ಹಾಸನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

ಹೊಸದಿಲ್ಲಿ: ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಟ್ರಕ್ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ರಾಜ್ಯದ ವಿವಿಧ ಗಣ್ಯರು ಕಂಬನಿ ಮಿಡಿದಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡಾ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಹಾಸನದಲ್ಲಿ ನಡೆದಿರುವ ಅಪಘಾತ ಹೃದಯವಿದ್ರಾವಕ ದುರಂತವಾಗಿದೆ. ಈ ಘಟನೆಯಿಂದ ದುಃಖಿತರಾಗಿರುವ ಕುಟುಂಬಗಳೊಂದಿಗೆ ನಾನೂ ಕೂಡಾ ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟೂ ಶೀಘ್ರ ಚೇತರಿಸಿಕೊಳ್ಳಕಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಪ್ರಧಾನಿ ಮೋದಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳ ಕುಟುಂಬಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.
The mishap in Hassan, Karnataka, is heart-rending. In this tragic hour, my thoughts are with the bereaved families. I hope those who have been injured recover at the earliest.
— PMO India (@PMOIndia) September 13, 2025
An ex-gratia of Rs. 2 lakh from PMNRF would be given to the next of kin of each deceased. The injured…







