Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಕ್ಕೆ NDRF ನಿಧಿಯನ್ನು...

ರಾಜ್ಯಕ್ಕೆ NDRF ನಿಧಿಯನ್ನು ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ : ಸಿಎಂ ಸಿದ್ದರಾಮಯ್ಯ

"ಕೇಂದ್ರದಿಂದ ನಮ್ಮ ಪಾಲಿನ ಬರಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ನ್ಯಾಯಾಲಯದ ಮೊರೆ ಹೋದೆವು"

ವಾರ್ತಾಭಾರತಿವಾರ್ತಾಭಾರತಿ23 March 2024 4:45 PM IST
share
ರಾಜ್ಯಕ್ಕೆ NDRF ನಿಧಿಯನ್ನು ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಕ್ಕೆ NDRF ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ" ಎಂದು ವಿವರಿಸಿದರು.

ಬರದ ಸಂದರ್ಭದಲ್ಲಿ , ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸದ ಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ನಿಯಮವಾಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಪರಿಶೀಲನೆ ನಡೆಸಿ ಕೇಂದ್ರಕ್ಕೆ IMCT ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು NDRF ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದಿಲ್ಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದಿಲ್ಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ ಎಂದರು.

ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು‌ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ. ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ ಮೇವಿಗೆ 450 ಕೋಟಿ, ಕುಡಿಯುವ ನೀರಿಗೆ 870 ಕೋಟಿ ಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂಪಾಯಿ ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಡ ಸೂಚನೆಗಳನ್ನು ನೀಡಲಾಗಿದೆ ಎಂದರು.

4600 ಕೋಟಿ ಇನ್ ಪುಟ್ ಸಬ್ಸಿಡಿಗೆ ಹಣ ಬೇಕು. ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ NDRF ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಬಾಗಿಲು ಬಡಿಯಬೇಕಾಯಿತು ಎಂದು ಹೇಳಿದರು.

ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು, NDRF ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಈ ಕಾರಣಕ್ಕೆ ನಾವು ಸುಪ್ರೀಂ ಕೋರ್ಟ್ ಬಳಿ ನ್ಯಾಯ ಕೇಳದೆ ಬೇರೆ ದಾರಿ ಇರಲಿಲ್ಲ ಎಂದರು.

ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸೃಷ್ಟಿಸಿದೆ ಎಂದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕೇಂದ್ರದಿಂದ NDRF ಪರಿಹಾರ ಪಡೆಯಲು ಇದುವರೆಗೂ ರಾಜ್ಯ ಸರ್ಕಾರ ಮಾಡಿದ ಸಕಲ ಪ್ರಯತ್ನಗಳನ್ನೂ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X