Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಳ್ಳಾರಿ, ಚಿತ್ರದುರ್ಗ, ತುಮಕೂರು...

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ10 July 2024 5:57 PM IST
share
  • ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ
  • ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ಪಾವಗಡ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ.

ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು, "ಬಹುಗ್ರಾಮ ನೀರು ಸರಬರಾಜು ಯೋಜನೆ ಮೂಲಕ ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.

ʼಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಉಜ್ಜಿನಿ ಮತ್ತು 215 ಗ್ರಾಮೀಣ ವಸತಿ ಪ್ರದೇಶಗಳು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣ ಮತ್ತು 132 ಗ್ರಾಮೀಣ ವಸತಿ ಪ್ರದೇಶಗಳು, ಚಳ್ಳಕೆರೆ ತಾಲ್ಲೂಕಿನ 360 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಚಿತ್ರದುರ್ಗ ಮತ್ತು ತಾಲ್ಲೂಕಿನ 357 ಗ್ರಾಮೀಣ ವಸತಿ ಪ್ರದೇಶಗಳು ಸೇರಿದಂತೆ 1,138 ಗ್ರಾಮಗಳು ಹಾಗೂ 2 ಪಟ್ಟಣಗಳು ತುಂಗಭದ್ರ ನೀರಿನ ಸೌಲಭ್ಯ ಪಡೆಯಲಿವೆʼ ಎಂದು ಸಚಿವರು ತಿಳಿಸಿದರು.

ʼಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ಹಾಗೂ ಪಾವಗಡ ನೀರು ಸರಬರಾಜು ಯೋಜನೆಯ ಕಾಮಗಾರಿಗಳು ಶೇ.95 ಭಾಗದಷ್ಟು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಎಲ್ಲ ಯೋಜನೆಗಳ ವಿದ್ಯುತ್‌ ಸರಬರಾಜು ಮಂಜೂರಾತಿಗಳು (ಸಿಇಐಜಿ ಮತ್ತು ಬೆಸ್ಕಾಂ) ದೊರೆತಿದ್ದು, ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆʼ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

2,132.02 ಕೋಟಿ ರೂ. ವೆಚ್ಚದ ಯೋಜನೆಯ ಕಾಮಗಾರಿಗಳು ಕಳೆದ ವರ್ಷದಿಂದ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮೇ 2024ರವರೆಗೆ 1,852.15 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದೂ ಸಚಿವರು ಹೇಳಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಅಂತರರಾಷ್ಟ್ರೀಯ ಮಾನದಂಡಗಳಂತೆ ಪ್ರತಿಯೊಬ್ಬರಿಗೂ ಪ್ರತಿ ನಿತ್ಯ 85 ಲೀಟರ್‌ ನೀರು ಒದಗಿಸಲಾಗುವುದು, ಪಟ್ಟಣದ ಜನರು ಪ್ರತಿ ನಿತ್ಯ 135 ಲೀಟರ್‌ ನೀರು ಪಡೆಯುವರು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ನೀರು ಸಂಸ್ಕರಣ ಘಟಕಗಳ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿಗಳು ಮುಕ್ತಾಯಗೊಂಡಿವೆ ಎಂದೂ ಹೇಳಿರುವ ಸಚಿವರು, 568 ಒವರ್‌ಹೆಡ್‌ ಟ್ಯಾಂಕ್‌ಗಳ ನಿರ್ಮಾಣ ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ ಎಂದೂ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X