Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ...

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ವರ್ಗಾವಣೆ; ಹೈಕೋರ್ಟ್‌ಗೆ ರಾಜ್ಯ ಸರಕಾರದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ21 July 2026 11:44 PM IST
share
ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ವರ್ಗಾವಣೆ; ಹೈಕೋರ್ಟ್‌ಗೆ ರಾಜ್ಯ ಸರಕಾರದ ಮಾಹಿತಿ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ಪಿಲಿಕುಳ ಜೈವಿಕ ಉದ್ಯಾನದ ಬಳಿ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಕೋರಿ 'ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್' (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುವುದು, ನಿರ್ವಹಣೆ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ ಹಾಗೂ ರಾಜ್ಯ ಮೃಗಾಲಯ ಪ್ರಾಧಿಕಾರದ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು. ಮೃಗಾಲಯದಲ್ಲಿರುವ 652 ಪ್ರಾಣಿಗಳ ಸುರಕ್ಷತೆ ಮತ್ತು ಕಾಳಜಿ ಸರಕಾರದ ಆದ್ಯತೆಯಾಗಿದೆ ಎಂದರು.

ಇದಕ್ಕೆ ರಾಷ್ಟ್ರೀಯ ಮೃಗಾಲಯ ಪ್ರಾಧಿಕಾರದ ಪರ ವಕೀಲರು, ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಿದರೆ ನಮ್ಮದೇನು ಅಭ್ಯಂತರವಿಲ್ಲ ಎಂದರು.

ಇದನ್ನು ಆಲಿಸಿದ ನ್ಯಾಯಪೀಠ, ಮೃಗಾಯಲಯ ವರ್ಗಾವಣೆ ಪ್ರಕ್ರಿಯೆ ಹೇಗಿರಲಿದೆ, ವರ್ಗಾವಣೆಯು ಕೇವಲ ಮೃಗಾಲಯ ಇರುವ ಸೀಮಿತ ಭೌಗೋಳಿಕ ಪ್ರದೇಶ ಮತ್ತು ಪ್ರಾಣಿಗಳಿಗೆ ಮಾತ್ರ ಸಿಮೀತವಾಗಿರಲಿದೆಯೇ? ಒಟ್ಟಾರೆ ಜೈವಿಕ ಉದ್ಯಾನವನದ ವಿಚಾರ ಏನಾಗಲಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿತು.

Tags

Pilikula ZooForest DepartmentHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X