Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕಾವೇರಿ ನೀರು ಹಂಚಿಕೆ’ ವಿಚಾರದಲ್ಲಿ...

‘ಕಾವೇರಿ ನೀರು ಹಂಚಿಕೆ’ ವಿಚಾರದಲ್ಲಿ ರೈತರ ಹಿತ ಕಾಪಾಡಿ: ಸಿಎಂ ಸಿದ್ದರಾಮಯ್ಯಗೆ ಬೊಮ್ಮಾಯಿ ಪತ್ರ

ವಾರ್ತಾಭಾರತಿವಾರ್ತಾಭಾರತಿ14 Aug 2023 11:24 PM IST
share
‘ಕಾವೇರಿ ನೀರು ಹಂಚಿಕೆ’ ವಿಚಾರದಲ್ಲಿ ರೈತರ ಹಿತ ಕಾಪಾಡಿ: ಸಿಎಂ ಸಿದ್ದರಾಮಯ್ಯಗೆ ಬೊಮ್ಮಾಯಿ ಪತ್ರ

ಬೆಂಗಳೂರು, ಆ.14: ತಮಿಳುನಾಡು ಸರಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದೆ. ಅಲ್ಲದೆ, ನೀರಿಗಾಗಿ ಸುಪ್ರಿಂಕೋರ್ಟ್‍ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನೋಡಿದ್ದೇವೆ. ಆದುದರಿಂದ ರಾಜ್ಯದ ರೈತರ ಹಿತ ಕಾಪಾಡುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಸೋಮವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಅವರು, ರಾಜ್ಯದ ನಾಲ್ಕು ಜಲಾಶಯಗಳಲ್ಲಿ ಜೂ.1ರಂದು ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲ್ಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ ಆ.6ರಂದು 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ಈ ವರ್ಷ 83.831ಟಿಎಂಸಿ ನೀರು ಬಂದಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲುಡಿಟಿ ಪಕ್ರಾರ ಬೆಳೆಯಬೇಕು ಹಾಗೂ 32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು ಆ.7ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು ಸಿಡಬ್ಲುಡಿಟಿ ಆದೇಶದ ಎರಡು ಪಟ್ಟು ಹೆಚ್ಚಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೆ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲುಎಂಎ ದಲ್ಲಿ ಪ್ರತಿಭಟಿಸದೆ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈಗಿರುವ ನಮ್ಮ ನಾಲ್ಕು ಜಲಾಶಯಗಳ ನಿರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಕರೀಫ್ ಬೆಳೆಗಳಿಗೆ ನಿರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನ್ಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ಹಾಗು ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X