Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ...

ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ಅವರು ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ : ಪ್ರಹ್ಲಾದ್‌ ಜೋಶಿ

ವಾರ್ತಾಭಾರತಿವಾರ್ತಾಭಾರತಿ18 Oct 2024 6:13 PM IST
share
ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ಅವರು ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ : ಪ್ರಹ್ಲಾದ್‌ ಜೋಶಿ

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, "ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ" ಎಂದು ಆರೋಪವನ್ನು ತಳ್ಳಿ ಹಾಕಿದರು.

ʼಗೋಪಾಲ್ ಜೋಶಿ ಮಾತ್ರವಲ್ಲ, ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲʼ ಎಂದು ಜೋಶಿ ಪುನರುಚ್ಚರಿಸಿದರು.

ʼಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಸ್ಪಷ್ಟನೆ ನೀಡಿದರು. ಇನ್ನು, ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ, ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆʼ ಎಂದು ಹೇಳಿದರು.

ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ: ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪೆಸಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ.ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ಎಂದರು.

ಜೋಶಿ ನುಣಿಚಿಕೊಳ್ಳುವುದು ಸಲ್ಲ: ‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಜೋಶಿ ರಾಜೀನಾಮೆ ನೀಡಬೇಕು. ಗೋಪಾಲ್ ಜೋಶಿ, ಪ್ರಹ್ಲಾದ್ ಜೋಶಿ ಜೊತೆಗೆ ಇದ್ದಾರೆಂಬುದು ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಮೇಲೆ ಬಂದಿರುವ ಆರೋಪಕ್ಕೂ ನನಗೆ ಸಂಬಂಧವಿಲ್ಲವೆಂದು ನುಣಿಚಿಕೊಳ್ಳುವುದು ಸರಿಯಲ್ಲ. ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈಡಿ, ಐಟಿಯನ್ನು ಬಿಟ್ಟು ಹೆದರಿಸಿ ದೇವಾನಂದ ಚೌಹಾಣ್‍ರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದರು. ಟಿಕೆಟ್ ಕೊಡಿಸುವ ನೆಪದಲ್ಲಿ 2ಕೋಟಿ ರೂ.ಹಣ ಪಡೆದು ವಂಚಿಸಿದ್ದಾರೆ. ಗೋಪಾಲ್ ಜೋಶಿ ಆರೆಸ್ಸೆಸ್ ನಲ್ಲಿ ತೊಡಗಿಸಿಕೊಂಡವರು. ಆರೆಸ್ಸೆಸ್ ನ ಕೆಲ ನಾಯಕರು ಈ ರೀತಿಯ ಟಿಕೆಟ್ ದಂಧೆಯಲ್ಲಿ ತೊಡಗಿರುವ ಬಗ್ಗೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ’

-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X