Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡಲು...

ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡಲು ʼಗ್ರಾಮದನಿʼ ಪಾಡ್‍ಕಾಸ್ಟ್ ಲೋಕಾರ್ಪಣೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ4 Oct 2025 7:45 PM IST
share
ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡಲು ʼಗ್ರಾಮದನಿʼ ಪಾಡ್‍ಕಾಸ್ಟ್ ಲೋಕಾರ್ಪಣೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ. 4: ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ, ಇಲಾಖೆಯ ಎಲ್ಲ ಪತ್ರಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‍ಕಾಸ್ಟ್ ಕಾರ್ಯನಿರ್ವಹಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಶನಿವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು ಹೊಸಹೆಜ್ಜೆ ಇಡುವುದರೊಂದಿಗೆ ಆರಂಭಿಸಿರುವ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪಲಿರುವ ‘ಗ್ರಾಮದನಿ’ ಸರಣಿ ಪಾಡ್‍ಕಾಸ್ಟ್ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಇಂದಿನ ಮಾಧ್ಯಮದ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸಲು ತಂತ್ರಜ್ಞಾನದ ಸಮರ್ಪಕ ಬಳಕೆ ನೆರವಾಗಬಲ್ಲದು. ‘ಗ್ರಾಮದನಿ’ ಅಕ್ಷರಶಃ ‘ಗ್ರಾಮೀಣ ಕರ್ನಾಟಕದ ಧ್ವನಿ’ಯಾಗಲಿದ್ದು, ಇದು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೆ ಶಕ್ತಿಯುತ ಅರಿವಿನ ಮಾಧ್ಯಮವಾಗಲಿದೆ ಎಂದು ಅವರು ತಿಳಿಸಿದರು.

ಸಾಮರ್ಥ್ಯಾಭಿವೃದ್ಧಿ ಮತ್ತು ಜ್ಞಾನಾರ್ಜನೆ ಈ ಪಾಡ್‍ಕಾಸ್ಟ್‌ನ ಉದ್ದೇಶವಾಗಿದ್ದು, ಚುನಾಯಿತ ಪ್ರತಿನಿಧಿಗಳು, ಕ್ಷೇತ್ರ ಸಿಬ್ಬಂದಿಗಳು/ಅಧಿಕಾರಿಗಳು ಹಾಗೂ ಜನಸಾಮಾನ್ಯರ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಅವರಿಗೆ ಅಗತ್ಯವಾದ ಜ್ಞಾನವನ್ನು ತಲುಪಿಸಲು ಇದು ಸೂಕ್ತ ವೇದಿಕೆಯಾಗಲಿದೆ. ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳಿಗೆ ಸಂಬಂಧಿಸಿದ ನಿಯಮಗಳು, ಪಂಚಾಯತ್ ವ್ಯವಸ್ಥೆಯ ಡಿಜಿಟಲೀಕರಣ ಕುರಿತ ಮಾರ್ಗಸೂಚಿಗಳು, ಪಂಚತಂತ್ರ 2.0 ತಂತ್ರಾಂಶದಲ್ಲಿ ಇಂಡೀಕರಿಸುವ ವಿಧಾನ ಮುಂತಾದ ಹಲವು ಉಪಯುಕ್ತ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳನ್ನು ಇಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

‘ಗ್ರಾಮದನಿ’ ಪಾಡ್‍ಕಾಸ್ಟ್ ಸರಣಿಯು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಪ್ರಸಾರ ಮಾಡುವ ಮತ್ತು ಆಡಳಿತ ಸುಧಾರಣೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಿ. ರಣದೀಪ್, ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಹಾಜರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X