Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೋಕ್ಸೋ ಪ್ರಕರಣ | ಯಡಿಯೂರಪ್ಪ ವಿರುದ್ಧ...

ಪೋಕ್ಸೋ ಪ್ರಕರಣ | ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹಿಂದೇಟು : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ8 Oct 2024 7:10 PM IST
share
ಪೋಕ್ಸೋ ಪ್ರಕರಣ | ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹಿಂದೇಟು : ದಿನೇಶ್ ಗುಂಡೂರಾವ್

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರಕಾರ ಹಿಂಪಡೆದಿರುವುದು ಸ್ವಾಗತಾರ್ಹ. ಅದೇ ಮತ್ತೊಂದೆಡೆ ಇದೇ ಕಾಯ್ದೆಯಡಿ ಆರೋಪಿಯಾಗಿರುವ ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹಿಂದೇಟು ಹಾಕುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ನಾವು ಸಹನೆ ಇಟ್ಟುಕೊಳ್ಳಬಾರದು. ಅಂತಹವರ ವಿರುದ್ಧ ನಾವು ಸಾಧ್ಯವಾದಷ್ಟು ಹೆಚ್ಚಿನ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕ ಕ್ಷೇತ್ರ, ಉದ್ಯಮ ಹಾಗೂ ವ್ಯಾಪಾರದಲ್ಲಿ ಮಹಿಳೆಯರ ಪಾತ್ರ ಹೆಚ್ಚುತ್ತಿರುವ ಸಂದರ್ಭದಲ್ಲಿ ಅವರಿಗೆ ಮುಜುಗರ ಹಾಗೂ ತೊಂದರೆಯಾಗದಂತಹ ವಾತಾವರಣ ನಿರ್ಮಿಸುವುದು ಎಲ್ಲ ಸರಕಾರಗಳ ಜವಾಬ್ದಾರಿ. ಕೇಂದ್ರ ಸರಕಾರದ ಮಟ್ಟದಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ಒಂದು ಕಡೆಯಾದರೆ, ಬಿಜೆಪಿ ಪಕ್ಷ ಮಟ್ಟದ ವಿಚಾರದಲ್ಲಿ ಯಾಕೆ ದ್ವಂದ್ವ ನಿಲುವು ತಾಳಲಾಗಿದೆ? ಎಂದು ಅವರು ಪ್ರಶ್ನಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಿಐಡಿ ತನಿಖೆಯಾಗಿ ಜುಲೈ ತಿಂಗಳಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಈಗ ವಿಚಾರಣೆ ನಡೆಯಬೇಕಾಗಿದೆ. ಸಿಐಡಿಯವರು ಯಡಿಯೂರಪ್ಪ ಹಾಗೂ ಮೂವರು ಸಹಚರರ ವಿರುದ್ಧ 700 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ಇವರು ಸಾಕ್ಷಿನಾಶ, ಪ್ರಕರಣ ಮುಚ್ಚಿಹಾಕುವ ವಿಚಾರ, ಸಂತ್ರಸ್ತ ಬಾಲಕಿ ಹೇಳಿಕೆಗಳನ್ನು ಸೇರಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಹಾಯಕ್ಕೆಂದು ಬಂದ ಬಾಲಕಿ ಮೇಲೆ ಇಂತಹ ಕೆಟ್ಟ ಅನುಭವ ಆಗಿರುವ ಪ್ರಕರಣವನ್ನು ಬಹಳ ಹಗುರವಾಗಿ ಪರಿಗಣಿಸಿರುವುದು ದುರ್ದೈವ. ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ. ಸಿಐಡಿ ತನಿಖೆಯಾಗಿ ಆರೋಪಪಟ್ಟಿಯಲ್ಲಿ ಅನೇಕ ಮಾಹಿತಿ ಇದ್ದರೂ ಇದನ್ನು ಪ್ರಶ್ನೆ ಮಾಡಬಾರದೇ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರದಲ್ಲಿ ಬಿಜೆಪಿ ಸ್ಪಷ್ಟ ನಿಲುವು ತೋರುತ್ತಿಲ್ಲ ಯಾಕೆ? ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಾಕೆ ಉಳಿಸಿಕೊಂಡಿದ್ದಾರೆ? ಕನಿಷ್ಠಪಕ್ಷ ಬಿಜೆಪಿಯು ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಪಕ್ಷದ ಎಲ್ಲ ಹುದ್ದೆಗಳಿಂದ ಅವರನ್ನು ತೆಗೆದು ಹಾಕುವ ನಿರ್ಧಾರ ಯಾಕೆ ಮಾಡುತ್ತಿಲ್ಲ? ಮಹಿಳೆಯರ ಪರವಾಗಿ ಅವರ ನಿಲುವೇನು? ಎಂದು ದಿನೇಶ್ ಗುಂಡೂರಾವ್ ಕೇಳಿದರು.

ಯಾವ ಒತ್ತಡಕ್ಕೆ ಅವರು ಮಣಿದಿದ್ದಾರಾ? ಬಿಜೆಪಿ ನಾಯಕರ ಹೇಳಿಕೆ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬ್ಲಾಕ್ ಮೇಲ್ ನಿಂದಾಗಿ ಯಡಿಯೂರಪ್ಪ ವಿರುದ್ಧ ಕ್ರಮ ತೆಗೆದುಕೊಳ್ಳಲು ಬಿಜೆಪಿ ಹೈಕಮಾಂಡ್‍ಗೆ ಸಾಧ್ಯವಾಗುತ್ತಿಲ್ಲವಂತೆ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.

ಒಂದುಕಡೆ ನೃತ್ಯ ನಿರ್ದೇಶಕನಿಗೆ ಕೊಟ್ಟಿರುವ ಪ್ರಶಸ್ತಿ ಹಿಂಪಡೆಯಲಾಗಿದೆ, ಮತ್ತೊಂಡೆದೆ ಇದೇ ಆರೋಪ ಹೊತ್ತಿರುವ ಯಡಿಯೂರಪ್ಪ ಮೇಲೆ ಆರೋಪಪಟ್ಟಿ ದಾಖಲಾಗಿದ್ದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಯಾಕೆ? ಈ ವಿಚಾರದಲ್ಲಿ ಬಿಜೆಪಿ ಮನಸ್ಥಿತಿ ಏನು? ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೈಕಮಾಂಡ್ ಹಿಂದೇಟು ಹಾಕುತ್ತಿರುವುದೇಕೆ? ಎಂದು ಅವರು ಕೇಳಿದರು.

ಪೋಕ್ಸೋ ಪ್ರಕರಣ ಹಾಗೂ ಈ ಕಾಯ್ದೆ ಮಾನದಂಡಗಳು ಬಹಳ ಗಂಭೀರವಾಗಿವೆ. ಈ ಆರೋಪ ಸಾಬೀತಾದರೆ ಗಂಭೀರವಾದ ಶಿಕ್ಷೆಗೆ ಒಳಗುವ ಸಾಧ್ಯತೆ ಇದೆ. ಬಿಜೆಪಿಯ ಅನೇಕ ನಾಯಕರ ಮೇಲೆ ಇಂತಹ ಆರೋಪಗಳಿವೆ. ಶಾಸಕ ಮುನಿರತ್ನ, ಎಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ಬಿಜೆಪಿ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನು ಬಿಜೆಪಿಯವರು ರಾಜಕೀಯವಾಗಿ ನೋಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ದೇಶದ ಕುಸ್ತಿಪಟುಗಳು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ವಿರೋಧಿಸಿ ಬೀದಿಯಲ್ಲಿ ಹೋರಾಟ ಮಾಡಿದರು. ಈ ಪ್ರಕರಣದಲ್ಲೂ ಬಿಜೆಪಿ ನಾಯಕರು ಸಹಾನುಭೂತಿ ತೋರಲಿಲ್ಲ, ಆರೋಪಿ ಬ್ರಿಜ್ ಭೂಷಣ್ ಸಿಂಗ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ನಿಟ್ಟಿನಲ್ಲೇ ಬಿಜೆಪಿಯನ್ನು ಬಲತ್ಕಾರಿ ಜನತಾ ಪಕ್ಷ ಎಂದು ಕರೆಯುತ್ತಾರೆ. ಮಣಿಪುರದ ಘಟನೆಗಳ ಬಗ್ಗೆಯೂ ದಿಟ್ಟ ನಿಲುವು ಯಾಕೆ ತೋರಿಲ್ಲ ಎಂದು ಅವರು ಕಿಡಿಗಾರಿದರು.

ಮಾಧ್ಯಮಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಮಾಧ್ಯಮ ಕಾರ್ಯದರ್ಶಿ ದಿಪಕ್ ತಿಮಯ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ಕೆಪಿಸಿಸಿ ವಕ್ತಾರ ನಟರಾಜ್ ಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X