Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೊಕ್ಸೊ ಪ್ರಕರಣ: ಮುರುಘಾ ಶ್ರೀಗೆ ಜಾಮೀನು...

ಪೊಕ್ಸೊ ಪ್ರಕರಣ: ಮುರುಘಾ ಶ್ರೀಗೆ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ8 Nov 2023 4:45 PM IST
share
ಪೊಕ್ಸೊ ಪ್ರಕರಣ: ಮುರುಘಾ ಶ್ರೀಗೆ ಜಾಮೀನು ಮಂಜೂರು

ಬೆಂಗಳೂರು, ನ.8: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬುಧವಾರ ಈ ಸಂಬಂಧ ಆದೇಶ ಪ್ರಕಟಿಸಿತು.

2 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ನ್ಯಾಯಾಲಯದ ವಶಕ್ಕೆ ಪಾಸ್‍ಪೋರ್ಟ್ ಸಲ್ಲಿಸಬೇಕು. ವಿಡಿಯೊ ಕಾನ್ಫ್‍ರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕು. ಜಾಮೀನು ಮಂಜೂರು ಆದೇಶವನ್ನು ಶರಣರು ದುರ್ಬಳಕೆ ಮಾಡಿಕೊಳ್ಳಬಾರದು. ನ್ಯಾಯಾಲಯ ವಿಧಿಸಿದ ಷರತ್ತು ಉಲ್ಲಂಘಿಸಿದರೆ, ಜಾಮೀನು ತನ್ನಿಂದ ತಾನೇ ರದ್ದಾಗಲಿದೆ. ಅದೇ ರೀತಿ, ಪ್ರಮುಖವಾಗಿ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು ಎಂದು ಷರತ್ತುಗಳನ್ನು ಉಲ್ಲೇಖಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಿವಮೂರ್ತಿ ಶರಣರ ಪರ ವಕೀಲ ಸಂದೀಪ್ ಪಾಟೀಲ್, ಮೊದಲ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದು, ಎರಡನೆ ಪ್ರಕರಣದಲ್ಲಿ ಜಾಮೀನು ಮಂಜೂರು ಆಗುವವರೆಗೆ ಬಿಡುಗಡೆ ಮಾಡಲಾಗದು ಎಂದು ಸಹಜವಾಗಿ ಹೇಳುತ್ತಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ಎರಡೂ ಆದೇಶಗಳನ್ನು ಸಲ್ಲಿಸಲಾಗುವುದು. ಇದಕ್ಕೆ ವಿಚಾರಣಾಧೀನ ನ್ಯಾಯಾಲಯ ಒಪ್ಪಿದರೆ ಸ್ವಾಮೀಜಿ ಬಿಡುಗಡೆಯಾಗುತ್ತಾರೆ. ಇಲ್ಲವಾದಲ್ಲಿ ಎರಡನೇ ಪ್ರಕರಣದಲ್ಲೂ ಹೈಕೋರ್ಟ್ ಮೆಟ್ಟಿಲೇರಿ ಜಾಮೀನು ಮಂಜೂರು ಮಾಡಿಸಿಕೊಂಡು ಬಿಡುಗಡೆ ಕೋರಬೇಕಿದೆ ಎಂದು ಹೇಳಿದರು.

ಇನ್ನೂ, ಮುರುಘಾ ಶರಣರ ವಿರುದ್ಧ ಎರಡು ಮೊಕದ್ದಮೆಗಳು ದಾಖಲಾಗಿದ್ದು, ಮೊದಲ ಎಫ್‍ಐಆರ್‍ನಲ್ಲಿ ಇಬ್ಬರು ಸಂತ್ರಸ್ತ ಮಕ್ಕಳು ಇದ್ದುದ್ದರಿಂದ ಎರಡು ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹೀಗಾಗಿ, ನಾವು ಎರಡು ಜಾಮೀನು ಅರ್ಜಿ ಸಲ್ಲಿಸಿದ್ದೆವು. ಈಗ ಎರಡೂ ಅರ್ಜಿಗಳನ್ನು ಹೈಕೋರ್ಟ್ ಪುರಸ್ಕರಿಸಿದೆ. ಎರಡನೆ ಮೊಕದ್ದಮೆಯಲ್ಲಿ ಶರಣರ ಬಂಧನವಾಗಿಲ್ಲ. ಆ ಪ್ರಕರಣದಲ್ಲಿ ಬಾಡಿ ವಾರೆಂಟ್ ಮೂಲಕ ಕಸ್ಟಡಿಗೆ ಪಡೆದು ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಈಗ ಆರೋಪಿ ಯಾವ ಪ್ರಕರಣದಲ್ಲಿ ಕಸ್ಟಡಿಯಲ್ಲಿದ್ದಾರೋ ಆ ಪ್ರಕರಣದಲ್ಲಿ ಜಾಮೀನು ಮಂಜೂರಾದರೆ ಬಿಡುಗಡೆ ಮಾಡಬೇಕು ಎಂದು ಬೇರೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವಿದೆ. ಈ ಆದೇಶ ಬಹಳ ಮಂದಿಗೆ ತಿಳಿದಿಲ್ಲ ಎಂದೂ ಅವರು ಉಲ್ಲೇಖಿಸಿದರು.

ಅರ್ಜಿ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ದೂರು ಸಲ್ಲಿಸಲು ಸಂತ್ರಸ್ತರಿಗೆ ನೆರವಾಗಿದ್ದ ಒಡನಾಡಿ ಸೇವಾ ಸಂಸ್ಥೆಯ ಪರವಾಗಿ ವಕೀಲ ಡಿ.ಸಿ.ಶ್ರೀನಿವಾಸ್, ಆರೋಪಿ ಶಿವಮೂರ್ತಿ ಶರಣರು ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರಿಗೆ ಜಾಮೀನು ನೀಡಿದರೆ ಪ್ರಕರಣದಲ್ಲಿನ ಸಂತ್ರಸ್ತರಾದ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದ್ದು, ಶರಣರು ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬುದಾಗಿ ಸಂತ್ರಸ್ತರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಸ್ವಯಂಕೃತ ಹೇಳಿಕೆ ದಾಖಲಿಸಿದ್ದಾರೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಶರಣರಿಗೆ ಜಾಮೀನು ನೀಡಬಾರದು ಎಂದು ನ್ಯಾಯಪೀಠವನ್ನು ಕೋರಿದ್ದರು.

ಸರಕಾರಿ ಅಭಿಯೋಜಕರು, ಶಿವಮೂರ್ತಿ ಶರಣರು ತಮ್ಮ ಮಠದಲ್ಲಿನ ಹಾಸ್ಟೆಲ್‍ನ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಿಸಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ. ಇದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ಹೈಕೋರ್ಟ್‍ಗೆ ಕೋರಿದ್ದರು.

ಪ್ರಕರಣದ ಹಿನ್ನೆಲೆ.:

ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‍ಬಾದ್ ಪೆÇಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ್ದರು. ನಂತರ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಪೆÇಲೀಸರು ಬಂಧಿಸಿದ್ದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

ಒಡನಾಡಿ ಸಂಸ್ಥೆ ಬೇಸರ..!

ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇವೆ. ಈ ಪ್ರಕರಣದಲ್ಲಿ ಕೆಲವು ಲೋಪದೋಷಗಳ ಕಾಣುತ್ತಿವೆ. ಪೆÇಲೀಸರ ಚಾರ್ಜ್‍ಶೀಟ್ ಸಲ್ಲಿಸುವ ವೇಳೆ ಲೋಪವಾಗಿದೆ. ಹೀಗಾಗಿ ಜಾಮೀನು ಸಿಕ್ಕಿದೆ. ಜೈಲಿನಲ್ಲಿದುಕೊಂಡೇ ಸ್ವಾಮೀಜಿಗಳು ಪ್ರಭಾವ ಬೀರಿದ್ದಾರೆ. ಚಿತ್ರದುರ್ಗಕ್ಕೆ ಹೋಗಬಾರದು ಎಂದು ನ್ಯಾಯಾಲಯ ಹೇಳಿರುವುದು ಸ್ವಾಗತಾರ್ಹ. ಈ ಪ್ರಕರಣದಲ್ಲಿ ಚಿಕ್ಕ ಮಕ್ಕಳು ಸಾಕಷ್ಟು ನೊಂದಿದ್ದು, ನಾವು ಅವರ ಪರವಾಗಿ ನಾವಿದ್ದೇವೆ. ಮುರಘಾ ಶ್ರೀಗೆ ಖಂಡಿತವಾಗಿಯೂ ಶಿಕ್ಷೆ ಆಗಲಿದೆ ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಹೇಳಿದರು.

ಬಿಡುಗಡೆ ಸದ್ಯಕ್ಕೆ ಇಲ್ಲ..!

ಮುರುಘಾ ಶ್ರೀಗಳಿಗೆ ಜಾಮೀನು ಸಿಕ್ಕಿದ್ದರೂ ಸದ್ಯಕ್ಕೆ ಬಿಡುಗಡೆಯ ಭಾಗ್ಯವಿಲ್ಲ. ಏಕೆಂದರೆ, ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ದೊರೆತಿದ್ದು, ಇನ್ನು ಒಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದೆ. ಈ ಪ್ರಕರಣ ಇತ್ಯರ್ಥವಾಗುವವರೆಗೂ ಶ್ರೀಗಳಿಗೆ ಬಿಡುಗಡೆ ಭಾಗ್ಯ ಲಭಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X