Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಳೆ ವಿಮೆ ಯೋಜನೆಯಿಂದ ಖಾಸಗಿ...

ಬೆಳೆ ವಿಮೆ ಯೋಜನೆಯಿಂದ ಖಾಸಗಿ ಕಂಪೆನಿಗಳಿಗೆ ಲಾಭ: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ12 Dec 2025 9:09 PM IST
share
ಬೆಳೆ ವಿಮೆ ಯೋಜನೆಯಿಂದ ಖಾಸಗಿ ಕಂಪೆನಿಗಳಿಗೆ ಲಾಭ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ(ಸುವರ್ಣವಿಧಾನಸೌಧ): ಕೇಂದ್ರ ಸರಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪೆನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪೆನಿಗಳು ಸಾವಿರಾರು ಕೋಟಿ ರೂ. ಲಾಭ ಮಾಡಿವೆ. ಇದರಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಉತ್ತರ ಕರ್ನಾಟಕದ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಮಳೆ, ಪ್ರವಾಹದಿಂದ ಬೆಳೆ ಹಾನಿ ಆದಾಗ 3 ದಿನಗಳ ಒಳಗಾಗಿ ವೆಬ್ ಲಿಂಕ್ ಅಥವಾ ದೂರವಾಣಿ ಮುಖಾಂತರ ಮಾಹಿತಿ ನೀಡಬೇಕು ಎಂಬ ಷರತ್ತಿದೆ. ಆದರೆ ಖಾಸಗಿ ಕಂಪೆನಿಗಳ ಫೋನ್ ಮತ್ತು ವೆಬ್ ಲಿಂಕ್ ಕಾರ್ಯ ನಿರ್ವಹಿಸುವುದಿಲ್ಲ. ಬೆಳೆ ಹಾನಿಯಾದವರು ಮಾಹಿತಿ ನೀಡಿಲ್ಲ ಎಂದು ಪರಿಹಾರ ನೀಡುವುದಿಲ್ಲ. ಇಂತಹ ಸಾಕಷ್ಟು ನ್ಯೂನತೆಗಳಿವೆ ಎಂದರು.

ಬೆಳೆ ಕಟಾವು ಪ್ರಯೋಗದಲ್ಲಿ 7 ವರ್ಷದ ಅಂದಾಜಿನಲ್ಲಿ 5 ವರ್ಷದ ಇಳುವರಿಯ ಸರಾಸರಿ ತೆಗೆದುಕೊಳ್ಳುವ ವಿಚಾರದಲ್ಲೂ ವೈಜ್ಞಾನಿಕವಾಗಿ ನಿಗದಿ ಮಾಡುವುದಿಲ್ಲ ಮತ್ತು ಋತುಮಾನದ ಮಧ್ಯಕಾಲೀನ ವೈಪರೀತ್ಯ (ಮಿಡ್ ಸೀಸನ್ ಅಡ್ವರ್ಸಿಟಿ) ವಿಚಾರದಲ್ಲೂ ರೈತರಿಗೆ ಅನ್ಯಾಯ ಆಗುತ್ತಿದೆ. ಇಂತಹ ನ್ಯೂನತೆಗಳು ಇವೆ. ಒಟ್ಟಾರೆ ಬೆಳೆ ವಿಮೆ ನೀತಿ ಬದಲಾವಣೆ ಆದರೆ ಮಾತ್ರ ರೈತರಿಗೆ ಒಳ್ಳೆಯದಾಗುತ್ತದೆ. ಇದಕ್ಕೆ ಎಲ್ಲರೂ ಕೂಡಿ ಪ್ರಯತ್ನ ಮಾಡಬೇಕು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಕೇಂದ್ರ ಸರಕಾರ ಬೆಳೆ ವಿಮೆ ಯೋಜನೆಗೆ ಮಾಡಿರುವ ಮಾರ್ಗಸೂಚಿಗಳಲ್ಲಿ ಸಾಕಷ್ಟು ನ್ಯೂನತೆ ಇದೆ. ಇದನ್ನು ಪರಿಹರಿಸಲು ಕೃಷಿ ಸಚಿವರು ಸಭೆ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ, ಆದರೆ ಈವರೆಗೆ ಕೇಂದ್ರ ಸರಕಾರ ಮಾರ್ಗಸೂಚಿಗೆ ಬದಲಾವಣೆ ಮಾಡಿಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದರು.

ಕೇಂದ್ರ ಸರಲಾರ 5-10 ಖಾಸಗಿ ವಿಮಾ ಕಂಪೆನಿಗಳನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದು ಅವರೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಅವರು ರಾಜ್ಯದ 31 ಜಿಲ್ಲೆಗಳನ್ನು ಹಂಚಿಕೊಂಡು ತಮಗೆ ಲಾಭವಾಗುವ ರೀತಿಯಲ್ಲಿ ಟೆಂಡರು ಹಾಕಿ ಲಾಭ ಮಾಡಿಕೊಳ್ಳುತ್ತಿದ್ದಾರೆ.

2016ಕ್ಕೆ ಮುನ್ನ ಭಾರತೀಯ ಕೃಷಿ ನಿಗಮದ ವತಿಯಿಂದ ವಿಮೆ ಜಾರಿ ಮಾಡುತ್ತಿದ್ದರು, ಆಗ ನಿಗಮಕ್ಕೆ ನಷ್ಟ ಆಗುತ್ತಿತ್ತು. ಆ ನಷ್ಟವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಭರಿಸುತ್ತಿತ್ತು. ಈಗಲೂ ನಿಗಮಕ್ಕೆ ನಷ್ಟ ಆಗುತ್ತದೆ ಆದರೆ ಖಾಸಗಿ ಕಂಪೆನಿಗಳಿಗೆ ಮಾತ್ರ ಲಾಭ ಆಗುತ್ತಿದೆ. ಹೀಗಾಗಿ ಇಡೀ ನೀತಿಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಈಶ್ವರ್ ಖಂಡ್ರೆ ಪ್ರತಿಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X