ED, CBI ಇಲ್ಲದಿದ್ದರೆ ಬಿಜೆಪಿ ಚುನಾವಣೆಗಳಲ್ಲಿ ಸೋತು ಪ್ರಾದೇಶಿಕ ಪಕ್ಷಗಳಿಗಿಂತಲೂ ಕನಿಷ್ಟ ಸ್ಥಿತಿಯಲ್ಲಿ ಇರುತ್ತಿತ್ತು: ಸಚಿವ ಪ್ರಿಯಾಂಕ್ ಖರ್ಗೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಆದಾಯ ತೆರಿಗೆ(ಐಟಿ), ಜಾರಿ ನಿರ್ದೇಶನಾಲಯ(ಈಡಿ) ಮತ್ತು ಸಿಬಿಐ ನಂತಹ ಸಂಸ್ಥೆಗಳು ಇಲ್ಲದಿದ್ದರೆ ಬಿಜೆಪಿ ಚುನಾವಣೆಗಳಲ್ಲಿ ಸೋಲನ್ನು ಅನುಭವಿಸಿ ಪ್ರಾದೇಶಿಕ ಪಕ್ಷಗಳಿಗಿಂತಲೂ ಕನಿಷ್ಟ ಸ್ಥಿತಿಯಲ್ಲಿ ಇರುತ್ತಿತ್ತು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಗಳನ್ನು ಕಾಂಗ್ರೆಸ್ ಪಕ್ಷವು ಕೇಂದ್ರದ ಬಿಜೆಪಿಯ ಸರಕಾರದ ದುರ್ಬಲತೆಯ ಮೇಲೆ ಗೆಲ್ಲುವುದಿಲ್ಲ. ಬದಲಾಗಿ ನಮ್ಮ ಒಳ್ಳೆಯ ಆಡಳಿತದ ಮೂಲಕ ರಾಜ್ಯದ ಜನರ ಮನಸ್ಸು ಗೆದ್ದು, ನಮ್ಮ ಶಕ್ತಿಯ ಮೇಲೆ ಗೆಲ್ಲಲು ಪಯತ್ನಿಸುತ್ತೇವೆ ಎಂದು ಹೇಳಿದರು.
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ಗೆಲ್ಲುತ್ತಾರೆ. ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿದೆ. ಬಿಜೆಪಿಯವರ ನೀತಿ, ನಮಗೂ ಯಾವುದೇ ಸಂಬಂಧವಿಲ್ಲ ಎಂದ ಪ್ರಿಯಾಂಕ್ ಖರ್ಗೆ, ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೋಡಿಕೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.




