ಬಿಜೆಪಿಯವರು Sorry ಸಾವರ್ಕರ್ರನ್ನು ಅಕ್ಷರಶಃ ಪಾಲನೆ ಮಾಡುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ
ಬೆಂಗಳೂರು : "ಪ್ರಜ್ಞೆ ಇಲ್ಲದೆ, ಮೆದುಳಿಗೂ ನಾಲಿಗೆಗೂ ಸಂಪರ್ಕವಿಲ್ಲದೆ ಮಾತನಾಡುವ ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಸಂಪ್ರದಾಯದಲ್ಲಿ ಮುಂದುವರಿಯುತ್ತಿದ್ದಾರೆ" ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.
ʼಸೋಫಿಯಾ ಖುರೇಶಿ ಭಯೋತ್ಪಾದಕರ ಸಹೋದರಿ ಎಂದಿದ್ದ ವಿಜಯ್ ಶಾ ಕ್ಷಮೆ ಕೋರಿದರು. ಕಲಬುರಗಿ ಡಿಸಿ ಪಾಕಿಸ್ತಾನದಿಂದ ಬಂದವರು ಎಂದಿದ್ದ ರವಿಕುಮಾರ್ ಕ್ಷಮೆ ಕೋರಿದರು. ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ವಿಷಾದಿಸಿದರು. ಬಿಜೆಪಿಯವರು Sorry ಸಾವರ್ಕರ್ ಅವರನ್ನು ಅಕ್ಷರಶಃ ಪಾಲನೆ ಮಾಡುತ್ತಿದ್ದಾರೆ. ಪ್ರಜ್ಞೆ ಇಲ್ಲದೆ, ಮೆದುಳಿಗೂ ನಾಲಿಗೆಗೂ ಸಂಪರ್ಕವಿಲ್ಲದೆ ಮಾತನಾಡುವ ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಸಂಪ್ರದಾಯದಲ್ಲಿ ಮುಂದುವರಿಯುತ್ತಿದ್ದಾರೆ. ಅವರನ್ನು ಮೀರಿಸುತ್ತಿದ್ದಾರೆ! ನನಗೆ ಅದರಲ್ಲಿ ಸಂದೇಹವಿಲ್ಲʼ ಎಂದು ಹೇಳಿದ್ದಾರೆ
Next Story







