದ ಅನೇಕ ದಿನಪತ್ರಿಕೆಗಳಲ್ಲಿ ಸರಣಿ ವರದಿ ಪ್ರಕಟವಾಗಿದೆ. ಒಂದು ವೇಳೆ ಆ ವರದಿಗಳನ್ನು ನೀವು ಓದಿಲ್ಲವಾದರೆ, ಸಮಯಾವಕಾಶ ಮಾಡಿಕೊಂಡು ಓದಿ. ಆಗ 'ಗುಳೆ ಭಾಗ್ಯ'ದ ಕೊಡುಗೆ ಯಾರದ್ದೆಂದು ತಿಳಿಯಲಿದೆ" ಎಂದು ಟೀಕಿಸಿದ್ದಾರೆ.

ʼಅಶೋಕ್‌ರವರೆ, ಉತ್ತರ ಕುಮಾರನ ಪೌರುಷ ಒಲೆ ಮುಂದೆ ಎಂಬಂತೆ ನಮ್ಮ ಮುಂದೆ ನಿಮ್ಮ ಪೌರುಷ ತೋರಿಸಬೇಡಿ. ವಿಪಕ್ಷ ನಾಯಕನಂತಹ‌ ಜವಬ್ಧಾರಿ ಸ್ಥಾನದಲ್ಲಿದ್ದೀರಿ. ನಿಮಗೇನಾದರೂ ರಾಜ್ಯದ ರೈತರ ಬಗ್ಗೆ ಅನುಕಂಪ, ಕರುಣೆ, ಕಾಳಜಿಯಿದ್ದರೆ ಕೇಂದ್ರದಿಂದ ನಿಯಮಾನುಸಾರ ನಮಗೆ ಬರಬೇಕಾದ ಬರಪರಿಹಾರ ಕೊಡಲು ಮೋದಿಯವರಿಗೆ ಹೇಳಿ. ಇಲ್ಲವಾದರೆ ಮೋದಿಯವರ ಎದುರು ಮಾತಾಡಲು ನಿಮಗೆ ಧೈರ್ಯವಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಿ ಎಂದು ಲೇವಡಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X