ಪಿಜಿ ನೀಟ್-25: ಅರ್ಜಿ ಸಲ್ಲಿಕೆಗೆ ಅ.15ರ ವರೆಗೆ ದಿನಾಂಕ ವಿಸ್ತರಣೆ

ಬೆಂಗಳೂರು, ಅ.8: ಸ್ನಾತಕೋತ್ತರ ವೈದ್ಯಕೀಯ ಪದವಿ, ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಅ.15ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎದುರಾಗಿರುವ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ಎಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





