Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಾರಂಭದಲ್ಲೇ ಕೋಮುಗಲಭೆಗಳ...

ಪ್ರಾರಂಭದಲ್ಲೇ ಕೋಮುಗಲಭೆಗಳ ತಡೆಯಬೇಕಾದ್ದು ಅನಿವಾರ್ಯ: ಸಿಎಂ ಸಿದ್ದರಾಮಯ್ಯ

"ರಾಜ್ಯದ ಅಭಿವೃದ್ಧಿಯು ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿದೆ"

ವಾರ್ತಾಭಾರತಿವಾರ್ತಾಭಾರತಿ16 July 2025 9:09 PM IST
share
ಪ್ರಾರಂಭದಲ್ಲೇ ಕೋಮುಗಲಭೆಗಳ ತಡೆಯಬೇಕಾದ್ದು ಅನಿವಾರ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು,: ಕೋಮುಗಲಭೆಗಳು ಪ್ರಾರಂಭವಾದರೆ ನಿರಂತರವಾಗಿ ನಡೆಯುತ್ತವೆ. ಅದಕ್ಕಾಗಿ ಪ್ರಾರಂಭದಲ್ಲಿಯೇ ಕೋಮುಗಲಭೆಗಳನ್ನು ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ನಗರದ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ಇರುವ ಕೆಎಸ್‍ಆರ್‍ಪಿ ಸಮುದಾಯ ಭವನವನ್ನು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‍ಸಿಎಲ್ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಕೋಮುಗಲಭೆಗಳು ಆಗಾಗ್ಗೆ ನಡೆಯುತ್ತಲೇ ಇರುವುದರಿಂದ ಈಗಾಗಲೇ ಕರಾವಳಿಯಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಿದ್ದು, ಅದು ಕಾರ್ಯನಿರ್ವಹಿಸುತ್ತಿದೆ. ಕೋಮುಗಲಭೆಗಳನ್ನು ಹತ್ತಿಕ್ಕುವುದು ಅಗತ್ಯವಾಗಿ ಆಗಬೇಕಿದೆ. ಎಲ್ಲಿಯೂ ಕೋಮುಗಲಭೆಗಳು ನಡೆಯಬಾರದು ಎಂದು ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜದಲ್ಲಿ ಅಶಾಂತಿ, ಹಿಂಸೆ, ಕ್ರೌರ್ಯ, ದ್ವೇಷಪೂರಿತ ಭಾಷಣದಿಂದ ಪ್ರಚೋದನೆಗಳು ಹೆಚ್ಚುತ್ತಿರುವುದನ್ನು ಕಾಣಲಾಗುತ್ತಿದೆ. ಶಾಂತಿ ಕದಡುವ ಹಾಗೂ ಹಿಂಸೆ, ದ್ವೇಷವನ್ನು ಪ್ರಚೋದಿಸುವುದನ್ನು ತಡೆದಾಗ ಮಾತ್ರ ಸಮಾಜದ ಒಳಿತು ಸಾಧ್ಯ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆಯನ್ನು ಕಡಿಮೆಗೊಳಿಸುವತ್ತ ಪೊಲೀಸರು ಹೆಚ್ಚಿನ ಗಮನ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ 2023ರಲ್ಲಿ ಹೋಲಿಸದರೆ 2024ರಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸುರಕ್ಷಿತ ವಾತಾವರಣವಿದೆಯೇ, ಜನರ ನೆಮ್ಮದಿ ಬದುಕಿಗೆ ಯೋಗ್ಯವಾದ ಸ್ಥಳವಾಗಿದೆಯೇ ಎಂಬುದನ್ನು ನೋಡಬೇಕೇ ಹೊರತು, ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆಯೇ ಎಂಬುದು ಪರಿಗಣಿತವಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಅಭಿವೃದ್ಧಿಯು ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ. ಉತ್ತಮ ಅಧಿಕಾರಿಗಳಿದ್ದಲ್ಲಿ ಅಂತಹ ಕಡೆ ಅಪರಾಧಗಳು ಕಡಿಮೆಯಿರುವುದು ಗಮನಾರ್ಹ. ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಕೆಳ ಮಟ್ಟದ ಪೊಲೀಸ್ ಅಧಿಕಾರಿಗಳ ಜೊತೆಗೆ ಉತ್ತಮವಾದ ಬಾಂಧವ್ಯವನ್ನು ಹೊಂದಿಕೊಂಡು ಕೆಲಸ ಮಾಡುವುದು ಒಳ್ಳೆಯದು. ಹಿರಿಯ ಅಧಿಕಾರಿಗಳು ಆಗಾಗ್ಗೆ ಪೆÇೀಲೀಸ್ ಠಾಣೆಗೆ ಭೇಟಿ ನೀಡಬೇಕು. ಇತರೆ ಇಲಾಖೆಗಳಿಗೆ ಹೋಲಿಸಿದರೆ ಪೆÇಲೀಸ್ ಇಲಾಖೆಯಲ್ಲಿ ಶ್ರೇಣಿ ವ್ಯವಸ್ಥೆ ಹೆಚ್ಚಿದೆ. ಶಿಸ್ತು ಕೂಡ ಹೆಚ್ಚಿದೆ. ನೀವು ಮನಸ್ಸು ಮಾಡಿದರೆ ಅಪರಾಧಗಳು ತಾನಾಗಿಯೇ ಕಡಿಮೆಯಾಗಲು ಸಾಧ್ಯವಾಗುತ್ತದೆ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗೃಹಸಚಿವ ಡಾ.ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ ಸಿಂಗ್, ಕೆಎಸ್‍ಆರ್‍ಪಿ ಎಡಿಜಿಪಿ ಉಮೇಶ್ ಉಪಸ್ಥಿತರಿದ್ದರು.

ಮಾದಕವಸ್ತು ಸಂಪೂರ್ಣ ನಿರ್ನಾಮವಾಗಲಿ..!

2023ಕ್ಕೆ ಹೋಲಿಸಿದರೆ ಸೈಬರ್ ಅಪರಾಧಗಳು 2024ರಲ್ಲಿ ಹೆಚ್ಚಾಗಿವೆ. ಕೊಲೆ, ದರೋಡೆ, ಸರಗಳ್ಳತನ ಮುಂತಾದ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಮಾದಕ ವಸ್ತುಗಳಿಂದ ಯುವ ಪೀಳಿಗೆ ಹಾಳಾದರೆ ಭವಿಷ್ಯ ಹಾಳಾಗುತ್ತದೆ. ಪೊಲೀಸರನ್ನು ಕಂಡರೆ ನಾಗರಿಕರಿಗೆ ಭಯ ಹಾಗೂ ಸ್ನೇಹ ಎರಡೂ ಇರಬೇಕು. ಪೊಲಿಸ್ ಠಾಣೆಗಳು ಜನಸ್ನೇಹಿಯಾಗಿರಬೇಕು. ನಾಗರಿಕರೊಂದಿಗೆ ಒಡನಾಟವಿಟ್ಟುಕೊಂಡು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು. ಆಗ ಪರಿಹಾರಗಳು ಹೊಳೆಯುತ್ತವೆ. ಮಾದಕವಸ್ತುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಪೊಲೀಸ್ ಸಿಬ್ಬಂದಿಯನ್ನು ಬಲಗೊಳಿಸಲು ಅವಶ್ಯವಿರುವುದನ್ನು ಒದಗಿಸಲು ನಮ್ಮ ಸರಕಾರ ಸಿದ್ಧವಿದೆ. ಅಪರಾಧಗಳನ್ನು ಎಷ್ಟು ಕಡಿಮೆ ಮಾಡಲು ಸಾಧ್ಯವೋ ಅಷ್ಟು ಪ್ರಯತ್ನ ಮಾಡಲೇಬೇಕು.

-ಸಿದ್ದರಾಮಯ್ಯ, ಮುಖ್ಯಮಂತ್ರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X