Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜ್ಞಾನೇಶ್ ಹೋದರೆ ಮತ್ತೊಬ್ಬ ಅಜ್ಞಾನೇಶ್...

ಜ್ಞಾನೇಶ್ ಹೋದರೆ ಮತ್ತೊಬ್ಬ ಅಜ್ಞಾನೇಶ್ ಬರುತ್ತಾನೆ, SIR ರದ್ದಾಗಲಿ : ಪ್ರಕಾಶ್ ರಾಜ್

ವಾರ್ತಾಭಾರತಿವಾರ್ತಾಭಾರತಿ8 Oct 2026 6:43 PM IST
share
ಜ್ಞಾನೇಶ್ ಹೋದರೆ ಮತ್ತೊಬ್ಬ ಅಜ್ಞಾನೇಶ್ ಬರುತ್ತಾನೆ, SIR ರದ್ದಾಗಲಿ : ಪ್ರಕಾಶ್ ರಾಜ್

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯಿಂದ ಉಂಟಾಗಿರುವ ಅನ್ಯಾಯ ಮತ್ತು ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‍ಐಆರ್ ವಿರೋಧಿ ಒಕ್ಕೂಟ ಹಾಗೂ ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಇಂದು (ಅ.8) ಜನತಾ ನ್ಯಾಯಾಲಯ ಹಾಗೂ ಬೃಹತ್ ಪ್ರತಿಭಟನೆ ನಡೆಯಿತು.

SIRನಿಂದ ತೊಂದರೆಗೊಳಗಾದವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ‘ಜನತಾ ನ್ಯಾಯಾಲಯ’ ರೂಪದಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, SIR ಪ್ರಕ್ರಿಯೆ ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಕಾಶ್ ರಾಜ್, ನಾವು ಯಾವುದೇ ರಾಜಕೀಯ ಪಕ್ಷವಲ್ಲ. ನಾವು ಈ ದೇಶದ ಪ್ರಜೆಗಳು. ಇದು ನಮ್ಮ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟ. ಎಸ್‍ಐಆರ್‌ನಿಂದ ಮತದಾನದ ಹಕ್ಕು ಕಳೆದುಕೊಂಡವರನ್ನು ಭೇಟಿ ಮಾಡಿ ಅವರಿಗೆ ಆಗಿರುವ ಅನ್ಯಾಯವನ್ನು ಕಂಡಿದ್ದೇನೆ. ಚುನಾವಣಾ ಆಯೋಗ ಚುನಾವಣಾ ಪಟ್ಟಿಯನ್ನು ಸ್ವಚ್ಛ ಮಾಡುತ್ತಿಲ್ಲ, ನಮ್ಮನ್ನು ಪಟ್ಟಿಯಿಂದ ತೆಗೆಯಲು ಬಂದಿದೆ. ಒಟ್ಟಿನಲ್ಲಿ ಈ ಜ್ಞಾನೇಶ್ ಕುಮಾರ್ ಹೋದರೆ ಮತ್ತೊಬ್ಬ ಅಜ್ಞಾನೇಶ್ ಬರುತ್ತಾನೆ. ನಮಗೆ ಎಸ್‍ಐಆರ್ ರದ್ದಾಗಬೇಕು. ಜ್ಞಾನೇಶ್ ವಿಚಾರಣೆ ನಡೆಯಬೇಕು, ಅವರ ಮೇಲೆ ಮೊಕದ್ದಮೆ ದಾಖಲಾಗಬೇಕು ಎಂದು ಆಗ್ರಹಿಸಿದರು.

ಎಸ್‍ಐಆರ್ ರದ್ದುಗೊಳಿಸಿ ಜನರ ಘನತೆ ಮತ್ತು ಹಕ್ಕನ್ನು ಮರಳಿಸುವವರೆಗೆ ಹೋರಾಟ ಮುಂದುವರಿಯಲಿದೆ. ನಾವು ಶಾಂತಿಯುತವಾಗಿ ರಸ್ತೆಯಲ್ಲಿ ನಿಂತು ಹೋರಾಟ ನಡೆಸುವುದಾಗಿ ಪ್ರಕಾಶ್ ರಾಜ್ ಘೋಷಿಸಿದರು.

ಪ್ರತಿಭಟನೆಯಲ್ಲಿ ಖ್ಯಾತ ಯೂಟ್ಯೂಬರ್‌ ಧ್ರುವ ರಾಠಿ ಮಾತನಾಡಿ, ʼವೋಟ್ ಚೋರಿ ಆಗುತ್ತಿದೆ ಎನ್ನುವುದಕ್ಕೆ ನಾನು ಮೂರು ಸಾಕ್ಷಿಗಳನ್ನು ನೀಡುತ್ತೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಉತ್ತರಿಸಬೇಕು. ವೋಟ್ ಚೋರಿಗೆ ಸಾಕ್ಷಿಯಾಗಿ ಪಶ್ಚಿಮ ಬಂಗಾಳದಲ್ಲಿ ಸುಮಾರು 70 ಲಕ್ಷ ಜನರ ಹೆಸರುಗಳನ್ನು ತೆಗೆದುಹಾಕಲಾಗಿತ್ತು. ಅವರು ಮೊದಲು ಮತದಾರರ ಪಟ್ಟಿಯಲ್ಲಿದ್ದರೂ ಚುನಾವಣಾ ಸಂದರ್ಭದಲ್ಲಿ ಪಟ್ಟಿಯಲ್ಲಿ ಇರಲಿಲ್ಲ, ಚುನಾವಣೆಯ ಬಳಿಕ ಮತ್ತೆ ಪಟ್ಟಿಯಲ್ಲಿ ಕಾಣಿಸಿಕೊಂಡರು ಎಂದು ಅವರು ಹೇಳಿದರು.

CJP ಮುಖಂಡರಾದ ಅಭಿಜೀತ್ ದೀಪ್ಕೆ, ಸೌರವ್ ದಾಸ್‌, ಅಶುತೋಷ್‌ ರಾಂಕಾ ಪ್ರತಿಭಟನೆಯಲ್ಲಿ ಭಾಗವಹಿಸಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

Tags

Prakash RajGyanesh Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X