Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೋಕಸಭೆ ಚುನಾವಣೆಗೆ ಸಿದ್ಧತೆ | ಆಗಸ್ಟ್...

ಲೋಕಸಭೆ ಚುನಾವಣೆಗೆ ಸಿದ್ಧತೆ | ಆಗಸ್ಟ್ 15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ

ಜಿಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ, ವೈ ಎಸ್ ವಿ ದತ್ತಾ ಸಂಚಾಲಕ

ವಾರ್ತಾಭಾರತಿವಾರ್ತಾಭಾರತಿ7 Aug 2023 5:46 PM IST
share
ಲೋಕಸಭೆ ಚುನಾವಣೆಗೆ ಸಿದ್ಧತೆ | ಆಗಸ್ಟ್ 15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ

ಬೆಂಗಳೂರು, ಆ.7: ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಆ.15ರ ನಂತರ ಜೆಡಿಎಸ್ ಪಕ್ಷದ ನಾಯಕರು, ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿರುವ ಜೆಡಿಎಸ್ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಎದೆಗುಂದದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನ ನೀಡಬೇಕು ಎಂದು ಪಕಷದ ರಾಷ್ಟ್ರೀಯ ಅಧ್ಯಕ್ಷರು ತಾಕೀತು ಮಾಡಿದ್ದು, ಅವರ ಆದೇಶದಂತೆ ಪಕ್ಷ ಸಂಘಟನೆಗೆ ಬಹಳಷ್ಟು ಒತ್ತು ಕೊಟ್ಟು ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನೂತನ ಕೋರ್ ಕಮಿಟಿ ರಚನೆ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜಿ.ಟಿ. ದೇವೇಗೌಡ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆಗೆ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರು ಈ ಕಮಿಟಿಗೆ ಸಂಚಾಲಕರಾಗಿರುತ್ತಾರೆ. ಒಟ್ಟು 20 ಸದಸ್ಯರು ಕಮಿಟಿಯಲ್ಲಿ ಇರುತ್ತಾರೆ ಎಂದು ಮಾಹಿತಿ ನೀಡಿದರು.

15ರ ನಂತರ ಸಂಘಟನೆಗೆ ಪ್ರವಾಸ: ಪಕ್ಷದ ಸಂಘಟನೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 15ರ ನಂತರ ರಾಜ್ಯಾದ್ಯಂತ ಪಕ್ಷದ ಪ್ರಮುಖ ಮುಖಂಡರು ಪ್ರವಾಸ ಮಾಡಲಿದ್ದಾರೆ. ನಾನೂ ಸೇರಿ ಪಕ್ಷದ ಬಹುತೇಕ ಹಿರಿಯ ನಾಯಕರು ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ನಮ್ಮ ಹೋರಾಟ ಸಂಘಟಿತವಾಗಿರಬೇಕು ಹಾಗೂ ವಿಷಯಾಧಾರಿತ ಆಗಿರಬೇಕು. ಜನಪರವಾಗಿ ಇರಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಅದರಂತೆ ನಾವು ಹೋರಾಟ ಮಾಡುತ್ತೇವೆ. ಅಲ್ಲದೆ, ಪಕ್ಷದ ವಿವಿಧ ವಿಭಾಗಗಳಿಗೆ ಮುಖ್ಯಸ್ಥರನ್ನು ನೇಮಕ ಮಾಡುವ ಬಗ್ಗೆಯೂ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.

ಸಭೆಯಲ್ಲಿ ಜೆಡಿಎಸ್ ನಾಯಕರಾದ ಬಂಡೆಪ್ಪ ಕಾಶೆÉಂಪೂರ್, ಎಚ್.ಕೆ.ಕುಮಾರಸ್ವಾಮಿ, ಅಲ್ಕೊಡ್ ಹನುಮಂತಪ್ಪ, ಸುರೇಶ್‍ಗೌಡ, ಅನ್ನದಾನಿ, ನಿಸರ್ಗ ನಾರಾಯಣಸ್ವಾಮಿ, ಕೆ.ಎನ್.ತಿಪ್ಪೇಸ್ವಾಮಿ, ನೆಮಿರಾಜ್ ನಾಯ್ಕ, ವೈ.ಎಸ್.ವಿ.ದತ್ತಾ, ಲಿಂಗೇಶ್, ಅಪ್ಪಾಜಿ ಗೌಡ, ವೀರಭದ್ರಯ್ಯ ಹಾಲರವಿ, ಮಾಗಡಿ ಮಂಜುನಾಥ್, ಸೂರಜ್ ನಾಯಕ್ ಸೋನಿ, ತಿಮ್ಮರಾಯಪ್ಪ, ದೊಡ್ಡನಗೌಡ ಪಾಟೀಲ್, ಅಶ್ವಿನ್ ಕುಮಾರ್, ಚೌಡರೆಡ್ಡಿ, ಶ್ರೀಕಂಠೇಗೌಡ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X