ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ-ಸಾಕ್ಸ್ ಗುಣಮಟ್ಟ ಕಳಪೆ ಎಂಬುದು ಸುಳ್ಳು: ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ
ಬೆಂಗಳೂರು: ‘ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಆದರೆ, ಸೈಜ್ನಲ್ಲಿ ವ್ಯತ್ಯಾಸ ಆಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸುವ ಎರಡು ದಿನಗಳ ಮುನ್ನವೇ ತಾವು ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಎಲ್ಲ ಜಿಲ್ಲೆಗಳ ಜಿ.ಪಂ. ಸಿಇಒಗಳ ನೇತೃತ್ವದಲ್ಲಿ ಸಮಿತಿ ರಚಿಸಿ, ಶಾಲೆಗಳಿಗೆ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.
ಯಾವ ಮಕ್ಕಳಿಗೆ ಅಳತೆ (ಸೈಜ್) ಸಮಸ್ಯೆ ಇದೆಯೋ ಅಂತಹ ಮಕ್ಕಳಿಗೆ ಬೇರೆ ಶೂ ಮತ್ತು ಸಾಕ್ಸ್ ವಿತರಿಸುವಂತೆ ಸೂಚಿಸಲಾಗಿದೆ. ಶಾಲಾ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಭರವಸೆ ನೀಡಿದರು.
Next Story




