Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.ಕೆ. ಶಿವಕುಮಾರ್ ನೇತೃತ್ವದ ಮಂತ್ರಿ...

ಡಿ.ಕೆ. ಶಿವಕುಮಾರ್ ನೇತೃತ್ವದ ಮಂತ್ರಿ ಮಂಡಲ ರಚನೆ ಪ್ರಶ್ನಿಸಿದ್ದ ಪಿಐಎಲ್‌ ವಜಾ; ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 Jun 2026 7:25 PM IST
share
ಡಿ.ಕೆ. ಶಿವಕುಮಾರ್ ನೇತೃತ್ವದ ಮಂತ್ರಿ ಮಂಡಲ ರಚನೆ ಪ್ರಶ್ನಿಸಿದ್ದ ಪಿಐಎಲ್‌ ವಜಾ; ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ 14 ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ ಹಾಗೂ ಮಂತ್ರಿಮಂಡಲದ ರಚನೆ ಸಂವಿಧಾನಬಾಹಿರವೆಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ 13 ಮಂದಿ ನೂತನ ಸಚಿವರನ್ನು ಪ್ರತಿವಾದಿಗಳನ್ನಾಗಿ ಮಾಡಿ ಹುಬ್ಬಳ್ಳಿಯ ನಿವಾಸಿ ಮಂಗಳಪ್ಪ ತಿಪ್ಪಣ್ಣ ಹುಲಿಕೇರಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಇದೊಂದು ಊಹೆ ಮತ್ತು ಗ್ರಹಿಕೆಗಳ ಆಧಾರದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಸಲ್ಲಿಸಲಾಗಿರುವ ಕ್ಷುಲ್ಲಕ ಅರ್ಜಿಯಾಗಿದೆ. ಇಂಥ ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಅಮೂಲ್ಯ ಸಮಯ ಪೋಲು ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

ಜತೆಗೆ, ದಂಡದ ಮೊತ್ತವನ್ನು 2 ವಾರಗಳನ್ನು ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ನಿರ್ದೇಶನ ನೀಡಿತು. ಈ ಮಧ್ಯೆ, ಅರ್ಜಿ ಹಿಂಪಡೆದುಕೊಳ್ಳಲಾಗುವುದು ಎಂದು ವಕೀಲರು ಪದೇಪದೆ ಮನವಿ ಮಾಡಿದರಾದರೂ, ಅದನ್ನು ನ್ಯಾಯಪೀಠ ತಳ್ಳಿ ಹಾಕಿತು.

ಅರ್ಜಿದಾರರ ಆಕ್ಷೇಪವೇನು?:

ಮುಖ್ಯಮಂತ್ರಿ ಸೇರಿ 13 ಮಂದಿ ಸಚಿವರು ಜೂನ್ 3ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಆ ಮೂಲಕ 14 ಮಂದಿ ಸಚಿವರ ಮಂತ್ರಿ ಮಂಡಲ ರಚನೆಯಾಗಿದೆ. ಆದರೆ, ಕರ್ನಾಟಕದ ವಿಧಾನಸಭೆಯ ಸಂಖ್ಯಾಬಲ 224 ಆಗಿದ್ದು, ಸಂವಿಧಾನದ ಪರಿಚ್ಚೇದ 161 (1ಎ) ಪ್ರಕಾರ ಕರ್ನಾಟಕದ ಸಚಿವ ಸಂಪುಟದ ಗಾತ್ರ ಶೇ. 12 ರಿಂದ 15 ಅಂದರೆ ಕನಿಷ್ಠ 24 ಅಥವಾ ಗರಿಷ್ಠ 34 ಇರಬೇಕು. ಅಷ್ಟೇ ಸಂಖ್ಯೆ ಸಚಿವರ ಪ್ರಮಾಣ ವಚನ ಸ್ವೀಕರಿಸಿ, ಮಂತ್ರಿ ಮಂಡಲ ರಚನೆಯಾಗಬೇಕು. ಆದರೆ, ಜೂನ್ 3ರಂದು 14 ಮಂದಿಯ ಮಂತ್ರಿಮಂಡಲ ರಚನೆಯಾಗಿದ್ದು, ಇದು ಸಂವಿಧಾನಬಾಹಿರ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

ಜತೆಗೆ, ಮಂತ್ರಿಮಂಡಲವನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥ ಆಗುವವರೆಗೆ ಮಂತ್ರಿಮಂಡಲ ಕಾರ್ಯನಿರ್ವಹಿಸದಂತೆ ಹಾಗೂ ಯಾವುದೇ ನಿರ್ಣಯಗಳನ್ನು ಕೈಗೊಳ್ಳದಂತೆ ನಿರ್ದೆಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

Tags

D.K. ShivakumarKarnataka HC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X