Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಜ್ವಲ್ ರೇವಣ್ಣ ಪ್ರಕರಣ |...

ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್‌ಐಟಿಯಿಂದ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ : ಸಿಎಂ ಸಿದ್ದರಾಮಯ್ಯ

"ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಒಂದು ಸೂಜಿ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ"

ವಾರ್ತಾಭಾರತಿವಾರ್ತಾಭಾರತಿ6 May 2024 10:40 PM IST
share
ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್‌ಐಟಿಯಿಂದ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘‘ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದು ಅಸಮಧಾನ ಹೊರಹಾಕಿದ್ದಾರೆ.

ಎಸ್ ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್ ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು. ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ.

‘‘ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ.…

— Siddaramaiah (@siddaramaiah) May 6, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X