Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಎನ್‌ಎಸ್‌ಎಸ್‌ ಸೆಕ್ಷನ್ 338, 339 ಅಡಿ...

ಬಿಎನ್‌ಎಸ್‌ಎಸ್‌ ಸೆಕ್ಷನ್ 338, 339 ಅಡಿ ತಕರಾರು ಅರ್ಜಿ; ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ29 Oct 2025 1:40 PM IST
share
ಬಿಎನ್‌ಎಸ್‌ಎಸ್‌ ಸೆಕ್ಷನ್ 338, 339 ಅಡಿ ತಕರಾರು ಅರ್ಜಿ; ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮಂಗಳೂರು: ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಲ್ಲಿ ಬಿಎನ್‌ಎಸ್‌ಎಸ್‌ ಸೆಕ್ಷನ್ 338 - 339 ಅಡಿ ಅವಕಾಶ ಕೋರಿ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಅವರು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ನ.4ಕ್ಕೆ ಮುಂದೂಡಿದೆ.

ಪ್ರಾಸಿಕ್ಯೂಶನ್ ಜೊತೆ ದೂರುದಾರರ ವಕೀಲರ ವಾದವನ್ನೂ ಆಲಿಸಿ ಜಾಮೀನು ನೀಡುವ ಬಗ್ಗೆ ಕೋರ್ಟ್ ವಿವೇಚನೆಯನ್ನು ಬಳಸಿಕೊಳ್ಳಬೇಕು ಎಂದು ಈಶ್ವರಿ ಪದ್ಮುಂಜರವರ ಪರವಾಗಿ ಹಿರಿಯ ವಕೀಲ ಸತೀಶನ್ ಅವರು ಅರ್ಜಿ ಸಲ್ಲಿಸಿ ವಾದ ಮಂಡಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದೇನು?

ಪ್ರಭಾಕರ ಭಟ್ ದೀಪಾವಳಿ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು.

ಈ ವೇಳೆ ಅವರು, “ಆಚೆ ಮನೆಯ ಬ್ಯಾರ್ದಿ ಮಹಿಳೆಯು 6ನೆಯದ್ದು ಆಗಿ 7 ನೇ ಗರ್ಭಿಣಿಯಾಗಿದ್ದಳು. ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಅವಳಿಗೆ ಯಾರಾದ್ರು ಕೇಳಿದ್ರಾ? ಕೇಳುವ ದೈರ್ಯವೂ ಇಲ್ಲ. ಕೇಳಿದರೆ ಅದು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು. ಇಲ್ಲದೇ ಇದ್ದರೆ ಮಂಗಳೂರು ವಿಧಾನಸಭಾ ಕ್ಷೇತ್ರ, ಉ‌ಳ್ಳಾಲದಲ್ಲಿ ಹಿಂದೂ ಗೆಲ್ಲಲು ಸಾದ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು. ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ಓಟು ಇದೆ. ಹಿಂದೂಗಳು 90 ಸಾವಿರ ಇರೋದು. ನಮ್ಮನ್ನು ಸರ್ವನಾಶ ಮಾಡ್ತಾರೆ. ಹಾಗಾಗಿ ನಮ್ಮ ಮನೆಯಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು” ಎಂದು ಹೇಳಿದ್ದರು.

ಈ ದ್ವೇಷ ಭಾಷಣದ ವಿರುದ್ಧ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪ್ರಭಾಕರ ಭಟ್ ಮತ್ತು ದೀಪೋತ್ಸವ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಬಿಎನ್‌ಎಸ್‌-2023ರ ಸೆಕ್ಷನ್ 79, 196, 299, 302 ಹಾಗೂ 3(5) ಅಡಿಯಲ್ಲಿ ಎಫ್ಐಆರ್ ದಾಖಲಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಆರೋಪಿ ಪ್ರಭಾಕರ ಭಟ್ ಬಂಧನದ ಭೀತಿಯಿಂದ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 27 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ‘ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ’ ನೀಡಿ ಪೂರ್ಣ ಪ್ರಮಾಣದ ವಿಚಾರಣೆ ಮತ್ತು ನಿರೀಕ್ಷಣಾ ಜಾಮೀನು ಸಂಬಂಧ ಅದೇಶವನ್ನು ಅಕ್ಟೋಬರ್ 29 ಕ್ಕೆ ಮುಂದೂಡಿತ್ತು.

ಅಕ್ಟೋಬರ್ 29 ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ‘ಆರೋಪಿ ಪ್ರಭಾಕರ ಭಟ್ ಬಂಧನದಿಂದ ರಕ್ಷಣೆ ಪಡೆಯಲು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಪ್ರಭಾಕರ್ ಭಟ್ ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ವೇಳೆ ಅಗತ್ಯವಾದ ವಿಚಾರಗಳನ್ನು ನ್ಯಾಯಾಲಯದಿಂದ ಮರೆಮಾಚಿದ್ದಾರೆ. ಅದರ ಫಲವಾಗಿ ಅವರಿಗೆ ತಾತ್ಕಾಲಿಕ ರಕ್ಷಣೆ ದೊರೆತಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

(ಹಿರಿಯ ವಕೀಲ ಸತೀಶನ್ / ಈಶ್ವರಿ ಪದ್ಮುಂಜ)


‘ಆರೋಪಿ ಪ್ರಭಾಕರ ಭಟ್ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ತಾನು ಕಾನೂನಿನ ಗೌರವವನ್ನು ಹಾಳು ಮಾಡುವವನಲ್ಲ ಎಂದು ಹೇಳಿಕೊಂಡರೂ, ಅವರು ಹಲವು ಬಾರಿ ವಿಭಿನ್ನ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಹವ್ಯಾಸ ಹೊಂದಿದ್ದಾರೆ. ವಿಶೇಷವಾಗಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡುವುದು ಅವರ ನಿಯಮಿತ ಚಟುವಟಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಆರೋಪಿಯು ಮಾಡಿದ ಅಪರಾಧಗಳ ವಿವರ ಹಾಗೂ ಅವರ ನಡವಳಿಕೆಯ ಇತಿಹಾಸವನ್ನು ನ್ಯಾಯಾಲಯದ ಮುಂದೆ ಮಂಡಿಸುವುದು ಮುಖ್ಯವಾಗಿದೆ. ಈ ರೀತಿ ನ್ಯಾಯಾಲಯದ ಮುಂದೆ ಆರೋಪಿ ಪ್ರಭಾಕರ್ ಭಟ್ ಸಂಪೂರ್ಣ ಇತಿಹಾಸವನ್ನು ಮಂಡಿಸಿದರೆ, ತಾತ್ಕಾಲಿಕ ಅಥವಾ ಪೂರ್ಣ ಜಾಮೀನು ನೀಡುವ ವಿಚಾರದಲ್ಲಿ ನ್ಯಾಯಾಲಯವು ತನ್ನ ವಿವೇಚನೆಯನ್ನು ಬಳಸಲು ನೆರವಾದಂತಾಗುತ್ತದೆ. ಹಾಗಾಗಿ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಪರವಾಗಿ ಆರೋಪಿ ಪ್ರಭಾಕರ ಭಟ್ ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಲು ಮತ್ತು ವಾದ ಮಾಡಲು ಅವಕಾಶ ಕೊಡಬೇಕು’ ಎಂದು ಹಿರಿಯ ವಕೀಲ ಸತೀಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಸಹಜವಾಗಿ ಆರೋಪಿ ವಿರುದ್ಧ ಸರ್ಕಾರಿ ವಕೀಲರಿಗೆ ಮಾತ್ರ ವಾದಿಸುವ ಮತ್ತು ತಕರಾರು ಅರ್ಜಿ ಸಲ್ಲಿಸುವ ಅವಕಾಶ ಇರುತ್ತದೆ. ದೂರುದಾರರ ಪರ ವಕೀಲರು ತಕರಾರು ಅರ್ಜಿ ಅಥವಾ ವಾದ ಮಂಡಿಸಬೇಕಾದರೆ ಬಿಎನ್‌ಎಸ್‌ಎಸ್ ಸೆಕ್ಷನ್ 338 ಮತ್ತು 339 ರಂತೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಅನುಮತಿ ಕೋರಬೇಕಿರುತ್ತದೆ. ಇದೀಗ ದೂರುದಾರರಾಗಿರುವ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜ ಪರವಾಗಿ ಹಿರಿಯ ವಕೀಲ ಸತೀಶನ್ ಅರ್ಜಿ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X