Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮೂನೆ-7 ದುರುಪಯೋಗ ಸಾಬೀತಾದರೆ ಜೈಲು...

ನಮೂನೆ-7 ದುರುಪಯೋಗ ಸಾಬೀತಾದರೆ ಜೈಲು ಶಿಕ್ಷೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ5 Oct 2026 11:30 PM IST
share
ನಮೂನೆ-7 ದುರುಪಯೋಗ ಸಾಬೀತಾದರೆ ಜೈಲು ಶಿಕ್ಷೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಚುನಾವಣಾ ಆಯೋಗದ ಅರ್ಜಿ ನಮೂನೆ-7ಅನ್ನು ದುರುಪಯೋಗ ಪಡಿಸಿಕೊಂಡು ತಪ್ಪು ಮಾಹಿತಿ ನೀಡಿರುವುದು ಸಾಬೀತಾದರೆ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಆರ್ ಪ್ರಕ್ರಿಯೆಯಲ್ಲಿ ಅರ್ಜಿ ನಮೂನೆ-7 ಅನ್ನು ಸಂಪೂರ್ಣವಾಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಇದೊಂದು ಸಂಘಟಿತ ಅಪರಾಧವಾಗಿದೆ ಎಂದು ಹೇಳಿದರು.

ಬಿಹಾರ, ಪಶ್ಚಿಮ ಬಂಗಾಳ, ಹೈದರಾಬಾದ್, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಂದೇ ಮಾದರಿಯ ಅರ್ಜಿ ನಮೂನೆ-7 ಸಲ್ಲಿಕೆಯಾಗುತ್ತಿರುವುದನ್ನು ನೋಡಿದರೆ, ಇದರ ಹಿಂದೆ ರಾಷ್ಟ್ರ ಮಟ್ಟದಲ್ಲಿ ಕೇಂದ್ರಿಕೃತ ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತರಿಗೆ ಸಂಪೂರ್ಣ ಮಾಹಿತಿ ಇರುವ ಪೂರ್ವ ಮುದ್ರಿತ ಅರ್ಜಿ ನಮೂನೆ-7 ಹೇಗೆ ಸಿಗುತ್ತಿವೆ? ಅದು ಯಂತ್ರ ಓದುವ ಮಾದರಿಯಲ್ಲಿ ಕರಾರುವಕ್ಕಾದ ಮಾಹಿತಿಗಳನ್ನೊಳಗೊಂಡ ಅರ್ಜಿ ನಮೂನೆಗಳನ್ನು ಮುದ್ರಿಸಿ ನೀಡುತ್ತಿರುವವರು ಯಾರು ಎಂದು ಅವರು ಪ್ರಶ್ನಿಸಿದರು.

ಬಳ್ಳಾರಿ, ಬೆಳಗಾವಿ, ಮೂಡಿಗೆರೆ ಸೇರಿದಂತೆ ಹಲವು ಕಡೆಗಳಲ್ಲಿ ಬದುಕಿರುವವರನ್ನು ಸತ್ತಿದ್ದಾರೆ ಎಂದು ಅರ್ಜಿ ನಮೂನೆ-7ರ ಅಡಿ ಮನವಿ ಸಲ್ಲಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆಸಿ ಹಾಕುವ ಸಂಚು ನಡೆಸಲಾಗಿದೆ. ನಾನು ಬದುಕಿದ್ದೇನೆ ಎಂದು ಅರ್ಜಿದಾರರು ಖುದ್ದಾಗಿ ಬಂದು ಮಾಹಿತಿ ನೀಡುತ್ತಿದ್ದಾರೆ. ಹೀಗಿರುವಾಗ ಅಂತಹ ದೂರುಗಳನ್ನು ದಾಖಲಿಸಬಾರದೇ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಬದುಕಿರುವವರನ್ನು ಸತ್ತಿದ್ದಾರೆ ಎಂದು ತಪ್ಪು ಮಾಹಿತಿಯ ಅರ್ಜಿ ನಮೂನೆ-7ಅನ್ನು ಸಲ್ಲಿಸಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸದೇ ಕರ್ನಾಟಕ ರಾಜ್ಯೋತ್ಸವ ಅಥವಾ ಭಾರತ ರತ್ನ ಪ್ರಶಸ್ತಿ ನೀಡಲು ಸಾಧ್ಯವೇ? ತಪ್ಪು ಮಾಹಿತಿ ನೀಡಿರುವುದು ಸಾಬೀತಾದರೆ, ಒಂದು ವರ್ಷ ಜೈಲು ಮತ್ತು ದಂಡ ಮತ್ತು ಶಿಕ್ಷೆ ಖಚಿತ. ಅದಕ್ಕಾಗಿಯೇ ಬಹಳಷ್ಟು ಕಡೆ ಬಿಜೆಪಿ ಕಾರ್ಯಕರ್ತರು ಕ್ಷಮೆಯಾಚಿಸಿ ತಾವು ನೀಡಿದ್ದ ಅರ್ಜಿ ನಮೂನೆಗಳನ್ನು ಹಿಂಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಸದ್ಯಕ್ಕೆ ಖಾಸಗಿ ವ್ಯಕ್ತಿಗಳ ದೂರು ಆಧರಿಸಿ ಪ್ರಕರಣವನ್ನು ದಾಖಲಿಸಲಾಗುತ್ತಿದೆ. ಇದೊಂದು ಸಂಘಟಿತ ಅಪರಾಧವಾಗಿದ್ದು, ಜಿಲ್ಲಾಧಿಕಾರಿಗಳು ಎಲ್ಲೆಡೆ ಪರಿಶೀಲನೆ ನಡೆಸುತ್ತಿದ್ದಾರೆ. ಸಿಐಡಿ ಸೇರಿದಂತೆ ಇತರೆ ಉನ್ನತ ಮಟ್ಟದ ತನಿಖೆಯ ಬಗ್ಗೆ ಚುನಾವಣಾ ಆಯೋಗದ ನಿರ್ಧಾರದ ಬಳಿಕ ತೀರ್ಮಾನಿಸಲಾಗುತ್ತದೆ. ಸದ್ಯಕ್ಕೆ ತಾವು ಬದುಕಿದ್ದೇವೆ ಎಂದು ಖಾಸಗಿ ವ್ಯಕ್ತಿಗಳು ಅರ್ಜಿ ನಮೂನೆ-7 ಅನ್ನು ಸಲ್ಲಿಸಿರುವವರ ವಿರುದ್ಧ ದಾಖಲಿಸಿರುವ ದೂರನ್ನು ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಚುನಾವಣಾ ಆಯೋಗದ ಕಾರ್ಯ ವೈಖರಿಯ ಬಗ್ಗೆ ಸುಪ್ರೀಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಅಯೋಗಕ್ಕೆ ಪ್ರಶ್ನೆ ಕೇಳಿದರೆ ಬಿಜೆಪಿಯವರು ಉತ್ತರ ನೀಡುತ್ತಿದ್ದಾರೆ. ಇದು ಹಲವಾರು ಅನುಮಾನಗಳನ್ನು ಹುಟ್ಟುಹಾಕುತ್ತಿದೆ ಎಂದು ಅವರು ಹೇಳಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X