Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕಲಬುರಗಿ ಜವಳಿ ಪಾರ್ಕ್’ ನೀಲನಕ್ಷೆ...

‘ಕಲಬುರಗಿ ಜವಳಿ ಪಾರ್ಕ್’ ನೀಲನಕ್ಷೆ ಸಿದ್ಧ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ11 Jun 2026 9:55 PM IST
share
‘ಕಲಬುರಗಿ ಜವಳಿ ಪಾರ್ಕ್’ ನೀಲನಕ್ಷೆ ಸಿದ್ಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ-ಮಿತ್ರ ಜವಳಿ ಪಾರ್ಕ್' ಯೋಜನೆಯನ್ನು ವ್ಯವಸ್ಥಿತವಾಗಿ ಹಾಗೂ ವೇಗವಾಗಿ ಅನುಷ್ಠಾನಗೊಳಿಸಲು ಮೊದಲ ಹಂತದ ಮೂಲಸೌಕರ್ಯ ನೀಲನಕ್ಷೆ ಮತ್ತು ಆಡಳಿತಾತ್ಮಕ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕಲಬುರಗಿ ಬಳಿ ಮೊದಲ ಹಂತದಲ್ಲಿ 1ಸಾವಿರ ಎಕರೆ ಪ್ರದೇಶದಲ್ಲಿ ರೂಪಿಸಲಾಗುತ್ತಿರುವ ಜವಳಿ ಪಾರ್ಕ್ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಗಿದೆ. ಪಾರ್ಕ್ ನಿರ್ಮಾಣ ಕಾಮಗಾರಿಗಳು ಆರಂಭವಾಗಲಿದ್ದು, ಹೂಡಿಕೆ ಮಾಡುವ ಉದ್ಯಮಗಳಿಗೆ ತಕ್ಷಣವೇ ಉತ್ಪಾದನೆ ಆರಂಭಿಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮೂಲಸೌಕರ್ಯಗಳನ್ನು ಒಳಗೊಂಡ ‘ಪ್ಲಗ್ ಅಂಡ್ ಪ್ಲೇ' ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.

ಮೊದಲ ಹಂತದಲ್ಲಿ ಕೋರ್ ಮೂಲಸೌಕರ್ಯಗಳ ಕಾಮಗಾರಿಗಳು ಆರಂಭವಾಗಲಿದ್ದು, ಸಿವಿಲ್ ಮತ್ತು ಭೂ ಅಭಿವೃದ್ಧಿ, ಆಂತರಿಕ ರಸ್ತೆಗಳ ನಿರ್ಮಾಣ ಮತ್ತು ಮಳೆ ನೀರನ್ನು ಸುಲಭವಾಗಿ ಹೊರಹಾಕಲು ಸುಸಜ್ಜಿತ ಆರ್‍ಸಿಸಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ಇಡೀ ಪಾರ್ಕ್‍ನಲ್ಲಿ ಭೂಗತ ಹೈ-ಟೆನ್ಷನ್/ ಲೋ-ಟೆನ್ಷನ್ ವಿದ್ಯುತ್ ವಿತರಣಾ ಮಾರ್ಗಗಳು ಮತ್ತು ಪರಿಸರ ಸ್ನೇಹಿ ಸೋಲಾರ್ ಬೀದಿ ದೀಪಗಳ ಅಳವಡಿಸುವ ಪ್ರಕ್ರಿಯೆಯೂ ನಡೆಯಲಿದೆ ಎಂದು ಅವರು ತಿಳಿಸಿದರು.

5 ಲಕ್ಷ ಲೀಟರ್ ಸಾಮರ್ಥ್ಯದ ನೆಲಮಟ್ಟದ ಜಲಸಂಗ್ರಹಾಗಾರ ಮೂಲಕ ಶುದ್ಧ ನೀರು ಸರಬರಾಜು ಜಾಲ ಮತ್ತು ಸಂಸ್ಕರಿಸಿದ ನೀರಿಗಾಗಿ 10ಲಕ್ಷ ಲೀಟರ್ ಸಾಮಥ್ರ್ಯದ ಮೇಲ್ಮಟ್ಟದ ಜಲ ಸಂಗ್ರಹಾಗಾರ ನಿರ್ಮಾಣ. ಪರಿಸರ ಸಂರಕ್ಷಣೆಗಾಗಿ ಶೂನ್ಯ ದ್ರವ ವಿಸರ್ಜನೆ ತಂತ್ರಜ್ಞಾನ ಹೊಂದಿರುವ ಅತ್ಯಾಧುನಿಕ 2.5 ಎಂಎಲ್‍ಡಿ ಸಾಮಥ್ರ್ಯದ ಸಾಮಾನ್ಯ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕ ಮತ್ತು ಅದಕ್ಕೆ ಪೂರಕವಾದ ಪೈಪ್‍ಲೈನ್ ಜಾಲದ ಸ್ಥಾಪನೆ ಕಾರ್ಯ ಆರಂಭಗೊಳ್ಳಲಿದೆ ಎಂದಿರುವ ಸಚಿವರು ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಅವರು ಸೂಚನೆ ನಿಡಿದರು.

ಸಭೆಯಲ್ಲಿ ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಎಸ್., ಜವಳಿ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕೆಐಎಡಿಬಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಹಾಗೂ ಆನ್‍ಲೈನ್ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಶರೀಷ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X