Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ವಿರುದ್ಧ ಚುನಾವಣಾ ತಕರಾರು...

ಸಿದ್ದರಾಮಯ್ಯ ವಿರುದ್ಧ ಚುನಾವಣಾ ತಕರಾರು ಅರ್ಜಿ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Sept 2023 9:14 PM IST
share
ಸಿದ್ದರಾಮಯ್ಯ ವಿರುದ್ಧ ಚುನಾವಣಾ ತಕರಾರು ಅರ್ಜಿ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸೆ.13ರ ಅಂತ್ಯದ ವೇಳೆಗೆ ಆಕ್ಷೇಪಣೆ ಸಲ್ಲಿಸಿಲು ಹೈಕೋರ್ಟ್ ಸೂಚನೆ ನೀಡಿದೆ.

ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿ ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿದೆ.

ವಿಚಾರಣಾ ವೇಳೆ, ಪ್ರಕರಣ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ಆ.14ರಂದೇ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಿಯಮದಂತೆ ಪ್ರತಿವಾದಿಗಳಿಗೆ ಲಿಖಿತ ಹೇಳಿಕೆ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ಇದಕ್ಕಾಗಿ 30 ದಿನ ಕಾಲಾವಕಾಶ ನೀಡಬೇಕು.

ಹೀಗಾಗಿ, ಪ್ರಕರಣದ ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಲಾಗುವುದು. ಅಷ್ಟರಲ್ಲಿ ಪ್ರತಿವಾದಿಗಳು ಲಿಖಿತ ಹೇಳಿಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು. ಕಳೆದ ಜು.28ರಂದು ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತ್ತು.

ಅರ್ಜಿದಾರರು, ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಇದು ಲಂಚಕ್ಕೆ ಸಮವಾಗಿದ್ದು, ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 123(1) ಪ್ರಕಾರ ಮತ್ತು ಸೆಕ್ಷನ್ 123(2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ.

ಸೆಕ್ಷನ್ 123(4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹೀಗಾಗಿ, ಅಕ್ರಮ ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದು, ಅವರನ್ನು ಅಸಿಂಧುಗೊಳಿಸಬೇಕು ಎಂದು ಕೋರಿದ್ದರು.

ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಸಿದ್ದರಾಮಯ್ಯ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ.

ಅವು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ್ದಾರೆ. ಮತದಾರರಿಗೆ ಆಮಿಷವೊಡ್ಡುವುದು ಲಂಚ ಮತ್ತು ಭಷ್ಟಾಚಾರಕ್ಕೆ ಸಮನಾಗಿದೆ. ಅಲ್ಲದೆ, ಪ್ರಜಾಪ್ರತಿನಿಧಿ ಕಾಯಿದೆಯ ಅನ್ವಯ ಅಪರಾಧವಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯೂ ಆಗಿದೆ ಎಂದು ಅರ್ಜಿದಾರರು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X