Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ವಿಡಿಯೋ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ವಿಡಿಯೋ ಹಂಚಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಸ್ಐಟಿ

ವಾರ್ತಾಭಾರತಿವಾರ್ತಾಭಾರತಿ6 May 2024 11:30 AM IST
share
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ವಿಡಿಯೋ ಹಂಚಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಸ್ಐಟಿ

ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಿಶೇಷ ತನಿಖಾ ತಂಡ ಎಸ್ ಐ ಟಿ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಎಸ್ ಐ ಟಿ ಈ ರೀತಿಯ ವಿಡಿಯೋಗಳನ್ನು ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದೆ.

ಖಾಸಗಿ ಮೆಸೇಜಿಂಗ್ ಆಪ್ ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದು ಘಟನೆಗೆ ಸಂಬಂಧಿಸಿದ ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಸದರಿ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಸ್ ಲೈನ್ 6360938947 ಈ ನಂಬರ್ ಅನ್ನು ಬೆಳಿಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್ ಐ ಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದೆ.

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದದ್ದು. ಹಿಂಜರಿಯಬೇಕಾದದ್ದು, ಅವಮಾನ ಎಂದು ಭಾವಿಸಬೇಕಾದದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್ ಐ ಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸಿಲರುಗಳು, ವೈದ್ಯರುಗಳು, ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್ ಐ ಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X