Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೋಕ್ಸೊ ಪ್ರಕರಣ: ಮುರುಘಾಶ್ರೀ ಖುಲಾಸೆ...

ಪೋಕ್ಸೊ ಪ್ರಕರಣ: ಮುರುಘಾಶ್ರೀ ಖುಲಾಸೆ ಪ್ರಶ್ನಿಸಿ ಸಂತ್ರಸ್ತೆಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

ವಾರ್ತಾಭಾರತಿವಾರ್ತಾಭಾರತಿ10 Dec 2025 6:19 PM IST
share
ಪೋಕ್ಸೊ ಪ್ರಕರಣ: ಮುರುಘಾಶ್ರೀ ಖುಲಾಸೆ ಪ್ರಶ್ನಿಸಿ ಸಂತ್ರಸ್ತೆಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮರುಘಾ ಶರಣರು ಹಾಗೂ ಇತರ ಇಬ್ಬರನ್ನು ಖುಲಾಸೆಗೊಳಿಸಿರುವ ಚಿತ್ರದುರ್ಗ ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ‌.

ವಿಚಾರಣಾ ನ್ಯಾಯಾಲಯದ ತೀರ್ಪು ರದ್ದುಪಡಿಸುವಂತೆ ಹಾಗೂ ಖುಲಾಸೆಗೊಂಡಿರುವವರನ್ನು ಅಪರಾಧಿಗಳು ಎಂದು ತೀರ್ಮಾನಿಸಿ ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸುವಂತೆ ಕೋರಿ ಬಾಲಕಿಯರು ಎರಡು ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿದ್ದು, ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು, ಖುಲಾಸೆಗೊಂಡಿರುವ ಶಿವಮೂರ್ತಿ ಮುರುಘಾ ಶರಣರು, ಎಸ್‌. ರಶ್ಮಿ ಮತ್ತು ಎ.ಜೆ. ಪರಮಶಿವಯ್ಯ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಮೇಲ್ಮನವಿಗಳು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಪ್ರಕರಣದ ಹಿನ್ನೆಲೆ:

ಮುರುಘಾ ಮಠದ ವಸತಿ ನಿಲಯದಲ್ಲಿ ಇದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರು ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮುರುಘಾ ಶರಣರು ನಮ್ಮನ್ನು ಖಾಸಗಿ ಕೊಠಡಿಗೆ ಹಿಂಬಾಗಿಲಿನಿಂದ ಕರೆಸಿಕೊಂಡು ಚಾಕೊಲೇಟ್‌ಗಳು ಮತ್ತು ಹಣ್ಣು ಇತ್ಯಾದಿಗಳನ್ನು ತಿನ್ನಲು ನೀಡುತ್ತಿದ್ದರು. ಇದರಲ್ಲಿ ಮಾದಕ ಪದಾರ್ಥಗಳನ್ನು ಬೆರಸಲಾಗಿತ್ತು. ಅದನ್ನು ಸೇವಿಸಿ ಪ್ರಜ್ಞೆ ಕಳೆದುಕೊಂಡ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ವಿಚಾರವನ್ನು ಯಾರಿಗೂ ಬಹಿರಂಗಪಡಿಸಬಾರದು. ಬಹಿರಂಗಪಡಿಸಿದರೆ ತಂದೆ-ತಾಯಿಯನ್ನು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು. ಮಾಜಿ ಶಾಸಕ ಎಸ್‌.ಕೆ. ಬಸವರಾಜನ್‌ ಮತ್ತವರ ಪತ್ನಿ ಸೌಜನ್ಯಾ ನೆರವಿನಿಂದ ಮೈಸೂರಿನ ಸರ್ಕಾರೇತರ ಸಂಸ್ಥೆ ಒಡನಾಡಿ ತಲುಪಿ, ಅವರ ನೆರವಿನಿಂದ ಮೈಸೂರಿನ ನಜಾರಾಬಾದ್‌ ಠಾಣೆಯಲ್ಲಿ ದೂರು ನೀಡಿದ್ದಾಗಿ ಬಾಲಕಿಯರು ದೂರಿನಲ್ಲಿ ವಿವರಿಸಿದ್ದರು. ಆನಂತರ ಪ್ರಕರಣ ಚಿತ್ರದುರ್ಗದ ಗ್ರಾಮೀಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಕಳೆದ ನವೆಂಬರ್‌ 26ರಂದು ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 376(3), 323, 504, 506, ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳಾದ 5(I), 6 ಮತ್ತು 17ರ ಆರೋಪಗಳಿಂದ ಸ್ವಾಮೀಜಿ ಸೇರಿ ಮೂವರನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X