Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ: ಶಾಸಕ...

ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ: ಶಾಸಕ ಬಿ.ವೈ. ವಿಜಯೇಂದ್ರ ಆರೋಪ

ವಾರ್ತಾಭಾರತಿವಾರ್ತಾಭಾರತಿ15 July 2023 5:01 PM IST
share
ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ: ಶಾಸಕ ಬಿ.ವೈ. ವಿಜಯೇಂದ್ರ ಆರೋಪ

ಶಿವಮೊಗ್ಗ, ಜು.15: ರಾಜ್ಯ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಹಗರಣಗಳು ನಡೆದಿದೆ ಎಂಬುವ ರೀತಿಯಲ್ಲಿ ರಾಜ್ಯ ಸರ್ಕಾರ ಬಿಂಬಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ್ದರು, ಆದರೆ ಚುನಾವಣೆ ಮುಗಿದ ನಂತರವೂ ಅದೇ ದಾಟಿಯಲ್ಲಿ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷ ಇದರ ಬಗ್ಗೆ ಹೆದರಿಕೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ. ರಾಷ್ಟ್ರೋತ್ಥಾನ ಪರಿಷತ್ ಅಡಿಯಲ್ಲಿ ಜನಸೇವಾ ವಿದ್ಯಾ ಕೇಂದ್ರ ಕಳೆದ 30 -40 ವರ್ಷಗಳಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುತ್ತಿದೆ. ಬಡ ಮಕ್ಕಳು ಶಿಕ್ಷಣ ಪಡೆದು, ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಆದರೆ ನೂತನ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟ 35 ಎಕರೆ ಭೂಮಿ ಹಿಂಪಡೆಯುವ ಬಗ್ಗೆ ನಿರ್ಧಾರ ಮಾಡಿರುವುದು ದುರಂತವಾಗಿದೆ. ಶಿಕ್ಷಣ ಕ್ಷೇತ್ರದ ಮೇಲೂ ಈ ಸರ್ಕಾರದ ವಕ್ರ ದೃಷ್ಟಿ ಬೀರಿದೆ. ಇದು ಸಚಿವರಿಗೆ, ಮುಖ್ಯಮಂತ್ರಿ ಅವರಿಗೆ ಶೋಭೆ ತರುವಂತಹದಲ್ಲ, ವಿನಾಕಾರಣ ರಾಜಕಾರಣ ಮಾಡಬಾರದು ಎಂದರು.

ಗುಣಮಟ್ಟದ ಶಿಕ್ಷಣವನ್ನು ಕೊಡುವಂತಹ ಶಿಕ್ಷಣ ಕೇಂದ್ರಕ್ಕೆ ಕೊಟ್ಟ ಭೂಮಿಯನ್ನು ಹಿಂಪಡೆಯಬಾರದು. ಯಾರು ಯಾರಿಗೆ ಭೂಮಿ ಕೊಟ್ಟಿದ್ದಾರೆ ಎಂಬ ಬಗ್ಗೆ ಸದನದಲ್ಲಿ ಚರ್ಚೆ ಮಾಡಲಿ. ಭೂಮಿಯನ್ನು ಪಡೆದ ಶಿಕ್ಷಣ ಸಂಸ್ಥೆಗಳು ಯಾವ ರೀತಿ ಉಪಯೋಗಿಸುತ್ತಿದ್ದಾರೆ ಚರ್ಚೆಯಾಗಲಿ, ನ್ಯಾಯಯುತವಾಗಿ ಕೊಟ್ಟಂತ ಜಮೀನಿಗೂ ಕನ್ನ ಹಾಕುತ್ತಿದ್ದಾರೆ, ಮೂಗು ತೂರಿಸುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಅಂದರೆ ದೇವರು ಮೆಚ್ಚುವುದಿಲ್ಲ. ಕಳೆದ 30 ವರ್ಷದಲ್ಲಿ ಸರ್ಕಾರಗಳು ಯಾರಿಗೆ ಭೂಮಿ ಕೊಟ್ಟಿದೆ, ಪರಭಾರೆ ಮಾಡಿದೆ ಎಂಬುದರ ಬಗ್ಗೆ ಚರ್ಚೆಯಾಗಲಿ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹನಿಮೂನ್ ಸಮಯದಿಂದ ಇನ್ನೂ ಹೊರ ಬಂದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಪೂರ್ಣ ಆಗುತ್ತಿದೆ. ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆ ಬಗ್ಗೆಯೇ ಚರ್ಚೆ ಆಗುತ್ತಿದೆ. ರಾಜ್ಯದಲ್ಲಿ ನಿರ್ಮಾಣ ಆಗಿರುವ ಬರಗಾಲ ಬಗ್ಗೆ ಶೂನ್ಯ ವೇಳೆಯಲ್ಲಿ ಚರ್ಚೆ ಮಾಡಿದ್ದೇನೆ. ರಾಜ್ಯದ 21 ಜಿಲ್ಲೆಗಳಲ್ಲಿ ಬರಗಾಲದ ವಾತಾವರಣ ಇದ್ದು, ರೈತರು ಕಂಗಾಲಾಗಿದ್ದಾರೆ. ಮಲೆನಾಡಿನಲ್ಲೂ ಕುಡಿಯುವ ನೀರಿನ ಆಹಾಕಾರ ಎದ್ದಿದೆ. ರಾಜ್ಯದ ಜಲಾಶಯದಲ್ಲಿ ನೀರಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಅಧಿವೇಶನದಲ್ಲಿ ಇದ್ಯಾವುದೂ ಚರ್ಚೆ ಆಗುತ್ತಿಲ್ಲ. ಕೆಲಸಕ್ಕೆ ಬಾರದ ವಿಷಯಗಳು ಚರ್ಚೆ ಆಗುತ್ತಿವೆ ಎಂದು ಆರೋಪಿಸಿದರು.

ಬಿಜೆಪಿ ವಿರೋಧ ಪಕ್ಷ ನಾಯಕನ ಆಯ್ಕೆ ವಿಚಾರ ಚರ್ಚಿಸುವುದಿಲ್ಲ. ಶಾಸಕನಾಗಿ ನಮ್ಮ ತಾಲೂಕಿನ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ಯಶಸ್ವಿ ಶಾಸಕನಾಗಿ ಕೆಲಸ ಮಾಡಬೇಕು ಅಂದುಕೊಂಡಿದ್ದೇನೆ ಎಂದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X