Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕದಲ್ಲಿ 3 ತಿಂಗಳಲ್ಲಿ 1 ಸಾವಿರ...

ಕರ್ನಾಟಕದಲ್ಲಿ 3 ತಿಂಗಳಲ್ಲಿ 1 ಸಾವಿರ ಅಕ್ರಮ ವಲಸಿಗರು ಪತ್ತೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ8 Aug 2026 8:32 PM IST
share
ಕರ್ನಾಟಕದಲ್ಲಿ 3 ತಿಂಗಳಲ್ಲಿ 1 ಸಾವಿರ ಅಕ್ರಮ ವಲಸಿಗರು ಪತ್ತೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಹಿಂದಿನ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ 1 ಸಾವಿರ ಮಂದಿ ಅಕ್ರಮ ವಲಸಿಗರು, ಬಾಂಗ್ಲಾದೇಶಿಗರು ಸಿಕ್ಕಿದ್ದಾರೆ. ಇವರೆಲ್ಲರೂ ಉತ್ತರ ಭಾರತದಿಂದ ವಲಸೆ ಬಂದಿದ್ದಾರೆ. ಈ ಸಂಬಂಧ ವಿಶೇಷ ತಂಡ ರಚಿಸಿ ಮೇಲ್ವಿಚಾರಣೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಅಕ್ರಮ ವಲಸಿಗರ ಹುಡುಕಾಟ ವಿಚಾರವಾಗಿ ಮಾತನಾಡಿದ ಅವರು, 1ಸಾವಿರ ಜನ ಅಕ್ರಮ ವಲಸಿಗರು, ಬಾಂಗ್ಲಾದೇಶಿಗರು ಸಿಕ್ಕಿದ್ದಾರೆ. ಈ ಸಂಬಂಧ ಎಫ್‍ಆರ್‌ಒ, ಬಿಎಸ್‍ಎಫ್ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಾವು ಕಟ್ಟುನಿಟ್ಟಾಗಿ ಗಂಭೀರವಾಗಿ ಶೋಧನೆ ನಡೆಸುತ್ತಿದ್ದೇವೆ ಎಂದರು.

ಬಾಂಗ್ಲಾದೇಶ, ಆಫ್ರಿಕಾ ಯಾವ ದೇಶದವರೇ ಇರಬಹುದು. ಹಿಂದಿನ 3 ತಿಂಗಳಲ್ಲಿ ಸುಮಾರು ಒಂದು ಸಾವಿರ ಜನ ವಲಸಿಗರು ಸಿಕ್ಕಿದ್ದಾರೆ. ಇವರೆಲ್ಲರೂ ಉತ್ತರ ಭಾರತದಿಂದಲೇ ಬರುತ್ತಿದ್ದಾರೆ. ಇದರಲ್ಲಿ ಯಾವುದೇ ರಾಜೀ ಇಲ್ಲ. ಈಗಾಗಲೇ ಎಫ್‍ಆರ್‌ ಒ, ಬಿಎಸ್‍ಎಫ್ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಈ ವಿಚಾರದಲ್ಲಿ ನಿರಂತರವಾಗಿ ಕಾರ್ಯಾಚರಣೆ ಮಾಡಬೇಕಾಗುತ್ತದೆ. ಪ್ರಮುಖವಾಗಿ ಕೇಂದ್ರ ಸರಕಾರ ನೆರವಿಗೆ ಬರಬೇಕಾಗುತ್ತದೆ. ನಮ್ಮ ರಾಜ್ಯ ಯಾವುದೇ ಅಂತಾರಾಷ್ಟ್ರೀಯ ಗಡಿ ಹೊಂದಿಲ್ಲ. ನಮಗೆ ಸಂಪರ್ಕ ಇಲ್ಲ. ಬಾಂಗ್ಲಾದೇಶ, ನೇಪಾಳ ಸೇರಿದಂತೆ ಬೇರೆ ಯಾವ ರಾಷ್ಟ್ರದ ಗಡಿ ಕೂಡ ನಾವು ಹಂಚಿಕೊಳ್ಳುವುದಿಲ್ಲ. ಆದರೂ ಅವರು ನುಗ್ಗುತ್ತಿದ್ದಾರೆ ಅಂದರೆ ಎಲ್ಲಿಂದ ಬರುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

‘ಗಡಿ ಕಾಯುವ ವಿಚಾರ ಕೇಂದ್ರ ಸರಕಾರದ್ದು. ಅವರು ಅವರ ಜವಾಬ್ದಾರಿ ಸರಿಯಾಗಿ ಮಾಡುತ್ತಿಲ್ಲ ಅನ್ನುವುದು ನನ್ನ ಅಭಿಪ್ರಾಯ. ಇಷ್ಟು ದೂರ ಬರುತ್ತಿದ್ದಾರೆ ಅಂದರೆ ನಮ್ಮ ಅಂತಾರಾಷ್ಟ್ರೀಯ ಗಡಿ ಮಾತ್ರ ಅಲ್ಲ, ರಾಜ್ಯ ಗಡಿಗಳು ವಿಫಲವಾಗಿದೆ. ಇತ್ತೀಚೆಗೆ ಸ್ಲಂಗಳಿಗೆ ಹೋಗಿ ಯಾವ ದೇಶ, ಯಾವ ರಾಜ್ಯ ಅಂತ ಕೇಳಿ ವಿಡಿಯೋ ಮಾಡಿ ಸರಕಾರವನ್ನು ಬಾಯಿಗೆ ಬಂದಂತೆ ಬೈಯ್ಯೋದು ಟ್ರೆಂಡ್ ಆಗಿದೆ. ನಿಮ್ಮ ಬಳಿ ಮಾಹಿತಿ ಇದ್ದರೆ ಬಂದು ನಮ್ಮ ಸಿಬ್ಬಂದಿಗೆ ಕೊಡಿ. ನೀವು ಸೋಷಿಯಲ್ ಮೀಡಿಯಾ ಹೀರೋ ಆಗಲು ಹೋಗಿ ಅಂತಾರಾಷ್ಟ್ರೀಯ ಮಾಫಿಯಾವನ್ನು ಬಲಪಡಿಸುತ್ತಿದ್ದೀರಾ?’

-ಪ್ರಿಯಾಂಕ್ ಖರ್ಗೆ, ಗೃಹ ಸಚಿವ

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X