Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ್ಯಂಟಿ ಬಯೋಟಿಕ್ ಬಳಕೆ ಕುರಿತು ನೀತಿ...

ಆ್ಯಂಟಿ ಬಯೋಟಿಕ್ ಬಳಕೆ ಕುರಿತು ನೀತಿ ರಚನೆ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ21 Nov 2023 8:36 PM IST
share
ಆ್ಯಂಟಿ ಬಯೋಟಿಕ್ ಬಳಕೆ ಕುರಿತು ನೀತಿ ರಚನೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯ ವ್ಯಾಪಿ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧಕ(ಎಂಎಂಆರ್) ಅನಗತ್ಯವಾಗಿ ಬಳಕೆ ಮಾಡುತ್ತಿರುವ ಕುರಿತು ಮಾಹಿತಿ ಇದ್ದು, ಈ ಸಂಬಂಧ ಬಳಕೆ ಕುರಿತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನೀತಿ ರಚನೆ ಮಾಡಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ವಿಶ್ವ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧಕ ಜಾಗೃತಿ ಸಪ್ತಾಹ 2023 ಕುರಿತಂತೆ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಂಟಿ ಬಯೋಟಿಕ್‌ ಗಳ ಅತಿಯಾದ ಬಳಕೆ ಒಳ್ಳೆಯದಲ್ಲ. ದಿನೇ ದಿನೇ ಇದರ ಪ್ರಮಾಣ ಹೆಚ್ಚಾಗುತ್ತಿದ್ದು, ಅದರಲ್ಲೂ ಕೋಳಿ ಸಾಕಣೆ, ಪಶುಪಾಲನೆಗಳಲ್ಲಿ ಬಳಕೆ ಮಾಡಲಾಗುತ್ತಿದೆ ಎಂದರು.

ಉತ್ಪಾದನೆ ಹೆಚ್ಚು ಮಾಡುವ ಸಲುವಾಗಿ ಆ್ಯಂಟಿ ಬಯೋಟೆಕ್‌ ಗಳನ್ನು ಬಳಕೆ ಮಾಡುತ್ತಾರೆ. ಜತೆಗೆ, ಇದು ಸುಲಭವಾಗಿ ಜನರ ಕೈ ಸೇರುತ್ತಿದೆ. ಯಾವುದೇ ಮಾಹಿತಿ ಇಲ್ಲದೆ ಸಾರ್ವಜನಿಕರು ಸಹ ಸ್ವಯಂ ಚಿಕಿತ್ಸೆಗಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ವಾತಾವರಣ ಇಲ್ಲದಂತೆ ನಾವು ನೋಡಿಕೊಳ್ಳಬಹುದಾಗಿದೆ. ಈ ಬಗ್ಗೆ ಇಲಾಖೆ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದ್ದು, ಕೃಷಿ ಒಳಗೊಂಡತೆ ಇತರೆ ಇಲಾಖೆಗಳೊಂದಿಗೆ ಸಭೆ ನಡೆಸಿ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧಕ ಬಳಕೆ ಕುರಿತು ಒಂದು ನೀತಿ ರೂಪಿಸಬೇಕು ಎಂದು ಅವರು ಹೇಳಿದರು.

ನ.22ರಂದು ವಿಶ್ವ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧಕ ಜಾಗೃತಿ ಸಪ್ತಾಹ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದು, ಈ ಬಾರಿ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧವನ್ನು ಒಟ್ಟಾಗಿ ತಡೆಗಟ್ಟೋಣ ಘೋಷ ವಾಕ್ಯದಡಿ ಆಚರಣೆ ಮಾಡಲಾಗುತ್ತಿದೆ. ಇನ್ನೂ, ಎಎಂಆರ್ ಪ್ರಮಾಣದಿಂದಾಗಿ ಮರಣ ಪ್ರಮಾಣ ಅಧಿಕವಾಗುತ್ತಿದೆ. ಅನಾರೋಗ್ಯವೂ ಹೆಚ್ಚಾಗುತ್ತಿದ್ದು, ಹೀಗಾಗಿ, ಬಳಕೆ ಕುರಿತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ದಿನೇಶ್ ಗುಂಡೂರಾವ್ ಹೇಲಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X