Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫೆ.27ರಿಂದ ಮೂರು ದಿನಗಳ ಕಾಲ...

ಫೆ.27ರಿಂದ ಮೂರು ದಿನಗಳ ಕಾಲ ಗೆಫೆಕ್ಸ್-2025 ಶೃಂಗಸಭೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ25 Feb 2025 5:52 PM IST
share
ಫೆ.27ರಿಂದ ಮೂರು ದಿನಗಳ ಕಾಲ ಗೆಫೆಕ್ಸ್-2025 ಶೃಂಗಸಭೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಮಾಹಿತಿ ತಂತ್ರಜ್ಞಾನ ಇಲಾಖೆ ವತಿಯಿಂದ ಫೆ.27ರಿಂದ ಮಾ.1ರ ವರೆಗೆ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‍ನಲ್ಲಿ ಗೆಫೆಕ್ಸ್(ಜಿಎಎಫ್‍ಎಕ್ಸ್)-2025 ಶೃಂಗಸಭೆ ನಡೆಯಲಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಫೆ.27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್(ಜಿಎಎಫ್‍ಎಕ್ಸ್)-2025 ಶೃಂಗಸಭೆ ಬೆಳಕು ಚೆಲ್ಲಲಿದೆ ಎಂದರು.

ವಿಶ್ವದ ನಂ.1 ಎವಿಜಿಸಿ ಕೇಂದ್ರವಾಗಿ ಹಾಗೂ ಮಾಧ್ಯಮ ಮತ್ತು ಮನರಂಜನೆಯ ಕ್ಷೇತ್ರದಲ್ಲಿ ಭಾರತದ ಜಾಗತಿಕ ನಾಯಕತ್ವದ ಹಿಂದಿನ ಚಾಲಕಶಕ್ತಿಯಾಗಿ ಬೆಂಗಳೂರಿನ ಸ್ಥಾನವನ್ನು ಭದ್ರವಾಗಿಸುತ್ತ ಮಹತ್ವದ ಹೆಜ್ಜೆಯಾಗಿದೆ. 20,000ಕ್ಕೂ ಹೆಚ್ಚು ಮಂದಿಯ ನಿರೀಕ್ಷಿತ ಹಾಜರಿಯೊಂದಿಗೆ ಹಿಂದಿನ ಶೃಂಗಸಭೆಯ ಎರಡರಷ್ಟು ಈ ವರ್ಷದ ಶೃಂಗಸಭೆಯಲ್ಲಿ ಎವಿಜಿಸಿ-ಎಕ್ಸ್‍ಆರ್(ಅನಿಮೇಶನ್, ದೃಶ್ಯಪರಿಣಾಮಗಳು, ಗೇಮಿಂಗ್, ಕಾಮಿಕ್ಸ್ ಮತ್ತು ವಿಸ್ತ್ರತ ನೈಜತೆ) ಪರಿಸರ ವ್ಯವಸ್ಥೆಯಲ್ಲಿನ ಸೃಷ್ಟಿಕರ್ತರು, ಸ್ಟುಡಿಯೋಗಳು ಮತ್ತು ಉತ್ಸಾಹಿಗಳು ಪಾಲ್ಗೊಳ್ಳಲಿದ್ದು ಇದು ಅತ್ಯಂತ ಪ್ರಭಾವಶಾಲಿಯಾದ ಮೇಳವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

‘ಅನುಭವಿಸಿ, ಅನ್ವೇಷಿಸಿ, ಭೇದಿಸಿ’ ಎಂಬುದು ಗೆಫೆಕ್ಸ್-2025ರ ಶೃಂಗಸಭೆಯ ವಸ್ತುವಾಗಿದ್ದು(ಥೀಮ್) ಕ್ರಿಯಾಶೀಲತೆ ಮತ್ತು ತಂತ್ರಜ್ಞಾನದ ಎಲ್ಲೆಗಳನ್ನು ವಿಸ್ತರಿಸುವಲ್ಲಿನ ಸಮ್ಮೇಳನದ ಬದ್ಧತೆಯನ್ನು ಎತ್ತಿಹಿಡಿಯುತ್ತದೆ. ಸಮ್ಮೇಳನದಲ್ಲಿ ಭಾಗವಹಿಸುವವರು ನೈಜಾವಧಿಯ ನಿರೂಪಣೆಯಲ್ಲಿನ ಪ್ರಗತಿಯಿಂದ ಭ್ರಾಮಕವಾದ ಹಾಗೂ ವೃದ್ಧಿಸಲಾದ ನೈಜತೆಯ ಪರಿವರ್ತಕ ಸಾಮರ್ಥ್ಯದವರೆಗೆ ತಲ್ಲೀನಾತ್ಮಕ ತಂತ್ರಜ್ಞಾನಗಳ ಶಕ್ತಿಯನ್ನು ಅನುಭವಿಸಲಿದ್ದಾರೆ. ಗೆಫೆಕ್ಸ್-2025 ಕಥಾನಿರೂಪಣೆ ಮತ್ತು ಪ್ರತಿಕ್ರಿಯಾತ್ಮಕ ಅನುಭವದ ಭವಿಷ್ಯದ ಅನ್ವೇಷಣೆಗೆ ವೇದಿಕೆಯಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ರಾಜ್ಯ ಸರಕಾರವು ಡಿಜಿಟಲ್ ಮಾಧ್ಯಮಗಳ ಉದ್ಯಮಕ್ಕೆ ಶಕ್ತಿಯನ್ನು ತುಂಬುವ ಕಾರ್ಯದಲ್ಲಿ ನಿರತವಾಗಿದೆ. ಕೌಶಲ್ಯಗಳು ಮತ್ತು ಶಿಕ್ಷಣದಿಂದ ಸ್ಟುಡಿಯೋಗಳು, ಸ್ಟಾರ್ಟ್-ಅಪ್‍ಗಳಿಂದ ಜಾಗತಿಕ ನಾಯಕರು- ಹೀಗೆ ರಾಜ್ಯದ ನಾವೀನ್ಯದ ಪರಿಸರ ವ್ಯವಸ್ಥೆಗೆ ಸಾಮಥ್ರ್ಯವನ್ನು ತುಂಬುವ ವಿಶಾಲ ವ್ಯಾಪ್ತಿಯ ಚಟುವಟಿಕೆಗಳನ್ನು ಸರಕಾರವು ಪೋಷಿಸುತ್ತಿದೆ. ಈ ವಲಯವನ್ನು ಪರಿವರ್ತಿಸುವ ವಿಧಗಳಲ್ಲಿ ಮಾನವ ಸೃಷ್ಟಿಶೀಲತೆ ಮತ್ತು ಎಐ ಸಾಧನಗಳ ಮೇಳವನ್ನು ಪೋಷಿಸುವ ವೇಗವರ್ಧಕವಾಗಿ ನಾವು ಸರಕಾರದ ಪಾತ್ರವನ್ನು ಪರಿಭಾವಿಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು

ಬೆಂಗಳೂರು ಗೆಫೆಕ್ಸ್ 2025ರಲ್ಲಿ ನಾವು ಭಾರತದ ಅತ್ಯುತ್ಕೃಷ್ಟ ಪ್ರತಿಭೆ ಮತ್ತು ಹೂಡಿಕೆ ಅಭ್ಯರ್ಥಿಗಳನ್ನು ಪ್ರಸ್ತುತಪಡಿಸುತ್ತಿದ್ದು ಇದರಿಂದಾಗಿ ಈ ಸಮ್ಮೇಳನವು ದೃಶ್ಯ ತಲ್ಲೀನತೆ, ಮತ್ತು ಕಥಾನಿರೂಪಣೆಯಲ್ಲಿ ಎವಿಜಿಸಿ-ಎಕ್ಸ್‍ಆರ್‍ನ ಮೂಲ ವೇದಿಕೆಯಾಗಿ ಹೊರಹೊಮ್ಮಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳ ಕಾರ್ಯದರ್ಶಿ ಡಾ.ಏಕರೂಪ್ ಕೌರ್, ಬೆಂಗಳೂರು ಗೆಫೆಕ್ಸ್ ಅಧ್ಯಕ್ಷ ಬಿರೇನ್ ಘೋಷ್‌ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X