ಬಿಜೆಪಿ ನಾಯಕರ ಮಕ್ಕಳು ಗೋಮೂತ್ರ ಕುಡಿಯಲ್ಲ ಏಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆಯ ವಿರೋಧ ಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಮಕ್ಕಳು ಗೋಮೂತ್ರ ಕುಡಿಯುವುದಿಲ್ಲ ಏಕೆ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಮನೆಯಲ್ಲಿ ಧರ್ಮ ಆಚರಣೆ ಮಾಡಿ ಯಾರು ಬೇಡ ಎನ್ನುವುದಿಲ್ಲ. ಬಡವರ ಮಕ್ಕಳ ಬದುಕನ್ನು ಹಾಳುಮಾಡಬೇಡಿ. ಅಲ್ಲದೆ, ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಆರ್.ಅಶೋಕ್, ಸೇರಿದಂತೆ ಬಿಜೆಪಿ ನಾಯಕರ ಮಕ್ಕಳು ಗೋಮೂತ್ರ ಕುಡಿಯಲ್ಲವೇಕೆ?. ಎಲ್ಲಿಯೂ ತ್ರಿಶೂಲ ಹಿಡಿದು ಹೋಗುವುದಿಲ್ಲವೇಕೆ ಎಂದು ಕೇಳಿದರು.
ಕೇಂದ್ರ ಸರಕಾರದ ಸಂಪುಟ ಸಚಿವರ ಮಕ್ಕಳು ಏನು ಮಾಡುತ್ತಿದ್ದಾರೆ? ಇವರ ಮಕ್ಕಳೆಲ್ಲ ಏಕೆ ಗಣವೇಶ ಹಾಕುವುದಿಲ್ಲ. ಇವರ ಮಕ್ಕಳಿಗೆಲ್ಲ ಏಕೆ ಗೋಮೂತ್ರ ಕುಡಿಸುವುದಿಲ್ಲ. ಇವರ ಮಕ್ಕಳು ಏಕೆ ಗಂಗೆಯಲ್ಲಿ ಮುಳಗೇಳುವುದಿಲ್ಲ. ಇವರ ಮಕ್ಕಳು ಏಕೆ ಗೋರಕ್ಷಣೆಗೆ ಹೋಗಲ್ಲ ಎಂಬುದಕ್ಕೆ ಮೊದಲು ಉತ್ತರ ಕೊಡಲಿ ಎಂದು ಸವಾಲು ಹಾಕಿದರು.





