Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 7ನೇ ವೇತನ ಆಯೋಗದ ವರದಿ ಬಂದ ಬಳಿಕ...

7ನೇ ವೇತನ ಆಯೋಗದ ವರದಿ ಬಂದ ಬಳಿಕ ಸಕಾರಾತ್ಮಕವಾಗಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ರಾಜ್ಯ ಮಟ್ಟದ ಸರಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ27 Feb 2024 5:26 PM IST
share
7ನೇ ವೇತನ ಆಯೋಗದ ವರದಿ ಬಂದ ಬಳಿಕ ಸಕಾರಾತ್ಮಕವಾಗಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರಕಾರಿ ನೌಕರರ ಬಗ್ಗೆ ಸರಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಜ್ಯ ಮಟ್ಟದ ಸರಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರಾಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು. ಅಲ್ಲದೆ ಸರಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಬೇಕು

ಕರ್ನಾಟಕದಲ್ಲಿ 7.50 ಲಕ್ಷ ಸರಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ ಮಾಡುತ್ತಿದ್ದಾರೆ. 2.50 ಲಕ್ಷ ಜನರನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ಕರ್ನಾಟಕದ ಜನಸಂಖ್ಯೆ 7 ಕೋಟಿ ಇದೆ. 7.50 ಲಕ್ಷ ಮಂಜೂರಾಗಿರುವ ಹುದ್ದೆಗಳಿವೆ. 7 ಲಕ್ಷ ಜನ 7 ಕೋಟಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ, ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಮ್ಮನ್ನು 5 ವರ್ಷಕ್ಕೊಮ್ಮೆ ಆಯ್ಕೆ ಮಾಡಿದರೆ, ಸರಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿಯಾಗುವವರೆಗೆ ನವೀಕರಣ ಮಾಡಿಸಿಕೊಳ್ಳುವ ಪ್ರಮೇಯವಿಲ್ಲ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಕರ್ನಾಟಕದ ಜನರ ಆಶೀರ್ವಾದವನ್ನು ನವೀಕರಿಸಿಕೊಳ್ಳಬೇಕು ಎಂದರು.

ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಬೇಕು

ರಾಜ್ಯದ ಜನ ನನಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅದರಲ್ಲಿ ನೀವೂ, ನಿಮ್ಮ ಕುಟುಂಬದವರೂ ಇದ್ದಾರೆ. 7 ಕೋಟಿ ಕನ್ನಡಿಗರ ಭಾಗವಾದ ಸರಕಾರಿ ನೌಕಕರು, ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ನಮ್ಮ ಸಮಾಜದಲ್ಲಿ ಸಾಮಾಜಿಕ, ಆರ್ಥಿಕ ಸಮಾನತೆ ತರಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಲು ಇರಬೇಕು ಎಂದರು.

ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ

ಸರ್ಕಾರ ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಆದರೆ ಅದೇ ಮೊದಲ ಆದ್ಯತೆ ಅಲ್ಲ. ಅನ್ಯಾಯಗಳನ್ನು ಸರಿಪಡಿಸುವುದು ಸರ್ಕಾರದ ಕರ್ತವ್ಯ. ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ. ಬೇಡಿಕೆಗಳು ನಂತರದ ಆದ್ಯತೆ. ಇದನ್ನು ಸ್ಪಷ್ಟವಾಗಿ ನೀವು ಅರ್ಥಮಾಡಿಕೊಂಡಿದ್ದೀರಿ ಎನ್ನುವುದು ನನ್ನ ಅನಿಸಿಕೆ ಎಂದರು.

ನಾನು ಸರಕಾರಿ ನೌಕರರ ಪರ

ಸರಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, 6ನೇ ವೇತನ ಆಯೋಗವನ್ನು ನಮ್ಮ ಸರಕಾರ ಜಾರಿಗೆ ತಂದಿತ್ತು. ಆ ಸಂದರ್ಭದಲ್ಲಿ ಸರಕಾರಿ ನೌಕರರ ವಿರುದ್ಧವಿರುವುದಾಗಿ ನನ್ನ ಮೇಲೆ ಅರೋಪ ಮಾಡಿದ್ದರು. ಆದರೆ ನಾನೇ 6ನೇ ವೇತನ ಆಯೋಗವನ್ನು ರಚಿಸಿದ್ದೆವು. ಸರಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕೆಲಸವಾಗಬೇಕು. 6ನೇ ವೇತನ ಆಯೋಗದಲ್ಲಿ ಶೇ. 30ರಷ್ಟು ಫಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. ಈಗ 7 ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ 17% ಹೆಚ್ಚಳ ಮಾಡಲಾಗಿತ್ತು. ಆಯೋಗದ ಅಂತಿಮ ವರದಿ ನೀಡಲು ಇನ್ನಷ್ಟು ಕಾಲಾವಕಾಶ ಬೇಕೆಂದು ಆಯೋಗದ ಆಧ್ಯಕ್ಷರು ಕೋರಿದ್ದು, ಮಾರ್ಚ್ 15 ರವರೆಗೆ ವರದಿ ನೀಡಲು ಸಮಯಾವಕಾಶ ನೀಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನಲೆ , ಆಯೋಗದ ಅಂತಿಮ ವರದಿಯನ್ನು ಆದಷ್ಟು ಜಾಗ್ರತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ನಾನು ಸರಕಾರಿ ನೌಕರರ ಪರವಾಗಿದ್ದೇನೆ ಎಂದು ತಿಳಿಸಿದರು.

ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಶೇಷಯ್ಯ, ಭೈರಪ್ಪ, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಶೀನಿವಾಸ ತಿಮ್ಮೇಗೌಡ, ಖಜಾಂಚಿ ಡಾ: ಸಿದ್ದರಾಮಣ್ಣ, ರಾಜ್ಯ ಮಟ್ಟದ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X