Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಸಿದ್ದರಾಮಯ್ಯ ವಿರುದ್ಧ...

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ | ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ29 Aug 2024 4:17 PM IST
share
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ | ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ನೀಡಿರುವುದನ್ನು ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಿಎಂ ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಎಂ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಹಾಜರಾಗಿದ್ದರು. ದೂರುದಾರ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ, ಪ್ರದೀಪ್ ಕುಮಾರ್ ಕೂಡ ಹಾಜರಾಗಿದ್ದರು.

ಈ ವೇಳೆ ಕೆಲ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಆಕ್ಷೇಪಣೆಗೆ ನಮ್ಮ ಪ್ರತಿಕ್ರಿಯೆ ಸಲ್ಲಿಸಬೇಕಿದೆ. ಅಲ್ಲದೆ ರಾಜ್ಯಪಾಲರು ಈಗಲೂ ತಮ್ಮ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗಮನಕ್ಕೆ ತಂದರು.

ಈ ಸಂದರ್ಭ ರಾಜ್ಯಪಾಲರು ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ. ಅವಶ್ಯವಿದ್ದರೆ, ರಾಜ್ಯಪಾಲರು ತಮ್ಮ ಕಡತ ಸಲ್ಲಿಸಲು ಸಿದ್ದರಿದ್ದಾರೆ ಎಂದು ಸಾಲಿಸಿಟರ್ ಜನರಲ್ ಪರ ವಕೀಲರಿಂದ ಹೈಕೋರ್ಟ್ ಗೆ ಮಾಹಿತಿ ನೀಡಿದರು. ಅಲ್ಲದೆ ದೂರುದಾರ ಪ್ರದೀಪ್ ಕುಮಾರ್ ಕೂಡಾ ಆಕ್ಷೇಪಣೆ ಸಲ್ಲಿಸಿಲ್ಲ. ಇಬ್ಬರು ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವುದಿಲ್ಲವೆಂದು ದಾಖಲಿಸಿ ಎಂದು ಹೈಕೋರ್ಟ್‌ಗೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿ ಮಾಡಿದರು.

ಈ ವೇಳೆ ರಾಜ್ಯಪಾಲರ ಪರ ವಕೀಲರು, ರಾಜ್ಯಪಾಲರ ಆಕ್ಷೇಪಣೆಗೆ ಕಾಯದೇ ವಿಚಾರಣೆ ಮುಂದುವರಿಸಲು ಮನವಿ ಮಾಡಿದರು. ಹೀಗಾಗಿ ಕಾನೂನಿನ ಪ್ರಶ್ನೆಯಿರುವುದರಿಂದ ಆಕ್ಷೇಪಣೆ ಸಲ್ಲಿಸುವುದಿಲ್ಲ ಎಂದು ರಾಜ್ಯಪಾಲರು, ಪ್ರದೀಪ್ ಪರ ವಕೀಲರ ಹೇಳಿಕೆ ಹೈಕೋರ್ಟ್ ದಾಖಲಿಸಿದೆ.

ಈ ವೇಳೆ ವಾದ ಮುಂದುವರಿಸಿದ ಅಭಿಷೇಕ್ ಮನು ಸಿಂಘ್ವಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಪಿ.ಸಿ.ಕಾಯ್ದೆ 17 ಎ ಅಡಿ ಪೂರ್ವಾನುಮತಿ ಬೇಕು. 17 ಎ ಮಾನದಂಡ ಪಾಲನೆಯಾಗದಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ 17 ಎ ಬಗ್ಗೆ ನಾನು ವಾದಿಸಿದ್ದೆ. ಇದೊಂದೋ ಅಂಶದ ಆಧಾರದಲ್ಲಿ ರಾಜ್ಯಪಾಲರ ಆದೇಶ ರದ್ದುಪಡಿಸಬೇಕು. ಪೊಲೀಸ್ ಅಧಿಕಾರಿ ಅನುಮತಿ ಪಡೆಯದೇ ತನಿಖೆ ಮಾಡುವಂತಿಲ್ಲ. ಸಾರ್ವಜನಿಕ ಸೇವಕನ ಶಿಫಾರಸು, ನಿರ್ಧಾರಗಳ ಕುರಿತಾದ ತನಿಖೆ ಇರಬೇಕು. ಈ ಎರಡೂ ಅಂಶಗಳನ್ನು ರಾಜ್ಯಪಾಲರು ಪಾಲಿಸಿಲ್ಲ. ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನ ಆದೇಶಗಳಿವೆ. ಈ ಕುರಿತೂ ನಾನು ವಾದ ಮಂಡಿಸಲಿದ್ದೇನೆ. ಪ್ರತಿವಾದಿ ಟಿಜೆ ಅಬ್ರಹಾಂ ಸಲ್ಲಿಸಿರುವ ಆಕ್ಷೇಪಣೆ ಗಮನಿಸಬೇಕು ಎಂದರು.

17 ಎ ಅಡಿ ಪೂರ್ವಾನುಮತಿ ಬೇಕಿಲ್ಲವೆಂದು ಹೇಳಿದ್ದಾರೆ. ಇವೆಲ್ಲ ಕೇವಲ ಪ್ರಕ್ರಿಯೆಗಳಷ್ಟೇ ಎಂದಿದ್ದಾರೆ. ಹೀಗಾಗಿ ರಾಜ್ಯಪಾಲರು ಅಬ್ರಹಾಂಗೆ ದಂಡ ವಿಧಿಸಿ ದೂರು ವಜಾಗೊಳಿಸಬೇಕು. ಟಿಜೆ ಅಬ್ರಹಾಂ ದೂರು ನೀಡಿದ್ದರು. ರಾಜ್ಯಪಾಲರು 17 ಎ ಅಡಿ ಅನುಮತಿ ನೀಡಿದ್ದಾರೆ. ಆದರೆ ದೂರುದಾರ ಈಗ ಪೂರ್ವಾನುಮತಿ ಬೇಕಿಲ್ಲವೆನ್ನುತ್ತಿದ್ದಾರೆ. ಹೀಗಾಗಿ ರಾಜ್ಯಪಾಲರ ಸಮಯ ವ್ಯರ್ಥ ಮಾಡಿದ್ದಕ್ಕೆ ದಂಡ ವಿಧಿಸಬೇಕು. ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿಯನ್ನೇ ಹಿಂಪಡೆಯಬೇಕು. ರಾಜ್ಯಪಾಲರ ಮುಂದೆ ಒಂದು, ಕೋರ್ಟ್ ಮುಂದೆ ಒಂದು ಹೇಳಿಕೆ ನೀಡುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಹೀಗಾಗಿ ರಾಜ್ಯಪಾಲರ ಅನುಮತಿ ನೀಡಿಲ್ಲವೆಂದು ಕೋರ್ಟ್ ಭಾವಿಸಬೇಕು. ಟಿಜೆ ಅಬ್ರಹಾಂ ಪೊಲೀಸರಿಗೆ ನೀಡಿದ ದೂರು ಓದಿದ ಸಿಎಂ ಪರ ವಕೀಲರು ಮಾಹಿತಿ ನೀಡಿದರು. ಅಲ್ಲದೆ ಸ್ನೇಹಮಯಿ ಕೃಷ್ಣ ರಾಜ್ಯಪಾಲರಿಗೆ ದೂರು ನೀಡಿದ ಬಗ್ಗೆ ರಾಜ್ಯಪಾಲರು ಉಲ್ಲೇಖಿಸಿಲ್ಲ ಎಂದು ಸಿಂಘ್ವಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು ಇದೇ ಆರೋಪಗಳುಳ್ಳ ಎರಡು ದೂರುಗಳಿವೆ ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ ಎಂದರು. ಮತ್ತೆ ಮಧ್ಯೆ ಪ್ರವೇಶಿದ ಸಿಂಘ್ವಿ, ಜುಲೈ 31ರ ದೂರನ್ನು ರಾಜ್ಯಪಾಲರು ಉಲ್ಲೇಖಿಸಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು 17 ಎ ಅಡಿಯಲ್ಲಿ ಶೋಕಾಸ್ ನೋಟಿಸ್ ಕಡ್ಡಾಯವೇ? ಎಂದು ಪ್ರಶ್ನಿಸಿದರು.

ಶೋಕಾಸ್ ನೋಟಿಸ್ ನೀಡಿ ರಾಜ್ಯಪಾಲರೇ ಅಗತ್ಯ ಎಂದು ಒಪ್ಪಿದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ಆದರೆ ಉಳಿದ ಇಬ್ಬರ ದೂರುಗಳಿಗೆ ಸಂಬಂಧಿಸಿ ಶೋಕಾಸ್ ನೋಟಿಸ್ ನೀಡಿಲ್ಲ. ತರಾತುರಿಯಲ್ಲಿ ವಿವೇಚನೆ ಬಳಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ದೂರುದಾರರು ತಮ್ಮ ಪ್ರಮಾಣಪತ್ರದಲ್ಲಿ 17 ಎ ಬೇಕಿಲ್ಲವೆಂಬುದಕ್ಕೆ ಕಾರಣ ನೀಡಿದ್ದಾರೆ. ಸಿಎಂ ಆದೇಶ ಅಥವಾ ಶಿಫಾರಸು ಪ್ರಶ್ನಿಸಿಲ್ಲವಾದ್ದರಿಂದ 17 ಎ ಬೇಕಿಲ್ಲವೆಂದಿದ್ದಾರೆ ಎಂದು ಸಿಂಘ್ವಿ ಆರೋಪಿಸಿದರು.

10-15 ವರ್ಷ ಹಳೆಯ ಘಟನೆಗಳಿಗೆ ಈಗಿನ ಕಾನೂನು ಅನ್ವಯಿಸಲಾಗುತ್ತಿದೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಹೆಚ್ ಡಿ ಕುಮಾರಸ್ವಾಮಿ. ಇವರುಗಳ ಆರೋಪಪಟ್ಟಿ ಸಿದ್ದವಾಗಿದ್ದರೂ ರಾಜ್ಯಪಾಲರು ಅನುಮತಿ ನೀಡುತ್ತಿಲ್ಲ‌. ರಾಜ್ಯಪಾಲರು ಯಾವುದೇ ಒಂದು ಅಂಶದ ಬಗ್ಗೆಯೂ ವಿವೇಚನೆ ಬಳಸಿಲ್ಲ. ಕ್ಯಾಬಿನೆಟ್ ಸಲಹೆಯನ್ನೂ ರಾಜ್ಯಪಾಲರು ಪಾಲಿಸಿಲ್ಲ ಎಂದು ಸಿಂಘ್ವಿ ಆರೋಪಿಸಿದರು.

ಇತರೆ ವಿಚಾರಗಳಿಗೆ ಕ್ಯಾಬಿನೆಟ್ ಸೂಚನೆ ಪರಿಗಣಿಸಬೇಕು. ಆದರೆ ಸಿಎಂ ವಿರುದ್ಧದ ದೂರಿಗೆ ಕ್ಯಾಬಿನೆಟ್ ಸೂಚನೆ ಪರಿಗಣಿಸಬೇಕೇ ? - ಜಡ್ಜ್ ಪ್ರಶ್ನಿಸಿದರು. ರಾಜ್ಯಪಾಲರು ಕ್ಯಾಬಿನೆಟ್ ಸೂಚನೆ ಪರಿಗಣಿಸಬೇಕು ಎಂದು ಸಿಂಘ್ವಿ ಉತ್ತರಿಸಿದರು.

ಡಿನೋಟಿಫಿಕೇಷನ್ ಗಾಗಿ ಸಿದ್ದರಾಮಯ್ಯ ಯಾವುದೇ ಪ್ರತಿಫಲ ಪಡೆದಿಲ್ಲ. 2004 ರಲ್ಲಿ ಸಿಎಂ ಮೈದುನನಿಗೆ ಜಮೀನು ವರ್ಗಾವಣೆಯಾಯಿತು. 2005 ರಲ್ಲಿ ಭೂಮಿಯನ್ನು ಕೃಷಿಯೇತರ ಪರಿವರ್ತನೆ ಮಾಡಲಾಯಿತು. 2010 ರಲ್ಲಿ ಸಿಎಂ ಪತ್ನಿ ಭೂಮಿಯನ್ನು ಖರೀದಿ ಮಾಡಿದರು. ಜಮೀನಿಗೆ ಬದಲಿಯಾಗಿ ನಿವೇಶನ ಪಡೆದಿದ್ದಾರೆ. ಇದನ್ನು ದೊಡ್ಡ ಹಗರಣದಂತೆ ಬಿಂಬಿಸಲಾಗುತ್ತಿದೆ. ರಾಜ್ಯಪಾಲರು ತಮ್ಮ ನಿರ್ಧಾರಕ್ಕೆ ಕಾರಣಗಳನ್ನು ನೀಡಿಲ್ಲ. ಕೇವಲ 4 ಪುಟಗಳ ಅನುಮತಿಯನ್ನಷ್ಟೇ ನೀಡಿದ್ದಾರೆ. ಡಿನೋಟಿಫಿಕೇಷನ್ ಆದೇಶವನ್ನು ಈ ಹಿಂದೆಯೂ ಹಲವರು ಮಾಡಿದ್ದಾರೆ. ಯಾವ ಆಧಾರದ ಮೇಲೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ ತಿಳಿಯುತ್ತಿಲ್ಲ.

ವಾದ ಆಲಿಸಿದ ಪೀಠ ಆಗಸ್ಟ್ 31 ರಂದು ಬೆಳಗ್ಗೆ 10.30 ಕ್ಕೆ ವಿಚಾರಣೆ ಆರಂಭಿಸಲು ಹೈಕೋರ್ಟ್ ಒಪ್ಪಿಗೆ ನೀಡಿದರು. ಹೀಗಾಗಿ ಶನಿವಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ. ವಿಚಾರಣೆಯ ವೇಳೆ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಹಾಜರಿದ್ದು, ಕಲಾಪ ವೀಕ್ಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X