Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿಜೆ-ಸೌಂಡ್ ಸಿಸ್ಟಮ್ ಬಳಕೆಗೆ ನಿರ್ಬಂಧ;...

ಡಿಜೆ-ಸೌಂಡ್ ಸಿಸ್ಟಮ್ ಬಳಕೆಗೆ ನಿರ್ಬಂಧ; ಪೊಲೀಸರ ಸುತ್ತೋಲೆ ಪ್ರಶ್ನಿಸಿದ್ದ ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ23 Aug 2025 9:06 PM IST
share
ಡಿಜೆ-ಸೌಂಡ್ ಸಿಸ್ಟಮ್ ಬಳಕೆಗೆ ನಿರ್ಬಂಧ; ಪೊಲೀಸರ ಸುತ್ತೋಲೆ ಪ್ರಶ್ನಿಸಿದ್ದ ಅರ್ಜಿ ವಜಾ

ಬೆಂಗಳೂರು: ಗೌರಿ–ಗಣೇಶ ಹಬ್ಬ, ಈದ್ ಮಿಲಾದ್‌ ಮೆರವಣಿಗೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಡಿಜೆ ಹಾಗೂ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪಶ್ಚಿಮ ವಿಭಾಗದ ಜಂಟಿ ಆಯುಕ್ತರು 2025ರ ಆಗಸ್ಟ್ 14ರಂದು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ, ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘಟನೆಯ ಪದಾಧಿಕಾರಿ ಚಾಮರಾಜಪೇಟೆಯ ಶಂಕರ್‌ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೌಂಡ್ ಸಿಸ್ಟಮ್ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ವಸತಿ ಪ್ರದೇಶದಲ್ಲಿ ಶಬ್ದದ ಮಟ್ಟ ಹಗಲಿನ ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಮಟ್ಟಕ್ಕೆ ನಿರ್ಬಂಧಿಸಲಾಗಿದೆ. ಹೀಗಿರುವಾಗ ಸಾರ್ವಜನಿಕ ಡಿಜೆ ಮತ್ತು ಸೌಂಡ್ ಸಿಸ್ಟಮ್‌ನ ಬಳಕೆಯನ್ನು ಒಪ್ಪುವುದು ಕಷ್ಟಸಾಧ್ಯವೆಂದು ಹೇಳಿರುವ ನ್ಯಾಯಪೀಠ, ಹಬ್ಬದ ಸಂದರ್ಭಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸರ ಆದೇಶದಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡುಬರುತ್ತಿಲ್ಲವೆಂದು ತಿಳಿಸಿ, ಅರ್ಜಿ ವಜಾಗೊಳಿಸಿತು.

ಅರ್ಜಿದಾರರ ಆಕ್ಷೇಪವೇನು?

ಶಬ್ದ ಮಾಲಿನ್ಯ ನಿಯಮಗಳು–2000ಕ್ಕೆ ಅನುಗುಣವಾಗಿ ಮಾರ್ಗದರ್ಶಿ ಸೂತ್ರ ಹೆಣೆಯುವುದನ್ನು ಬಿಟ್ಟು ಈ ರೀತಿ ವ್ಯಾಪಕ ಕಾರ್ಯಾದೇಶ ಹೊರಡಿಸಿರುವುದು ಸಾಂವಿಧಾನಿಕವಾಗಿ ಕೊಡಮಾಡಿರುವ ನಮ್ಮ ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ಸೌಂಡ್ ಸಿಸ್ಟಮ್‌ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದೆ. ಆದರೆ, ಬಳಕೆಯನ್ನು ನಿರ್ಬಂಧಿಸುವುದು ಸಮಂಜಸ ಕ್ರಮವಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X