Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಪಾಕ್ ಪರ ಘೋಷಣೆʼ ಪ್ರಕರಣ‌ | FSL ವರದಿ...

ʼಪಾಕ್ ಪರ ಘೋಷಣೆʼ ಪ್ರಕರಣ‌ | FSL ವರದಿ ಆಧಾರವಾಗಿಟ್ಟುಕೊಂಡು ಆರೋಪಿಗಳ ಬಂಧನ : ಗೃಹ ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ5 March 2024 12:34 PM IST
share
ʼಪಾಕ್ ಪರ ಘೋಷಣೆʼ ಪ್ರಕರಣ‌ | FSL ವರದಿ ಆಧಾರವಾಗಿಟ್ಟುಕೊಂಡು ಆರೋಪಿಗಳ ಬಂಧನ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ಎಫ್‌ಎಸ್‌ಎಲ್‌ ವರದಿಯನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಸದಾಶಿವನಗರದ ತಮ್ಮ‌ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಫ್‌ಎಸ್‌ಎಲ್ ವರದಿ ಬಂದ ನಂತರ‌ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಸದನದಲ್ಲಿ ಉತ್ತರಿಸಿದ್ದೆನು. ವರದಿಯಲ್ಲಿ ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದರು

ಖಾಸಗಿಯವರು ಸಹ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಿದ್ದರು. ನಾವು ಅದನ್ನು ಅಧಿಕೃತ ಅಂತ ಪರಗಣಿಸುವುದಿಲ್ಲ. ನಾವು ಅವರಿಗೆ ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ. ನಮ್ಮ ಇಲಾಖೆಯ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳು ಪಾಕಿಸ್ತಾನ ಪರ‌ ಘೋಷಣೆ ಕೂಗಿರುವುದು ಖಚಿತವಾಗಿದೆ. ಈ ಆಧಾರದ ಮೇಲೆ‌ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿಯಲಿದ್ದು, ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಬಿಜೆಪಿಯವರು ವರದಿ ಬಹಿರಂಗಪಡಿಸುವಂತೆ ಆಗ್ರಹಿಸುತ್ತಿದ್ದಾರೆ ಎಂದು ಮಾಧ್ಯಮವರ ಪ್ರಶ್ನೆಯ ಕುರಿತು ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ದಿನಕ್ಕೊಂದು ರೀತಿ ಹೇಳಿಕೆ ನೀಡುತ್ತಾರೆ. ಸಾಕ್ಷ್ಯ ಇಲ್ಲದೆ ಯಾರನ್ನು ಬಂಧಿಸಲಾಗುವುದಿಲ್ಲ. ವರದಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು‌, ಇನ್ನೆನು ಬಹಿರಂಗಪಡಿಸಬೇಕು. ಪ್ರಕರಣವನ್ನು ಮುಚ್ಚಿಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದ ಬಿಜೆಪಿಯವರು ಈಗ ಏನು ಹೇಳುತ್ತಾರೆ ಎಂದು ಮರುಪ್ರಶ್ನಿಸಿದರು.

ಬಿಜೆಪಿಯವರು ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ

ಮಂಡ್ಯದಲ್ಲಿ 2022 ನವೆಂಬರ್‌ನಲ್ಲಿ ಬಿಜೆಪಿಯ ಕಾರ್ಯಕರ್ತರು ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಯಾಕೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಹಳೆಯ ಪ್ರಕರಣ ಈಗ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪಾಕಿಸ್ತಾನ ಝಿಂದಾಬಾದ್ ಎಂದು ಕೂಗಿದ ಮೇಲೆ ಪ್ರಕರಣ ಒಂದೇ ಅಲ್ಲವೇ. ಕಾನೂನು ಎಲ್ಲರಿಗೂ ಒಂದೇ. ಯಾವ ಸಂದರ್ಭದಲ್ಲಿ ಕೂಗಿದ್ದಾರೆ ಎಂಬುದು ತನಿಖೆಯಿಂದ ಹೊರಬರುತ್ತೆ ಎಂದು ತಿಳಿಸಿದರು.

ಪ್ರಕರಣದ ಕುರಿತು ಬೇರೆ ಇಲಾಖೆಯ ಸಚಿವರಿಗೆ ಸ್ಪಷ್ಟ ಮಾಹಿತಿ ಇರುವುದಿಲ್ಲ. ಮಾಧ್ಯಮವರು ಅವರನ್ನು ಕೇಳಿದಾಗ ಹೇಳಿರುತ್ತಾರೆ ಅಷ್ಟೇ. ಸಿಎಂ, ಡಿಸಿಎಂ, ಇಲಾಖೆಯ ಆಧಿಕಾರಿಗಳು ಹಾಗೂ ಸಂಬಂಧಿಸಿದ ಸಚಿವರ ಹೇಳಿಕೆ ಮಾತ್ರ ಅಧಿಕೃತ. ಈಗ ನಾನು ಹೇಳುವುದು ಅಧಿಕೃತ ಎಂದು ಹೇಳಿದರು.

ಯುಎಪಿಎ ಪ್ರಕರಣಗಳು ನೇರವಾಗಿ ಕೇಂದ್ರದ ತನಿಖಾ ಸಂಸ್ಥೆಗಳಾದ ಎನ್‌ಐಎ ಅಥವಾ ಸಿಬಿಐಗೆ ಬರುತ್ತದೆ. ಹೀಗಾಗಿ ಎನ್‌ಐಎ ಅವರು ಸುಮೋಟೋ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಸಹ ತನಿಖೆ ಮುಂದುವರಿಸುತ್ತಾರೆ. ನಮ್ಮಲ್ಲಿರುವ ಮಾಹಿತಿಯನ್ನು ಎನ್‌ಐಎಗೆ ಹಂಚಿಕೊಳ್ಳಲಾಗುವುದು. ಪ್ರಕರಣ ನಡೆದ ಮರುದಿನ ಸಿಸಿಬಿ ಪೊಲೀಸರು ಸಹ ಜೈಲಿನಲ್ಲಿರುವರನ್ನು ವಿಚಾರಣೆ ನಡೆಸಿದ್ದರು. ಯಾರೇ ತನಿಖೆ ನಡೆಸಿದರೂ ಒಟ್ಟಾರೆಯಾಗಿ ಆರೋಪಿಯನ್ನು ಪತ್ತೆ ಹಚ್ಚುವುದಷ್ಟೆ ಮುಖ್ಯ ಎಂದು ತಿಳಿಸಿದರು.

ಪ್ರಕರಣದಿಂದ ಸರಕಾರಕ್ಕೆ ಮುಜುಗರ ಆಗಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರಕಾರಕ್ಕೆ ಯಾಕೆ ಮುಜುಗರ ಆಗುತ್ತದೆ. ಸರಕಾರ ಯಾರಿಗಾದರೂ ಸ್ಪಾನ್ಸರ್ ಮಾಡಿದೆಯೇ? ಅವನ್ಯಾರೋ ಕೂಗಿದ್ದಾನೆ ಅನ್ನುವುದನ್ನು ಖಚಿತಪಡಿಸಿಕೊಳ್ಳಲು ಕಾಯುತ್ತಿದ್ದೆವು. ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸರಕಾರಕ್ಕೆ ಮುಜುಗರ ಆಗುವಂತದ್ದು ಏನು ಮಾಡಿಲ್ಲ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಂಡು ಒಳ್ಳೆ ಕೆಲಸ ಮಾಡಿದೆ. ಇದಕ್ಕೆ ಸರಕಾರವನ್ನು ಪ್ರಶಂಶಿಸಬೇಕು ಎಂದು ಹೇಳಿದರು.

ವಿಧಾನಸೌಧದ ಭದ್ರತಾ ವೈಫಲ್ಯ ಇರುವುದು ಕಂಡು ಬಂದರೆ ಇಲಾಖೆಯ ಅಧಿಕಾರಿಗಳು ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತಾರೆ. ಯಾರನ್ನೋ ಕೇಳಿ ಕೆಲಸ ಮಾಡುವ ಅಗತ್ಯತೆ ಇಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X