ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ಶುಕ್ರವಾರ ರಾತ್ರಿ ಅನುಮತಿ ನೀಡಿದ್ದಾರೆ.
ಮೂರು ದಿನಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 19 ರಂದು ಬೆಳಗ್ಗೆ 6 ಗಂಟೆಯಿಂದ ಸೆ.21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.
ಕಳೆದ ವರ್ಷದ ಹೇರಿದ್ದ ನಿರ್ಬಂಧಗಳಂತೆ ಪ್ರತಿಷ್ಠಾಪನೆಗೆ ಷರತ್ತು ಬದ್ಧ ಅನುಮತಿ ನೀಡಲಾಗಿದ್ದು, ಯಾವುದೇ ಬಾವುಟ, ಭಿತ್ತಿಪತ್ರ, ವಿವಾದಿತ ಪೋಟೋ ಪ್ರದರ್ಶನ ನಿಷೇಧಿಸಲಾಗಿದೆ ಮತ್ತು ಮನರಂಜನಾ ಕಾರ್ಯಕ್ರಮಗಳಿಗೂ ನಿರ್ಬಂಧಿಸಿ ಪಾಲಿಕೆ ಆಯುಕ್ತರು ಅನುಮತಿ ನೀಡಿದ್ದಾರೆ.
Next Story





