Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಮಂತ್ರಿ ಆವಾಸ್ ಯೋಜನೆ:...

ಪ್ರಧಾನಮಂತ್ರಿ ಆವಾಸ್ ಯೋಜನೆ: ಫಲಾನುಭವಿಗಳ ವಂತಿಗೆ ಒಂದು ಲಕ್ಷ ರೂ.ಗಳಿಗೆ ಇಳಿಸಲು ಸಚಿವ ಸಂಪುಟ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ21 Dec 2023 10:49 PM IST
share
ಪ್ರಧಾನಮಂತ್ರಿ ಆವಾಸ್ ಯೋಜನೆ: ಫಲಾನುಭವಿಗಳ ವಂತಿಗೆ ಒಂದು ಲಕ್ಷ ರೂ.ಗಳಿಗೆ ಇಳಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ)ಯಡಿ 2015-18ರವರೆಗೆ ಮಂಜೂರಾಗಿರುವ 1,80,253 ಮನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದ್ದು, ಈ ಪೈಕಿ ಫಲಾನುಭವಿಗಳು ಭರಿಸಬೇಕಿದ್ದ ವಂತಿಗೆ 4.50 ಲಕ್ಷ ರೂ.ಗಳನ್ನು ಒಂದು ಲಕ್ಷ ರೂ.ಗಳಿಗೆ ಇಳಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ವಸತಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಂದು ಮನೆಗೆ 7.50 ಲಕ್ಷ ರೂ.ವೆಚ್ಚವಾಗುತ್ತದೆ. ಇದರಲ್ಲಿ ಕೇಂದ್ರ ಸರಕಾರ 1.50 ಲಕ್ಷ ರೂ., ರಾಜ್ಯ ಸರಕಾರದಿಂದ 1.20 ಲಕ್ಷ ರೂ.(ಸಾಮಾನ್ಯ ವರ್ಗದವರಿಗೆ), ಎಸ್ಸಿ-ಎಸ್ಟಿಗಳಿಗೆ 2 ಲಕ್ಷ ರೂ.ಸಹಾಯಧನ ನೀಡಲಾಗುತ್ತದೆ. ಉಳಿದ 4.50 ಲಕ್ಷ ರೂ.ಗಳನ್ನು ಫಲಾನುಭವಿ ಪಾವತಿಸಬೇಕಿತ್ತು ಎಂದರು.

1,80,253 ಮನೆಗಳಿಗೆ ಫಲಾನುಭವಿಗಳಿಂದ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿಗೆ 6691 ಕೋಟಿ ರೂ. ಪಾವತಿಯಾಗಬೇಕಿತ್ತು. ಆದರೆ, ಬಂದಿರುವುದು ಕೇವಲ 110 ಕೋಟಿ ರೂ.ಗಳು ಮಾತ್ರ. ಫಲಾನುಭವಿಗಳು ತುಂಬಾ ಬಡವರು ಇರುವುದರಿಂದ 4.50 ಲಕ್ಷ ರೂ. ಪಾವತಿ ಕಷ್ಟವಾಗುತ್ತದೆ ಎಂದು ಮನಗಂಡು, ಈ ಮೊತ್ತವನ್ನು ಒಂದು ಲಕ್ಷ ರೂ.ಗಳಿಗೆ ಇಳಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ಹೇಳಿದರು.

ಉಳಿದ ಹಣವನ್ನು ಸರಕಾರದ ವತಿಯಿಂದ ಪಾವತಿಸಲು ತೀರ್ಮಾನಿಸಲಾಗಿದ್ದು, ಇವತ್ತಿನ ಸಂಪುಟ ಸಭೆಯಲ್ಲಿ ಮೊದಲ ಹಂತದಲ್ಲಿ 500 ಕೋಟಿ ರೂ.ಬಿಡುಗಡೆಗೆ ನಿರ್ಧರಿಸಲಾಗಿದೆ. ಈ ಹಣದಲ್ಲಿ ಮುಂದಿನ ಸಾಲಿನ ಫೆಬ್ರವರಿಯಲ್ಲಿ 48,766 ಮನೆಗಳನ್ನು ಫಲಾನುಭವಿಗಳನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ. ಎರಡು ವರ್ಷದಲ್ಲಿ ಎಲ್ಲ 1,80,253 ಮನೆಗಳನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಒಟ್ಟು ಫಲಾನುಭವಿ ವಂತಿಗೆ ಮೊತ್ತ 5403 ಕೋಟಿ ರೂ., ಮೂಲಭೂತ ಸೌಕರ್ಯಗಳನ್ನು ಒದಗಿಸಲು 767 ಕೋಟಿ ರೂ.ಗಳು ಸೇರಿ ಒಟ್ಟು 6170 ಕೋಟಿ ರೂ.ಗಳನ್ನು ರಾಜ್ಯ ಸರಕಾರದಿಂದ ಭರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X