ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ.ಸುಧಾ ಯಾದವ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.
ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ಅವರು ನಿಲ್ದಾಣದಲ್ಲಿರುವ ಪಿಂಕ್ ಲೈನ್ನ ಮಾದರಿ ನಕ್ಷೆಯ ಮೂಲಕ ಪ್ರಧಾನಮಂತ್ರಿಯವರಿಗೆ ಮೆಟ್ರೋ ಮಾರ್ಗ ಹಾಗೂ ಸಂಪರ್ಕ ವ್ಯವಸ್ಥೆಯ ಕುರಿತು ವಿವರಿಸಿದರು.
Next Story






