Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ...

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಕರೆ ಅತ್ಯಂತ ಪ್ರಚೋದನಕಾರಿ: ಸಿಎಂ ಸಿದ್ದರಾಮಯ್ಯ ಕಳವಳ

ʼʼದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮೋದಿ ಮರೆತಂತಿದೆʼʼ

ವಾರ್ತಾಭಾರತಿವಾರ್ತಾಭಾರತಿ7 Sept 2023 6:22 PM IST
share
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಕರೆ ಅತ್ಯಂತ ಪ್ರಚೋದನಕಾರಿ: ಸಿಎಂ ಸಿದ್ದರಾಮಯ್ಯ ಕಳವಳ

ಬೆಂಗಳೂರು: ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼ ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇʼʼ ಎಂದು ಹೇಳಿದ್ದಾರೆ.

ʼʼನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.ʼʼ ಎಂದು ಅವರು ತಿಳಿಸಿದ್ದಾರೆ.

ʼʼನರೇಂದ್ರ ಮೋದಿ ಅವರು ಇನ್ನೂ ಆರೆಸ್ಸೆಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ʼʼಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆʼʼ ಎಂದು ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X