ʼಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತʼ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಪ್ರಿಯಾಂಕ್ ಖರ್ಗೆ/ಪ್ರತಾಪ್ ಸಿಂಹ
ಬೆಂಗಳೂರು : ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಗೃಹ ಇಲಾಖೆಯು ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದಿದ್ದಾರೆ.
ʼಅಸ್ತಿತ್ವ ಕಳೆದುಕೊಂಡು ಕತ್ತಲೆ ಜಗತ್ತಿನ ಅತೃಪ್ತ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ. ‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ. ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದುʼ ಎಂದು ಮಾಜಿ ಸಂಸದ ಪ್ರತಾಪ್ ಸಿಂಹರ ಹೆಸರು ಉಲ್ಲೇಖಿಸದೆ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಪ್ರತಾಪ್ ಸಿಂಹ ಹೇಳಿದ್ದೇನು?
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಇನ್ಸ್ಪೆಕ್ಟರ್ ಧನಂಜಯ ಅವರು ಆಡಿದ ಮಾತುಗಳು ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಬ್ರಿಟಿಷರ ಕಾಲದ ದರ್ಪವನ್ನು ಪೊಲೀಸರು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಲಿ. ಯುವಕರಿಗೆ ಧಮ್ಕಿ ಹಾಕಲು ನೀವ್ಯಾರು? ಇನ್ನೊಮ್ಮೆ ಈ ರೀತಿ ಮಾತನಾಡಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ ಎಂದು ಹೇಳಿದ್ದರು.
ಮೈಸೂರಿನ ಕಡೆಯ "ಪೇಟೆ ರೌಡಿ"ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 12, 2026
ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ..
"ಪೊಲೀಸ್ ಠಾಣೆಗೆ…






