Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಪುಟ ಸಭೆಯನ್ನೇ ಮುಂದೂಡಿ ಸಿಎಂ ಧರಣಿ...

ಸಂಪುಟ ಸಭೆಯನ್ನೇ ಮುಂದೂಡಿ ಸಿಎಂ ಧರಣಿ ದುರಂತವೇ ಸರಿ : ಪ್ರಹ್ಲಾದ್‌ ಜೋಶಿ

"ಇಲ್ಲದ ಎಸ್‌ಐಆರ್‌ ಗುಮ್ಮ ಸೃಷ್ಟಿಸಿ ಜನರ ದಿಕ್ಕು ತಪ್ಪಿಸುವ ನಾಟಕವಿದು"

ವಾರ್ತಾಭಾರತಿವಾರ್ತಾಭಾರತಿ1 Oct 2026 10:00 PM IST
share
ಸಂಪುಟ ಸಭೆಯನ್ನೇ ಮುಂದೂಡಿ ಸಿಎಂ ಧರಣಿ ದುರಂತವೇ ಸರಿ : ಪ್ರಹ್ಲಾದ್‌ ಜೋಶಿ

ಹೊಸದಿಲ್ಲಿ: ಕರ್ನಾಟಕದಲ್ಲಿ ಬರ ಪರಿಸ್ಥಿತಿ, ರೈತರ ಸಂಕಷ್ಟ ಹಾಗೂ ಜನರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕಾದ ಮುಖ್ಯಮಂತ್ರಿ ರಾಜ್ಯ ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿರುವುದು ನಿಜಕ್ಕೂ ದುರಂತವೇ ಸರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಕಲಿ ಗಾಂಧಿಗಳನ್ನು ಓಲೈಸಲು ಇಲ್ಲದ SIR ಗುಮ್ಮವನ್ನು ಸೃಷ್ಟಿಸಿ ಜನರ ದಿಕ್ಕು ತಪ್ಪಿಸುವ ನಾಟಕವಾಡುತ್ತಿದ್ದಾರೆ. ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆ ಮಾಚಲು ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದ್ದಾರೆ.

ರಾಜ್ಯದ ಒಬ್ಬ ಮುಖ್ಯಮಂತ್ರಿಯಾಗಿ ಬರದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸುವ ಬದಲು ರಾಜ್ಯ ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಬೆಂಗಳೂರಿನಲ್ಲಿ ಮುಖ್ಯ ಚುನಾವಣಾಧಿಕಾರಿ ಕಚೇರಿ ಎದುರು ಏಕಾಏಕಿ ಧರಣಿ ನಡೆಸುತ್ತಿರುವುದು ನಿಜಕ್ಕೂ ಖಂಡನೀಯ. ಇದು ರೈತರ ಮತ್ತು ಜನಸಾಮಾನ್ಯರ ಮೇಲೆ ಇವರಿಗೆ ಅದೆಷ್ಟು ಕಾಳಜಿಯಿದೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದಿದ್ದಾರೆ ಜೋಶಿ.

ರಾಜ್ಯದ ದೊರೆಯಾಗಿ ರೈತರ ಸಂಕಷ್ಟ, ಬರಗಾಲದ ಪರಿಸ್ಥಿತಿ ಹಾಗೂ ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡುವುದನ್ನು ಬಿಟ್ಟು ಆಡಳಿತವನ್ನು ಸಂಪೂರ್ಣ ನಿರ್ಲಕ್ಷಿಸಿ, ನಕಲಿ ಗಾಂಧಿಗಳನ್ನು ಓಲೈಸಲು ಮತ್ತು ಸಂದೇಹಾಸ್ಪದ ಮತದಾರರನ್ನು ರಕ್ಷಿಸಲು ಈ ರೀತಿ ಧರಣಿ ನಡೆಸುತ್ತಿರುವುದು ವಿಷಾದನೀಯ ಎಂದಿದ್ದಾರೆ.

ಚುನಾವಣಾ ಪ್ರಕ್ರಿಯೆ, ಎಸ್ಐಆರ್ ಪ್ರಕ್ರಿಯೆ, ಫಾರ್ಮ್ 7, ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಚುನಾವಣಾ ಅಧಿಕಾರಿಗಳಿಗೆ ಹಾಗೂ ಬಿಎಲ್ಎ, ಬಿಎಲ್ಓಗಳಿಗೂ ಸ್ಪಷ್ಟ ಅರಿವಿರುತ್ತದೆ ಮತ್ತು ಚುನಾವಣಾ ಆಯೋಗವೂ ಈ ಬಗ್ಗೆ ನಿರಂತರವಾಗಿ ಗಮನಹರಿಸುತ್ತಿರುತ್ತದೆ. ​ಹೀಗಿದ್ದರೂ ಡಿಕೆ ಶಿವಕುಮಾರ್‌ ಅವರು ಸಿಎಂ ಆಗಿ ಧರಣಿಯ ಹಾದಿ ತುಳಿದಿರುವುದು ಅಕ್ಷಮ್ಯ ಎಂದು ಹೇಳಿದ್ದಾರೆ.

ಪೊಲೀಸರು ಈಗೇಕೆ ಎಫ್‌ಐಆರ್‌ ಹಾಕಿಲ್ಲ?: ​ಬೆಂಗಳೂರಿನಲ್ಲಿ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಡೆ ಅವಕಾಶವಿಲ್ಲ ಎನ್ನುವ ಪೊಲೀಸರು, ಬೇರೆಯವರು ಎಲ್ಲಾದರೂ ಧರಣಿ ನಡೆಸಿದರೆ ತತ್‌ಕ್ಷಣವೇ ಕ್ರಮ ಕೈಗೊಳ್ಳುತ್ತಾರೆ. ಈಗ ಕಾನೂನು ಉಲ್ಲಂಘಿಸಿ ಧರಣಿ ಕುಳಿತವರ ಮೇಲೆ ಎಫ್‌ಐಆರ್ ದಾಖಲಿಸದೆ ಸುಮ್ಮನಿರುವುದೇಕೆ? ಎಂದು ಕೇಂದ್ರ ಸಚಿವ ಜೋಶಿ ಪ್ರಶ್ನಿಸಿದ್ದಾರೆ.

Tags

Prahlad JoshiSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X