ನೂತನ ಸಿಎಂ ಡಿ.ಕೆ.ಶಿವಕುಮಾರ್ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ, ಡಿ.ಕೆ.ಶಿವಕುಮಾರ್
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ.
ಈ ಕುರಿತು ಸಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
Next Story




