Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮನೆಯಿಂದಲೆ ಆಸ್ತಿ ನೋಂದಣಿಗೆ ಅವಕಾಶ:...

ಮನೆಯಿಂದಲೆ ಆಸ್ತಿ ನೋಂದಣಿಗೆ ಅವಕಾಶ: ಕಂದಾಯ ಸಚಿವ ಕೃಷ್ಣ ಬೈರೇಗೌಡ

‘ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ-2024’ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ21 Feb 2024 8:06 PM IST
share
ಮನೆಯಿಂದಲೆ ಆಸ್ತಿ ನೋಂದಣಿಗೆ ಅವಕಾಶ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಂತಹ ನಂಬಲಾರ್ಹ ಮೂಲಗಳ ಸಹಾಯದಿಂದ ನಾಗರಿಕರು ತಾಂತ್ರಿಕವಾಗಿಯೆ ಆಸ್ತಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ‘ನೋಂದಣಿ(ಕರ್ನಾಟಕ ತಿದ್ದುಪಡಿ) ವಿಧೇಯಕ-2024’ಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿತು.

ಈ ವಿಧೇಯಕವನ್ನು ಮಂಡನೆ ಮಾಡಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನೋಂದಣಿ ಪ್ರಕ್ರಿಯೆಯಲ್ಲಿ ನಾಗರೀಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ಈ ವಿಧೇಯಕ ಮಂಡನೆ ಮಾಡಲಾಗಿದೆ ಎಂದರು.

ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಹಿಂದೆ ಉಪ ನೋಂದಣಾಧಿಕಾರಿ ಕಚೇರಿಗೆ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಹೀಗಾಗಿ ಸರಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಂತಹ ನಂಬಲಾರ್ಹ ಮೂಲಗಳ ಸಹಾಯದಿಂದ ನಾಗರೀಕರು ತಾಂತ್ರಿಕವಾಗಿಯೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಹೊಸ ಮಾದರಿ ಈಗಾಗಲೆ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿದ್ದು, ಕರ್ನಾಟಕದಲ್ಲೂ ಜನರಿಗೆ ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದೆ ಎಂದು ಕೃಷ್ಣ ಬೈರೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಪೇಪರ್ ಖಾತಾ ನೋಂದಣಿಗೆ ತಡೆ: ನೋಂದಣಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಹಣ ಸೋರಿಕೆಯನ್ನು ತಡೆಯುವ ಸಲುವಾಗಿ ಪೇಪರ್ ಖಾತಾ ನೋಂದಣಿಗೆ ತಡೆಯೊಡ್ಡಲು ವಿಧೇಯಕದಲ್ಲಿ ತಿದ್ದುಪಡಿ ತರಲಾಗಿದೆ. ನಗರ ಭಾಗದಲ್ಲಿ ಪೇಪರ್ ಖಾತಾ ಮೂಲಕವೂ ನೋಂದಣಿ ನಡೆಸಲಾಗುತ್ತಿದೆ. ಅನೇಕ ಪ್ರಕರಣಗಳಲ್ಲಿ ನಕಲಿ ಪೇಪರ್ ಖಾತಾ ಬಳಸಿ ನೋಂದಣಿ ಮಾಡುತ್ತಿರುವುದು ತಿಳಿದುಬಂದಿದೆ ಎಂದು ಅವರು ಹೇಳಿದರು.

ಅಲ್ಲದೆ, ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೆವಿನ್ಯೂ ಲೇಔಟ್‍ಗಳಲ್ಲಿ ಮೂಲ ಮಾರ್ಗಸೂಚಿ ದರವನ್ನೇ ಇಳಿಸಿ ನೋಂದಣಿ ಮಾಡಲಾಗಿತ್ತು. ಪರಿಣಾಮ ಸರಕಾರಕ್ಕೆ 400 ಕೋಟಿ ರೂ. ನಷ್ಟ ಉಂಟಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಿದ್ದರಾಮಯ್ಯ 28 ಜನ ಉಪನೋಂದಣಾಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶಿಸಿದ್ದರು ಎಂದು ಕೃಷ್ಣ ಬೈರೇಗೌಡ ಹೇಳಿದರು.

ಆದರೆ, ವಿಚಾರಣೆ ನಡೆಸಿದ್ದ ಸಮಿತಿ, ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ನಿಯಮ ಉಲ್ಲಂಘನೆ ನಡೆದಿರುವುದು ಕಂಡುಬಂದಿಲ್ಲ ಎಂದು ವರದಿ ನೀಡಿದ್ದರು. ಪರಿಣಾಮ ಎಲ್ಲ 28 ಜನ ಉಪ ನೋಂದಣಾಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಲಾಗಿತ್ತು ಎಂದು ಅವರು ವಿಷಾದಿಸಿದರು.

ಇಂತಹ ಪ್ರಕರಣಗಳಲ್ಲಿ ಉಪ ನೋಂದಣಾಧಿಕಾರಿಯನ್ನು ಅಮಾನತು ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಏಕೆಂದರೆ ಅವರು ಒಂದೇ ದಿನದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಾರೆ. ಹೀಗಾಗಿ ಸಮಸ್ಯೆಯ ಮೂಲವನ್ನು ಹುಡುಕಿ ಅದಕ್ಕೆ ಚಿಕಿತ್ಸೆ ನೀಡಬೇಕಿದೆ. ಇದೇ ಕಾರಣಕ್ಕೆ ವಿಧೇಯಕದಲ್ಲಿ ಮತ್ತೊಂದು ತಿದ್ದುಪಡಿಯನ್ನು ತರಲಾಗಿದೆ ಎಂದು ಅವರು ಹೇಳಿದರು.

ಇನ್ನು ಮುಂದೆ ಇ-ಆಸ್ತಿ ಮೂಲಕ ಖಾತೆ ಆಗಿದ್ದರೆ ಮಾತ್ರ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೌಸಿಂಗ್ ಬೋರ್ಡ್ ಹಾಗೂ ಕಾವೇರಿ ಡೇಟಾಬೇಸ್‍ನಿಂದ ಅಸಲಿ ಖಾತಾ ಪರಿಶೀಲನೆ ನಡೆಸಿದ ನಂತರವೇ ನೋಂದಣಿ ಮುಂದುವರೆಯಲಿದೆ. ಆ ಮೂಲಕ ಇ-ಖಾತಾವನ್ನು ನೀಡಲಾಗುವುದು. ಇಂತಹ ಕ್ರಮಗಳಿಂದ ಅಕ್ರಮಗಳಿಗೂ ತಡೆಯೊಡ್ಡಿದಂತಾಗುತ್ತದೆ ಎಂದು ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ಈ ವಿಧೇಯಕಕ್ಕೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಸದಸ್ಯರಾದ ಬಸವರಾಜ ಬೊಮ್ಮಾಯಿ, ಎಸ್.ಆರ್.ವಿಶ್ವನಾಥ್ ಸೇರಿದಂತೆ ಇನ್ನಿತರರು ಮೆಚ್ಚುಗೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X