Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳ ಪ್ರಕರಣ | ಬಿಜೆಪಿಯ...

ಧರ್ಮಸ್ಥಳ ಪ್ರಕರಣ | ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ʼಆಸ್ಕರ್ʼ ಕೊಟ್ಟರೂ ಕಡಿಮೆಯೇ? : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ2 Sept 2025 6:06 PM IST
share
ಧರ್ಮಸ್ಥಳ ಪ್ರಕರಣ | ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ʼಆಸ್ಕರ್ʼ ಕೊಟ್ಟರೂ ಕಡಿಮೆಯೇ? : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಸೆ.2 : ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ! ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಮಂಗಳವಾರ ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ಎಂಬ ಎರಡು ತಲೆಯ ಹಾವು ಎರಡು ಕಡೆಯೂ ಹೆಡೆ ಆಡಿಸುತ್ತಿದೆ, ಬಿಜೆಪಿ ಆರೋಪಿಸುತ್ತಿರುವ ವ್ಯಕ್ತಿಗಳೂ ಬಿಜೆಪಿಯವರೇ ಎಂದು ಹೇಳಿದ್ದಾರೆ.

ಗಿರೀಶ್ ಮಟ್ಟಣ್ಣನವರ್, ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಯುವ ಮೋರ್ಚಾದ ಅಧ್ಯಕ್ಷರಾಗಿದ್ದವರು, 2013ರಲ್ಲಿ ಗುರುಮಿಠ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು. ಮಹೇಶ್ ಶೆಟ್ಟಿ ತಿಮರೋಡಿ, ಬಿಜೆಪಿ ಪಕ್ಷದಲ್ಲೆ ಇದ್ದವರು, ಸಂಘಪರಿವಾರದ ನಾಯಕರು, ಸದಾ ಸಾವರ್ಕರ್, ಗೋಳ್ವಾಲ್ಕರ್ ಫೋಟೋ ಇಟ್ಟುಕೊಂಡಿರುವವರು, ಕೇಸರಿ ಶಾಲು ಹಾಕಿಕೊಂಡಿರುವವರು. ಸಾವರ್ಕರ್ ಅನುಯಾಯಿಯ ಬಗ್ಗೆಯೆ ಬಿಜೆಪಿ ಅಸಹನೆ ಹೊಂದಿರುವುದು ಪರಮಾಶ್ಚರ್ಯ ಎಂದು ಅವರು ಹೇಳಿದ್ದಾರೆ.

ಇವರೆಲ್ಲಾ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ? ಅವರ ಅಣತಿಯಂತೆಯೇ ಇವರ ಹೋರಾಟ ನಡೆಯುತ್ತಿರುವುದಲ್ಲವೇ? ಬಿಜೆಪಿ ನಾಯಕರು ಉತ್ತರಿಸಬೇಕು. ಬಿಜೆಪಿಯ ‘ಧರ್ಮಸ್ಥಳ ಚಲೋ’ ವೇದಿಕೆಯಲ್ಲಿ ಕರಾವಳಿ ಭಾಗದ ನಾಯಕರು ಮಾತನಾಡದೆ ವೇದಿಕೆ ಬಿಟ್ಟು ಹೋಗಿದ್ದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ಕಾಣಿಸಿಕೊಂಡಿಲ್ಲ ಏಕೆ? ಇದುವರೆಗೂ ಪ್ರಭಾಕರ್ ಭಟ್ ಧರ್ಮಸ್ಥಳದ ಪರವಾಗಿ ಒಂದೇ ಒಂದು ಹೇಳಿಕೆ ನೀಡದಿರುವುದೇಕೆ? ಕಲ್ಲಡ್ಕ ಭಟ್ಟರಿಗೆ ‘ಧರ್ಮಸ್ಥಳ’ ಬೇಡವಾಗಿದೆಯೇ? ಧರ್ಮಸ್ಥಳ ಇಂದು ಇಬ್ಬರು ಸಂಘಪರಿವಾರದ ಮುಖಂಡರ ಪ್ರತಿಷ್ಠೆಯ ಆರೆಸ್ಸೆಸ್ ವರ್ಸಸ್ ಆರೆಸ್ಸೆಸ್ ಕಾಳಗದ ಕಣವಾಗಿದೆ, ಹೀಗಿರುವಾಗ ಬಿಜೆಪಿಯ ಹೋರಾಟ, ಹಾರಾಟ, ಚೀರಾಟ ಯಾರ ವಿರುದ್ಧ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಹೇಳಿದ್ದಾರೆ.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X