Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಾಲೂಕು ಕಚೇರಿಗಳಿಗೆ ಜನರ ಅನಗತ್ಯ...

ತಾಲೂಕು ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ತಡೆ: ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ24 Aug 2023 8:36 PM IST
share
ತಾಲೂಕು ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ತಡೆ: ಸಚಿವ ಕೃಷ್ಣ ಬೈರೇಗೌಡ

ಬೀದರ್, ಆ.24: ಜನ ಸಾಮಾನ್ಯರ ತಕರಾರು ಅರ್ಜಿಗಳನ್ನು ಕಳೆದ ಎರಡು ತಿಂಗಳಿನಿಂದ ಕಾಲಮಿತಿಯೊಳಗೆ ತ್ವರಿತ ವಿಲೇವಾರಿಗೊಳಿಸಲಾಗುತ್ತಿದೆ. ತಾಲೂಕು ಕಚೇರಿಗಳಿಗೆ ಜನರ ಅನಗತ್ಯ ಅಲೆಡಾಟಕ್ಕೂ ಇದೀಗ ತಡೆ ಹಾಕಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳ ಜನಪರ ಸೇವೆ ಹೀಗೆ ಮುಂದುವರೆಯಲಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಗುರುವಾರ ಬೀದರ್ ನಲ್ಲಿ ನಡೆದ ಕಂದಾಯ ಇಲಾಖೆಯ ಮೊದಲ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನ ಸಾಮಾನ್ಯರು ಹೊಸ ಸರಕಾರದ ಮೇಲೆ ಸಾಕಷ್ಟು ಭರವಸೆ ಮತ್ತು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆ ಭರವಸೆಗಳಿಗೆ ನೀರೆರೆಯುವ ಸಲುವಾಗಿ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಕಳೆದ ಎರಡು ತಿಂಗಳಿನಿಂದ ತತ್ವರಿತಗೊಳಿಸಲಾಗಿದೆ. ವಿಳಂಬವಾಗುತ್ತಿದ್ದ ತಕರಾರು ಅರ್ಜಿಗಳನ್ನು ಕಾಲಮಿತಿ ನಿಗದಿ ಮಾಡಿ ಜನರು ತಾಲೂಕು ಕಚೇರಿಗಳಿಗೆ ದಿನನಿತ್ಯ ಅಲೆಯುವುದನ್ನು ಕಡಿಮೆ ಮಾಡಲಾಗಿದೆ. ಮತ್ತು ಆ ನಿಟ್ಟಿನಲ್ಲಿ ಮತ್ತಷ್ಟು ಸುಧಾರಣೆಗೆ ಚಿಂತನೆಯೂ ನಡೆಯುತ್ತಿದ್ದು, ಬೀದರ್ ಜಿಲ್ಲೆಯಲ್ಲೂ ಅಧಿಕಾರಿಗಳು ಜನಪರ ಸೇವೆ ನೀಡುವ ಸಂಕಲ್ಪ ಮಾಡಬೇಕು ಎಂದರು.

ಹಕ್ಕು ಬದಲಾವಣೆಯ ವಿಳಂಬಕ್ಕೆ ತಡೆ: ಹಕ್ಕು ಬದಲಾವಣೆ ಪ್ರಕರಣಗಳಲ್ಲಿ ಉಂಟಾಗುತ್ತಿದ್ದ ಅನೇಕ ರೀತಿಯ ವಿಲೆಯಲ್ಲಿ ಆಗುತ್ತಿದ್ದ ವಿಳಂಬಗಳನ್ನು ಗಂಭೀರವಾಗಿ ಪರಿಗಣಿಸಿ ವಿಲೆಯನ್ನು ತ್ವರಿತಗೊಳಿಸಲಾಗಿದೆ. ಸಮಸ್ಯಾತ್ಮಕ ಹಕ್ಕು ಬದಲಾವಣೆ ತಕರಾರು ಪ್ರಕರಣಗಳ ವಿಲೆಯನ್ನು ಜೂನ್ ತಿಂಗಳಿನಲ್ಲಿ ಸರಾಸರಿ 27 ದಿನ ಇದ್ದಂತಹದ್ದನ್ನು ಆಗಸ್ಟ್ ತಿಂಗಳಿನಲ್ಲಿ 9 ದಿನಗಳ ಒಳಗೆ ವಿಲೆ ಮಾಡುವಂತಹ ಸುಧಾರಣಾ ಬದಲಾವಣೆ ತರಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಸಾಧಾರಣ ಸಮಸ್ಯೆಯುಳ್ಳ ಹಕ್ಕು ಬದಲಾವಣೆ ತಕರಾರು ಪ್ರಕರಣಗಳ ವಿಲೆಗೆ ಜೂನ್ ನಲ್ಲಿ ಸರಾಸರಿ 27 ದಿನ ತಗಲುತ್ತಿತ್ತು. ಆದರೆ, ಆಗಸ್ಟ್ ತಿಂಗಳಿನಲ್ಲಿ 13 ದಿನಗಳ ಒಳಗೆ ವಿಲೆ ಮಾಡಲಾಗಿದೆ. ಸಮಸ್ಯೆ ಇದ್ದಂತಹ ಹಕ್ಕು ಬದಲಾವಣೆ ಪ್ರಕರಣಗಳ ವಿಲೆಗೆ ಜೂನ್‍ನಲ್ಲಿ ಸರಾಸರಿ 4 ದಿನ ತೆಗೆದುಕೊಂಡಿದ್ದರೆ, ಆಗಸ್ಟ್ ನಲ್ಲಿ ಸರಾಸರಿ 1 ದಿನದಲ್ಲಿ ವಿಲೆ ಮಾಡಲಾಗುತ್ತಿದೆ ಎಂದು ಅವರು ಅಧಿಕಾರಿಗಳನ್ನು ಪ್ರಶಂಸಿಸಿದರು.

ಬೀದರ್ ಜಿಲ್ಲೆಯಲ್ಲಿ ಕಳೆದ ಜೂನ್ ತಿಂಗಳಿನಲ್ಲಿ ಪಹಣಿ ತಿದ್ದುಪಡಿ ಪ್ರಕರಣಗಳು 4310 ಬಾಕಿ ಇತ್ತು. ಆದರೆ, ವಿಭಾಗವಾರು ಸಭೆಯ ನಂತರ ಇದೀಗ ಈ ಪ್ರಕರಣಗಳ ಸಂಖ್ಯೆ 3010ಕ್ಕೆ ಇಳಿಕೆಯಾಗಿದೆ. ಸುಮಾರು 1300 ಪ್ರಕರಣಗಳಲ್ಲಿ ತತ್ವರಿತ ವಿಲೇವಾರಿ ಮಾಡಲಾಗಿದೆ. ಇದೇ ಸಮಯದಲ್ಲಿ ತಹಶೀಲ್ದಾರ್ ನ್ಯಾಯಾಲಯದಲ್ಲೂ 651 ಪ್ರಕರಣಗಳು ಬಾಕಿ ಇದ್ದವು. ಆದರೆ, ಇದೀಗ ಆ ಪ್ರಕರಣಗಳ ಸಂಖ್ಯೆ 488ಕ್ಕೆ ಇಳಿದಿದೆ. ಪಹಣಿ ಪ್ರಕರಣಗಳ ಸಂಖ್ಯೆ 1319 ರಿಂದ 321ಕ್ಕೆ ಇಳಿಸಲಾಗಿದೆ. ಇದು ನಿಜಕ್ಕೂ ಇಲಾಖೆಯಲ್ಲಿನ ಉತ್ತಮ ಪ್ರಗತಿಯಾಗಿದ್ದು, ಇದನ್ನು ಹೀಗೆ ಮುಂದುವರೆಸುವಂತೆ ಅಧಿಕಾರಿಗಳಿಗೆ ಕೃಷ್ಣಬೈರೇಗೌಡ ಸೂಚಿಸಿದರು.

ಇ-ಆಡಳಿತಕ್ಕೆ ಸೂಚನೆ: ಆಡಳಿತಕ್ಕೆ ವೇಗ ನೀಡುವ ಸಲುವಾಗಿ ಬೀದರ್ ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿ(ಎಸಿ) ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಇ-ಆಫೀಸ್ ಅಂದರೆ ಆನ್‍ಲೈನ್ ಮೂಲಕ ಕಡತ ವಿಲೇವಾರಿ ಮಾಡುವಂತೆಯೂ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಆ.15ರಿಂದಲೇ ಇ-ಆಫೀಸ್ ಜಾರಿ ಮಾಡಲಾಗಿದೆ. ಎಲ್ಲ ಕಡತಗಳನ್ನೂ ಇದೀಗ ಆನ್ ಲೈನ್ ಮೂಲಕವೇ ವಿಲೇವಾರಿ ಮಾಡಲಾಗುತ್ತಿದೆ. ಹೀಗಾಗಿ ಸೆ.1ರ ಒಳಗಾಗಿ ಎಲ್ಲ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಕಚೇರಿಗಳಲ್ಲೂ ಆನ್ ಲೈನ್ ಮೂಲಕವೆ ಎಲ್ಲ ಕಡತಗಳ ವಿಲೇವಾರಿ ಆಗಬೇಕು. ಆಡಳಿತಕ್ಕೆ ವೇಗ ನೀಡಲು, ಪಾರದರ್ಶಕತೆ ಜವಾಬ್ದಾರಿ ಸುಧಾರಣೆಗೆ ಇ-ಆಡಳಿತ ಸಹಕಾರಿ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X