Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ...

ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ

ವಾರ್ತಾಭಾರತಿವಾರ್ತಾಭಾರತಿ27 Jun 2023 3:00 PM IST
share
ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ, ಜೂನ್ 27 : ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್ , ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಎಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್ ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು.

ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದರು.

ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ. ಐ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆಯುತ್ತಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ನವದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗಿದೆ. ಬಡವರ ಮೇಲೆ ಗದಾ ಪ್ರಹಾರ ಮಾಡಲಾಗುತ್ತಿದೆ. ನಾವು ಘೋಷಣೆ ಮಾಡಿದಂತೆಯೇ ಅಕ್ಕಿ ಕೋರಿ ಪತ್ರ ಬರೆಯಲಾಗಿದೆ. ಅವರು ಒಪ್ಪಿ ಪತ್ರವನ್ನೂ ಬರೆದಿದ್ದಾರೆ. ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ ಎಂದು ಪ್ರಶ್ನಿಸಿದರು.

ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ್, ಎನ್.ಸಿ.ಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳು ಜಾರಿಯಾಗದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ. ರಾಜಕೀಯ ಗಿಮಿಕ್ ಮಾಡಲು ಹೊರಡಬಾರದು. ಅವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

2022-23 ನೇ ಸಾಲಿನಲ್ಲಿ ಯುವ ನಿಧಿ ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಮಾಡಿದವರಿಗೆ 6 ತಿಂಗಳೊಳಗೆ ಕೆಲಸ ದೊರೆಯದೇ ಹೋದರೆ, ಪದವೀಧರರಿಗೆ 3 ಸಾವಿರ ಹಾಗೂ ಡಿಪ್ಲೊಮಾ ಮಾಡಿದವರಿಗೆ 1500 ರೂ.ಗಳನ್ನು 24 ತಿಂಗಳು ನೀಡಲಾಗುವುದು. 2.50 ಲಕ್ಷ ಹುದ್ದೆಗಳನ್ನು ಒಂದೇ ಸಾರಿಗೆ ಭರ್ತಿ ಮಾಡಲಾಗುವುದಿಲ್ಲ. ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಐದು ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59000 ಕೋಟಿ ರೂ. ಬೇಕಾಗುವುದು. ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X